Ration Card: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಉಚಿತ ಪಡಿತರ ಕುರಿತು ಸರ್ಕಾರದಿಂದ ಭರ್ಜರಿ ಘೋಷಣೆ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯಡಿ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ 2022ರವರೆಗೆ ವಿಸ್ತರಿಸಲಾಗಿದೆ.

Written by - Puttaraj K Alur | Last Updated : Sep 28, 2022, 04:18 PM IST
  • ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಮತ್ತೊಮ್ಮೆ ಭರ್ಜರಿ ಸಿಹಿಸುದ್ದಿ ದೊರೆತಿದೆ
  • ಇನ್ನೂ 3 ತಿಂಗಳವರೆಗೆ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಣೆ
  • ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
Ration Card: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಉಚಿತ ಪಡಿತರ ಕುರಿತು ಸರ್ಕಾರದಿಂದ ಭರ್ಜರಿ ಘೋಷಣೆ  title=
PMGKAY ಯೋಜನೆ ವಿಸ್ತರಣೆ

ನವದೆಹಲಿ: ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಮತ್ತೊಮ್ಮೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PMGKAY)ಯನ್ನು ಇನ್ನೂ 3 ತಿಂಗಳವರೆಗೆ ವಿಸ್ತರಿಸಲಾಗಿದೆ. ಈಗ ಈ ಯೋಜನೆಯಡಿ ಪಡಿತರ ಚೀಟಿದಾರರು ಡಿಸೆಂಬರ್‌ವರೆಗೆ ಸರ್ಕಾರದಿಂದ ಉಚಿತ ಪಡಿತರ ಪ್ರಯೋಜನ ಪಡೆಯಲಿದ್ದಾರೆ.

2020ರ ಏಪ್ರಿಲ್‍ನಲ್ಲಿ ಯೋಜನೆ ಪ್ರಾರಂಭ

ಕೇಂದ್ರ ಸರ್ಕಾರವು ಏಪ್ರಿಲ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಈ ಯೋಜನೆ ಪ್ರಾರಂಭಿಸಿತು. ನಂತರ ಮಾರ್ಚ್ 2022ರಲ್ಲಿ 6 ತಿಂಗಳವರೆಗೆ ಅಂದರೆ ಸೆಪ್ಟೆಂಬರ್‍ವರೆಗೆ ವಿಸ್ತರಿಸಲಾಯಿತು. ಇದೀಗ ಸರ್ಕಾರ ಮತ್ತೊಮ್ಮೆ 2022ರ ಡಿಸೆಂಬರ್‌ವರೆಗೆ 3 ತಿಂಗಳ ಕಾಲ ವಿಸ್ತರಿಸಿದೆ. ಆದರೆ, ಮಾಧ್ಯಮ ವರದಿಯಲ್ಲಿ 6 ತಿಂಗಳು ವಿಸ್ತರಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್.! ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ

80 ಕೋಟಿ ಜನರಿಗೆ ಪ್ರಯೋಜನ

ಕೇಂದ್ರ ಸರ್ಕಾರ ಈ ಯೋಜನೆ ಬಗ್ಗೆ ಮಾಹಿತಿ ನೀಡಿದ ಬಳಿಕ ಇದು ನೇರವಾಗಿ 80 ಕೋಟಿ ಜನರಿಗೆ ಪ್ರಯೋಜನ ನೀಡುತ್ತದೆ. ಸರ್ಕಾರದಿಂದ ಈ ಯೋಜನೆ ಹೆಚ್ಚಿಸುವ ಸುಳಿವು ಈಗಾಗಲೇ ನೀಡಲಾಗಿತ್ತು. ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿಯೂ ಈ ಬಗ್ಗೆ ಸೂಚಿಸಿದ್ದರು. ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PMGKAY) ವಿಶ್ವದ ಅತಿದೊಡ್ಡ ಆಹಾರ ಯೋಜನೆಯಾಗಿದೆ.

ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸರ್ಕಾರವು ಬರೋಬ್ಬರಿ 3.40 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಈ ಕೇಂದ್ರ ಯೋಜನೆಯಡಿ ದೇಶದ ಎಲ್ಲಾ ಬಡ ಪಡಿತರ ಚೀಟಿದಾರರ ಕುಟುಂಬಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರವನ್ನು ನೀಡಲಾಗುತ್ತದೆ. ಆರಂಭದಲ್ಲಿ 1 ಕುಟುಂಬಕ್ಕೆ 1KG ಬೇಳೆ ಮತ್ತು ಅಗತ್ಯ ಮಸಾಲೆಗಳ ಕಿಟ್ ನೀಡಲಾಗಿತ್ತು.

ಇದನ್ನೂ ಓದಿ: TATA EV: ದೇಶದ ಅತ್ಯಂತ ಅಗ್ಗದ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದ ಟಾಟಾ

ಇದಲ್ಲದೇ ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರದಿಂದ ಸುಮಾರು 11 ಲಕ್ಷ ಸರ್ಕಾರಿ ನೌಕರರು ಪ್ರಯೋಜನ ಪಡೆಯಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News