ಬೆಂಗಳೂರು: ಕಳೆದ ಮೂರು-ನಾಲ್ಕು ದಿನಗಳಿಂದ ಹೆಚ್ಚಾಗಿದ್ದ ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಲ್ಲಿದೆ ಇಂದಿನ ಚಿನ್ನದ ಬೆಲೆ ಎಷ್ಟಿದೆ ಎಂಬ  ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 2 ದಿನಗಳ ಹಿಂದೆ 45,830 ರೂ. ಇದ್ದುದು ಇಂದು 45,100 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 42,010 ರೂ. ಇದ್ದುದು ಇಂದು 41,340 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, 2 ದಿನಗಳ ಹಿಂದೆ 65,700 ರೂ. ಇದ್ದ ಬೆಳ್ಳಿ ಬೆಲೆ ಇಂದು 63,100ಕ್ಕೆ ಕುಸಿದಿದೆ.


COMMERCIAL BREAK
SCROLL TO CONTINUE READING

ಚಿನ್ನದ ಬೆಲೆ(Gold Rate) ಇಂದು ಕಡಿಮೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2 ದಿನಗಳ ಹಿಂದೆ 43,910 ರೂ. ಇದ್ದುದು 43,630 ರೂ.ಗೆ ಕುಸಿದಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 44,920 ರೂ. ಇದ್ದುದು ಇಂದು 44,630 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 45,100 ರೂ. ಆಗಿದೆ.


PAN- Aadhaar Link Today : ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಲಿಂಕ್ ಆಗಿದೆಯಾ ಹೀಗೆ ಚೆಕ್ ಮಾಡಿ


ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನ(Carat Gold)ಕ್ಕೆ ಇಂದು 41,340 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 48,000 ರೂ. ದಾಟಿದೆ.


ಏಪ್ರಿಲ್ 1 ರಿಂದ Car, Bike, TV, AC ಸೇರಿದಂತೆ ಈ ವಸ್ತುಗಳು ದುಬಾರಿ


ಭಾರತದಲ್ಲಿ ಬೆಳ್ಳಿ ಬೆಲೆ(Siliver Gold) ಮತ್ತೆ ಇಳಿಕೆಯಾಗಿದ್ದು, 2 ದಿನಗಳ ಹಿಂದೆ 65,700 ರೂ. ಇದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 63,100 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,500 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ. ದಾಟಿದೆ.


Indian Railways IRCTC Latest News : ರೈಲು ಪ್ರಯಾಣಿಕರಿಗೆ ಇನ್ನು ಮುಂದೆ ಈ ಸೌಲಭ್ಯ ಸಿಗುವುದಿಲ್ಲ


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.