ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪಡಿತರ ತೂಕದಲ್ಲಿನ ವಂಚನೆಗೆ ಕಡಿವಾಣ ಹಾಕಲು ಸರ್ಕಾರದ ನ್ಯೂ ಪ್ಲಾನ್
ಮೋದಿ ಸರ್ಕಾರ ತರಲು ಹೊರಟಿರುವ ಹೊಸ ಯೋಜನೆಯ ಪ್ರಕಾರ, ದೇಶದ ಯಾವುದೇ ಪಡಿತರ ಚೀಟಿದಾರರೂ ಸಹ ಎಂತಹದ್ದೇ ಪರಿಸ್ಥಿತಿಯಲ್ಲಿ ಕಡಿಮೆ ಪಡಿತರವನ್ನು ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಆನ್ ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್ ) ಸಾಧನಗಳನ್ನು ಕಡ್ಡಾಯಗೊಳಿಸಲು ಮುಂದಾಗಿದೆ.
ಬೆಂಗಳೂರು: ನೀವು ಸಹ ಪಡಿತರ ಚೀಟಿ ಫಲಾನುಭವಿಗಳಾಗಿದ್ದರೆ ಮತ್ತು ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭವನ್ನು ಪಡೆಯುತ್ತಿದ್ದರೆ, ನಿಮಗೆ ಗುಡ್ ನ್ಯೂಸ್ ಒಂದಿದೆ. 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಬಳಿಕ ಇದೀಗ ಮೋದಿ ಸರ್ಕಾರ ಪಡಿತರ ತೂಕದಲ್ಲಿನ ವಂಚನೆಗೆ ಕಡಿವಾಣ ಹಾಕಲು ಹೊಸ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ.
ಮೋದಿ ಸರ್ಕಾರ ತರಲು ಹೊರಟಿರುವ ಹೊಸ ಯೋಜನೆಯ ಪ್ರಕಾರ, ದೇಶದ ಯಾವುದೇ ಪಡಿತರ ಚೀಟಿದಾರರೂ ಸಹ ಎಂತಹದ್ದೇ ಪರಿಸ್ಥಿತಿಯಲ್ಲಿ ಕಡಿಮೆ ಪಡಿತರವನ್ನು ಪಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಆನ್ ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್ ) ಸಾಧನಗಳನ್ನು ಕಡ್ಡಾಯಗೊಳಿಸಲು ಮುಂದಾಗಿದೆ.
ಇದನ್ನೂ ಓದಿ- Ration Card : ನಿಮ್ಮ ವಿತರಕರು ಕಡಿಮೆ ಪಡಿತರ ನೀಡುತ್ತಿದ್ದಾರೆಯೇ? ಇಲ್ಲಿ ದೂರು ನೀಡಿ
ಪಡಿತರ ತೂಕದಲ್ಲಿನ ವಂಚನೆಗೆ ಕಡಿವಾಣ ಹಾಕಲು ಸರ್ಕಾರದ ನ್ಯೂ ಪ್ಲಾನ್:
ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನಡಿಯಲ್ಲಿ, ರೇಷನ್ ಕಾರ್ಡ್ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಇಪಿಒಎಸ್) ಸಾಧನಗಳನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಈ ನಿಯಮದ ಅನ್ವಯ ದೇಶದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಕರು ಎಲೆಕ್ಟ್ರಾನಿಕ್ ಮಾಪಕಗಳನ್ನು ಅಂದರೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (ಪಿಒಎಸ್ ) ಅನ್ನು ಹೊಂದಿರುವುದು ಕಡ್ಡಾಯವಾಗಿದೆ.
ಇದನ್ನೂ ಓದಿ- ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರನ್ನು ಸೇರಿಸಲು ಇಲ್ಲಿದೆ ಹಂತ-ಹಂತದ ಪ್ರಕ್ರಿಯೆ
ಏನಿದು ಹೊಸ ನಿಯಮ?
ಸರ್ಕಾರದಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಈ ತಿದ್ದುಪಡಿಯು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಟಿಪಿಡಿಎಸ್) ಕಾರ್ಯಾಚರಣೆಗಳ ಪಾರದರ್ಶಕತೆಯನ್ನು ಸುಧಾರಿಸುವ ಮೂಲಕ ಕಾಯಿದೆಯ ಸೆಕ್ಷನ್ 12 ರ ಅಡಿಯಲ್ಲಿ ತೂಕದ ಆಹಾರ ಧಾನ್ಯವನ್ನು ಸುಧಾರಿಸುವ ಪ್ರಕ್ರಿಯೆಯನ್ನು ಮುಂದುವರಿಸುವ ಪ್ರಯತ್ನವಾಗಿದೆ. ಇದರ ಅನ್ವಯ ಭವಿಷ್ಯದಲ್ಲಿ ದೇಶದ ಪ್ರತಿ ನ್ಯಾಯಬೆಲೆ ಅಂಗಡಿಗಳು ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ ಅಂದರೆ ಪಿಒಎಸ್ ಸಾಧನಗಳೊಂದಿಗೆ ಸಂಪರ್ಕ ಹೊಂದಲಿವೆ. ಅರ್ಥಾತ್, ಇನ್ನು ಮುಂದೆ ಫಲಾನುಭವಿಗಳು ಯಾವುದೇ ಸಂದರ್ಭದಲ್ಲೂ ಕಡಿಮೆ ಪಡಿತರವನ್ನು ಪಡೆಯಬಾರದು ಎಂಬ ಉದ್ದೇಶದಿಂದ ಈ ನಿಯಮವನ್ನು ಜಾರಿಗೆ ತರಲಾಗುತ್ತಿದೆ. ಇದರ ವಿಶೇಷತೆ ಎಂದರೆ ಯಾವುದೇ ನೆಟ್‌ವರ್ಕ್ ಇಲ್ಲದಿದ್ದರೂ ಸಹ ಈ ಯಂತ್ರಗಳು ಆಫ್‌ಲೈನ್‌ನಲ್ಲಿ ಮತ್ತು ಆನ್‌ಲೈನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.