)
DA Hike: ಅಸ್ಸಾಂನ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರವು ಅವರ ತುಟ್ಟಿ ಭತ್ಯೆಯನ್ನು ಶೇ.2ಕ್ಕಿಂತ ಹೆಚ್ಚು ಹೆಚ್ಚಿಸಿದೆ. ಹೊಸ ತುಟ್ಟಿ ಭತ್ಯೆ ಜನವರಿ 1, 2025ರಿಂದ ಅನ್ವಯವಾಗುತ್ತದೆ. ವರದಿಯ ಪ್ರಕಾರ, ಅಸ್ಸಾಂ ಸಚಿವ ಸಂಪುಟ ಇದನ್ನು ಅನುಮೋದಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಬಿಹು ಹಬ್ಬಕ್ಕೂ ಮುನ್ನ ಸಂಬಳದೊಂದಿಗೆ 2% ಹೆಚ್ಚುವರಿ ಡಿಎ ಸೇರಿಸುತ್ತೇವೆ ಮತ್ತು ಬಾಕಿ ಹಣವನ್ನು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನೀಡಲಾಗುವುದು ಅಂತಾ ಹೇಳಿದ್ದಾರೆ. ರಾಜ್ಯದ ಲಕ್ಷಾಂತರ ಉದ್ಯೋಗಿಗಳು ಮತ್ತು ಪಿಂಚಣಿದಾರರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ.
ತುಟ್ಟಿ ಭತ್ಯೆ ಶೇ.55ಕ್ಕೆ ಏರಿಕೆ
ಇದಕ್ಕೂ ಮೊದಲು ರಾಜ್ಯ ಸರ್ಕಾರವು ಅಕ್ಟೋಬರ್ 2024ರಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿತ್ತು. ಶುಕ್ರವಾರದ ಹೆಚ್ಚಳದ ನಂತರ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆ ಶೇ.53ರಿಂದ ಶೇ.55ಕ್ಕೆ ಹೆಚ್ಚಾಗುತ್ತದೆ. ಮಾರ್ಚ್ 28ರಂದು ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಿದ ನಂತರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಡಿಎ ಕೂಡ ಈಗಿರುವ 53% ರಿಂದ 55%ಕ್ಕೆ ಏರಿಕೆಯಾಗಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದ ನಿಮ್ಮ ಸಂಬಳದಲ್ಲಿನ ಹೆಚ್ಚಳವು ನಿಮ್ಮ ಮೂಲ ವೇತನವನ್ನು ಅವಲಂಬಿಸಿರುತ್ತದೆ. ನಿಮ್ಮ ಮೂಲ ವೇತನ ಹೆಚ್ಚಾದಷ್ಟೂ, ನಿಮ್ಮ ಸಂಬಳದಲ್ಲಿಯೂ ಹೆಚ್ಚಳವಾಗುತ್ತದೆ.
ಸಾಲ ಖಾತರಿ ನಿಧಿ ಯೋಜನೆಗೆ ಚಾಲನೆ
ರೈತರಿಗೆ ಉತ್ತಮ ಆರ್ಥಿಕ ನೆರವು ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸಲು ನಾವು ರೈತ ಉತ್ಪಾದಕ ಸಂಸ್ಥೆಗಳಿಗೆ (FPO) ಸಾಲ ಖಾತರಿ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ನಮ್ಮ ರೈತರಿಗೆ ಹೆಚ್ಚು ಸುಸ್ಥಿರ ಮತ್ತು ಸಮೃದ್ಧ ಭವಿಷ್ಯವನ್ನು ನಿರ್ಮಿಸಲು FPOಗಳನ್ನು ಬಲಪಡಿಸುವುದು ಮುಖ್ಯವಾಗಿದೆ. ಇತ್ತೀಚೆಗೆ ಸಾರ್ವಜನಿಕರಿಗೆ ಮುಕ್ತಗೊಳಿಸಲಾದ ಕಮರ್ಬಂಧ ರೈಲ್ವೆ ಮೇಲ್ಸೇತುವೆಯು, ಜೋರ್ಹತ್ನಲ್ಲಿ ನಮ್ಮ ಡಬಲ್ ಎಂಜಿನ್ ಸರ್ಕಾರವು ನಿರ್ಮಿಸಿದ ನಾಲ್ಕನೇ ಮೇಲ್ಸೇತುವೆಯಾಗಿದೆ. ಈ ಸೇತುವೆ ಸ್ಥಳೀಯ ಜನರ ಜೀವನವನ್ನು ಹೇಗೆ ಸುಲಭಗೊಳಿಸುತ್ತದೆ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.