Budget 2023 Expectations : ಹೊಸ ವರ್ಷದ ಆರಂಭವಾಗುತ್ತಿದ್ದಂತೆಯೇ ಮುಂಬರುವ ಬಜೆಟ್‌ನ ಬಗ್ಗೆಯೂ ಚರ್ಚೆ ಪ್ರಾರಂಭವಾಗಿದೆ. ಈ ಬಾರಿಯ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿ ಏಪ್ರಿಲ್ 6ರವರೆಗೆ ನಡೆಯಲಿದೆ. ಫೆಬ್ರವರಿ 1, 2023 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್ ಮಂಡಿಸುವ ನಿರೀಕ್ಷೆಯಿದೆ. ಆದಾಯ ತೆರಿಗೆ ಪಾವತಿದಾರರು ಈ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿ ತೆರಿಗೆ ಪಾವತಿದಾರರಿಗೆ ಪರಿಹಾರ ನೀಡುವುದರ ಜೊತೆಗೆ ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿಯೂ ಬದಲಾವಣೆಗಳನ್ನು ಮಾಡಲಾಗುವುದು ಎನ್ನುವುದು ವೇತನ ವರ್ಗದ ನಿರೀಕ್ಷೆ.
ಕೈಯಲ್ಲಿ ಹೆಚ್ಚು ಹಣ ಉಳಿಯುವ ನಿರೀಕ್ಷೆ :
ಈ ಬಾರಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬಹುದು ಎನ್ನಲಾಗಿದೆ. ಒಂದು ವೇಳೆ ಹೀಗಾದರೆ, ಜನ ಸಾಮಾನ್ಯರ ಕೈಯ್ಯಲ್ಲಿ ಹೆಚ್ಚಿನ ಹಣ ಉಳಿದಂತಾಗುತ್ತದೆ. ಈ ಹಂತವು ಹೂಡಿಕೆಯನ್ನು ಉತ್ತೇಜಿಸುತ್ತದೆ. ಇದರಿಂದಾಗಿ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ : Millionaire Formula: ಕೋಟ್ಯಾಧೀಶರಾಗಬೇಕೆ? ಹೊಸ ವರ್ಷದ ಮೊದಲ ತಿಂಗಳಿನಿಂದಲೇ ಈ ಪ್ಲಾನ್ ಮಾಡಿ
ಸೂಪರ್ ಸಿನಿಯರ್ ನಾಗರಿಕರಿಗೆ 5 ಲಕ್ಷದವರೆಗೆ ವಿನಾಯಿತಿ :
ಪ್ರಸ್ತುತ 2.5 ಲಕ್ಷದವರೆಗಿನ ಆದಾಯದ ಮೇಲೆ ಯಾವುದೇ ರೀತಿಯ ಆದಾಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. 60 ರಿಂದ 80 ವರ್ಷ ವಯಸ್ಸಿನ ಹಿರಿಯ ನಾಗರಿಕರು ಮೂರು ಲಕ್ಷ ರೂಪಾಯಿಗಳ ಆದಾಯದವರೆಗೆ ಈ ವಿನಾಯಿತಿಯನ್ನು ಪಡೆಯುತ್ತಾರೆ. ಇನ್ನು 80 ವರ್ಷಕ್ಕಿಂತ ಮೇಲ್ಪಟ್ಟ ಸೂಪರ್ ಸೀನಿಯರ್ ನಾಗರಿಕರಿಗೆ 5 ಲಕ್ಷ ರೂ. ವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ.
ನವೆಂಬರ್ 21 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ಪೂರ್ವ ಸಮಾಲೋಚನೆಯನ್ನು ಪ್ರಾರಂಭಿಸಿದ್ದರು. ಈ ವೇಳೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ಹಾಗೂ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆದಿತ್ತು. ಇದಲ್ಲದೇ ಈ ಬಾರಿ 80ಸಿ ಅಡಿಯಲ್ಲಿ ಲಭ್ಯವಿರುವ ಹೂಡಿಕೆಯ ಮಿತಿಯನ್ನು ಕೂಡಾ ಹೆಚ್ಚಿಸಬಹುದು ಎನ್ನಲಾಗಿದೆ.
ಇದನ್ನೂ ಓದಿ : Good News: ಒಂದು ವರ್ಷ ಪಡಿತರ ಚೀಟಿದಾರರಿಗೆ ಉಚಿತ ಪಡಿತರ! NFSA ಅಡಿ ಮೋದಿ ಸರ್ಕಾರ ಆರಂಭಿಸಿದೆ ಈ ಯೋಜನೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.