ನವದೆಹಲಿ : ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ  ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಾಲ್ಕೈದು ದಿನಗಳ ಹಿಂದಷ್ಟೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು  ಅನುಮೋದನೆ ನೀಡಿದೆ.ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ.


ಇದನ್ನೂ ಓದಿ : ಹೆಣ್ಣು ಮಕ್ಕಳ ಪೋಷಕರೇ ತಿಳಿದುಕೊಳ್ಳಿ !ಅಕ್ಟೋಬರ್ 1 ರಿಂದ ಸುಕನ್ಯ ಸಮೃದ್ದಿಗೆ ಹೊಸ ನಿಯಮ !ಶೂನ್ಯವಾಗುವುದು ಬಡ್ಡಿ


"ಹೆಸರು ಮತ್ತು ಸೂರ್ಯಕಾಂತಿ"ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ "ಉದ್ದು ಮತ್ತು ಸೋಯಾಬೀನ್"ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.


ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.


ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ : Bank Holidays in September 2024: ಗೌರಿ-ಗಣೇಶ ಹಬ್ಬ ಸೇರಿ ಸೆಪ್ಟೆಂಬರ್‌ನಲ್ಲಿ 15 ದಿನ ಬ್ಯಾಂಕ್‌ಗಳಿಗೆ ರಜೆ


ಉದ್ದಿನ ಬೇಳೆಗೆ 7400 ರೂ. ಮತ್ತು ಸೋಯಾಬಿನ್ ಗೆ 4892 ರೂ.ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ.ಕಳೆದ ವರ್ಷ 6950 ರೂ. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರೂ. ಹೆಚ್ಚಳ ಕಂಡಿದೆ. 4600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರೂ. ಚ್ಚಳವಾಗಿದೆ.


ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ:
ರಾಜ್ಯ ಸರ್ಕಾರ ತಕ್ಷಣವೇ ರಾಜ್ಯಾದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.