Gold Price Today Down, August 31: ಸತತ ಮೂರು ದಿನಗಳ ಏರಿಕೆಯ ನಂತರ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬರುತ್ತಿದೆ. ಇಂದು ಚಿನ್ನ ಮತ್ತು ಬೆಳ್ಳಿ ಎರಡೂ ಅಗ್ಗವಾಗಿವೆ. ಚಿನ್ನದ ಬೆಲೆ 59,500 ಕ್ಕಿಂತ ಕಡಿಮೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಸಾಕಷ್ಟು ಏರಿಳಿತಗಳಾಗಿವೆ.
MCXನಲ್ಲಿ ಚಿನ್ನ ಮತ್ತು ಬೆಳ್ಳಿ ಅಗ್ಗ :
ಇಂದು, ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 0.02 ಶೇಕಡಾ ಇಳಿಕೆಯೊಂದಿಗೆ 59,466 ರೂಪಾಯಿಗಳ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಅದೇ ರೀತಿ ಬೆಳ್ಳಿಯ ಬೆಲೆಯು ಶೇಕಡಾ 0.30 ರಷ್ಟು ಕುಸಿದು ಪ್ರತಿ ಕೆಜಿಗೆ 76,051 ರೂ. ಆಗಿದೆ.
ಇದನ್ನೂ ಓದಿ : ಸೆಪ್ಟೆಂಬರ್ ತಿಂಗಳಲ್ಲಿ 16 ದಿನ ಬ್ಯಾಂಕ್ ಕ್ಲೋಸ್..! ರಾಜ್ಯವಾರು ರಜೆ ಪಟ್ಟಿ ಇಲ್ಲಿದೆ
22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟು? :
22 ಕ್ಯಾರೆಟ್ ಚಿನ್ನದ ದರಗಳನ್ನು ನೋಡುವುದಾದರೆ ದೇಶದ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 55,150 ರೂ. ಚೆನ್ನೈನಲ್ಲಿ 55,300 ಮತ್ತು ಮುಂಬೈನಲ್ಲಿ 10 ಗ್ರಾಂಗೆ 55,000 ರೂ. ಆಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಪರಿಸ್ಥಿತಿ ಏನು? :
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಶೇಕಡಾ 0.14 ರಷ್ಟು ಏರಿಕೆಯೊಂದಿಗೆ ಚಿನ್ನವು ಪ್ರತಿ ಔನ್ಸ್ 1,944.70 ಡಾಲರ್ ಮಟ್ಟದಲ್ಲಿದೆ. ಅದೇ ಸಮಯದಲ್ಲಿ, ಬೆಳ್ಳಿಯ ಬೆಲೆಗಳಲ್ಲಿ ಶೇಕಡಾ 0.25 ರಷ್ಟು ಕುಸಿತ ಕಂಡು ಬಂದಿದೆ. ಬೆಳ್ಳಿಯು ಜಾಗತಿಕ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್ ಗೆ 24.56 ಡಾಲರ್ ಮಟ್ಟದಲ್ಲಿದೆ.
ಇದನ್ನೂ ಓದಿ : ಹಿರಿಯ ನಾಗರಿಕರಿಗಾಗಿ IRCTC ವಿಶೇಷ ಪ್ಯಾಕೇಜ್ ! ತಿರುಪತಿ ದರ್ಶನದೊಂದಿಗೆ ಅನೇಕ ದೇವಸ್ಥಾನಗಳಿಗೂ ಭೇಟಿ
ಆ್ಯಪ್‌ನಿಂದ ಶುದ್ಧತೆಯನ್ನು ಪರಿಶೀಲಿಸಿ :
ನೀವು ಕೂಡ ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಬಳಸಬಹುದು. 'ಬಿಐಎಸ್ ಕೇರ್ ಆ್ಯಪ್' ಮೂಲಕ ನೀವು ಚಿನ್ನದ ಶುದ್ಧತೆಯನ್ನು ಪರಿಶೀಲಿಸಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.