ಪಿಎಂ ಕಿಸಾನ್ ಇ-ಕೆವೈಸಿ : ರೈತರಿಗಾಗಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ಗುಡ್ ನ್ಯೂಸ್ ಇದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇ-ಕೆವೈಸಿ ಪೂರ್ಣಗೊಳಿಸದ ರೈತರಿಗೆ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ವಿಶೇಷ ಅಭಿಯಾನದಡಿ ರೈತರ ಇ-ಕೆವೈಸಿಯನ್ನು ಪೂರ್ಣಗೊಳಿಸಲಾಗುತ್ತಿದೆ.
ವಾಸ್ತವವಾಗಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12 ನೇ ಕಂತಿಗಾಗಿ 10 ಕೋಟಿಗೂ ಹೆಚ್ಚು ರೈತರು ಕಾಯುತ್ತಿದ್ದಾರೆ. ಈ ಬಾರಿ ಇನ್ನೂ ಇ-ಕೆವೈಸಿ ಪೂರ್ಣಗೊಳಿಸದ ರೈತರ ಖಾತೆಗೆ ಈ ಬಾರಿ ಹಣ ವರ್ಗಾವಣೆಯಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇಂದು ಮತ್ತು ನಾಳೆ ವಿಶೇಷ ಅಭಿಯಾನ ನಡೆಯಲಿದೆ:
ಜುಲೈ 31 ರ ನಂತರವೂ ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಕಡಿಮೆ ಸಂಖ್ಯೆಯ ರೈತರು ಇ-ಕೆವೈಸಿ ಮಾಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಇನ್ನೂ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದ ರೈತರಿಗಾಗಿ ಆಗಸ್ಟ್ 10 ಮತ್ತು 11 ರಂದು ವಿಶೇಷ ಅಭಿಯಾನವನ್ನು ನಡೆಸಲಾಗುವುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಇನ್ನೂ ಸಹ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಈ ಕೆಲಸವನ್ನು ಪೂರ್ಣಗೊಳಿಸಬಹುದು.
ಇದನ್ನೂ ಓದಿ- ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಬಿಎಂಟಿಸಿ ಸಿದ್ಧತೆ
ಇ-ಕೆವೈಸಿ ಅಭಿಯಾನವನ್ನು ಆಗಸ್ಟ್ 16 ಮತ್ತು 23 ರೊಳಗೆ ಪೂರ್ಣಗೊಳಿಸುವ ಉದ್ದೇಶಕ್ಕಾಗಿ ರೈತರ ಪಟ್ಟಿಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂಟಿಸಲಾಗಿದೆ. ಈ ಬಾರಿ ಆಗಸ್ಟ್ 10 ಮತ್ತು ಆಗಸ್ಟ್ 11ರಂದು ವಿಶೇಷ ಅಭಿಯಾನ ನಡೆಸುವ ಮೂಲಕ ಇ-ಕೆವೈಸಿ ಪೂರ್ಣಗೊಳಿಸಲಾಗುವುದು. ಇದಾದ ಬಳಿಕ ಸರ್ಕಾರದ ಆದೇಶದ ಮೇರೆಗೆ ಆಗಸ್ಟ್ 16ರಿಂದ 23ರೊಳಗೆ ಕೆವೈಸಿಯಿಂದ ಹೊರಗುಳಿದ ರೈತರನ್ನು ಸಂಪರ್ಕಿಸಲಾಗುವುದು.
ಆಗಸ್ಟ್‌ನಿಂದ ನವೆಂಬರ್‌ವರೆಗೆ ಮುಂದಿನ ಕಂತಿನ ಹಣ ಬಿಡುಗಡೆ ಸಾಧ್ಯತೆ:
ರೈತರಿಗೆ ಆಗಸ್ಟ್‌ನಿಂದ ನವೆಂಬರ್‌ವರೆಗೆ ಪಿಎಂ ಕಿಸಾನ್‌ನ 12ನೇ ಕಂತಿಗೆ ಹಣ ಸಿಗಲಿದೆ. ಕೆಲವು ಅರ್ಹರಲ್ಲದ ರೈತರು ಸಹ ಈ ಯೋಜನೆಯ ಪ್ರಯೋಜನ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರ ನಂತರ, ಇ-ಕೆವೈಸಿ ಮಾಡುವುದು ಅನಿವಾರ್ಯವಾಯಿತು. ಇ-ಕೆವೈಸಿ ಇಲ್ಲದಿದ್ದರೆ ಈ ಬಾರಿ 12ನೇ ಕಂತು ಕೈತಪ್ಪುವ ಸಾಧ್ಯತೆ ಇದೆ.
ಇದನ್ನೂ ಓದಿ- ಲಾಲ್‌ಬಾಗ್‌ನಲ್ಲಿ ಅಪ್ಪು ಸಂಸ್ಮರಣಾ ಫಲಪುಷ್ಪ ಪ್ರದರ್ಶನ- ಎಲ್ಲರ ಪ್ರೀತಿಗೆ ಸದಾ ಚಿರಋಣಿ ಎಂದ ಅಶ್ವಿನಿ
ಇ- ಕೆವೈಸಿಯನ್ನು ಪೂರ್ಣಗೊಳಿಸಲು ಸುಲಭ ವಿಧಾನ:
>> ಇ-ಕೆವೈಸಿಯನ್ನು ಪೂರ್ಣಗೊಳಿಸಲು ಮೊದಲು pmkisan.gov.in ನಲ್ಲಿ ಪಿಎಂ ಕಿಸಾನ್ ಯೋಜನೆಯ ವೆಬ್‌ಸೈಟ್‌ಗೆ ಹೋಗಿ.
>> ಇಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಇ-ಕೆವೈಸಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
>> ಹೊಸ ವೆಬ್ ಪುಟದಲ್ಲಿ, ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಸರ್ಚ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ.
>> ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.
ಒಟಿಪಿ ನಮೂದಿಸಿ ನಂತರ ಸಲ್ಲಿಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
>> ಬಳಿಕ ನಿಮ್ಮ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.