Gruha Lakshmi Schem: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಮಹಿಳಾ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದಿರುವ ಈ ಯೋಜನೆಯ ಮೂಲಕ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ₹2,000 ರೂ.ಗಳನ್ನು ಜಮಾ ಮಾಡಲಾಗುತ್ತಿದೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗಿತ್ತು.
ಇದುವರೆಗೆ ಒಟ್ಟು 10 ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಜೂನ್, ಜುಲೈ ತಿಂಗಳ ಕಂತಿನ ಹಣ ಬಿಡುಗಡೆಯಾಗಿಲ್ಲ. ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದು, ಶೀಘ್ರವೇ ಎರಡು ತಿಂಗಳ ಒಟ್ಟು ₹4000 ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಯೋಜನೆಯನ್ನು ರಾಜ್ಯದಲ್ಲಿ ಅರ್ಹತೆ ಹೊಂದಿರುವ ಎಲ್ಲಾ ಮಹಿಳೆಯರಿಗೆ ತಲುಪಿಸಬೇಕು ಎನ್ನುವ ಉದ್ದೇಶ ಸರ್ಕಾರದ್ದಾಗಿದೆ. ಅದೇ ರೀತಿ ಸುಮಾರು 1.18 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಆದರಿಗೂ ಎಲ್ಲರಿಗೂ ಈ ಯೋಜನೆಯ ಸೌಲಭ್ಯ ಸಿಗುತ್ತಿಲ್ಲ. ಇದಕ್ಕೆ ಕೆಲವು ತಾಂತ್ರಿಕ ದೋಷಗಳು ಹಾಗೂ ಡಾಕ್ಯುಮೆಂಟ್‌ಗಳಲ್ಲಿ ಇರುವ ತಪ್ಪುಗಳು ಕಾರಣ ಇರಬಹುದೆಂದು ಸರ್ಕಾರ ಮಾಹಿತಿ ನೀಡಿದೆ.
ಇದನ್ನೂ ಓದಿ: ಮೈತ್ರಿ ಪಕ್ಷಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ!
ಜೂನ್ ಮತ್ತು ಜುಲೈ ತಿಂಗಳ ಹಣ ಇನ್ನೂ ಸಹ ಬಿಡುಗಡೆ ಆಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ. ತಮಗೆ ಈ ಯೋಜನೆಯ ಹಣ ಸಿಗುತ್ತಾ? ಅಥವಾ ಇಲ್ಲವಾ? ಎಂದು ತಲೆಕೆಡಿಸಿಕೊಂಡಿದ್ದಾರೆ. ಈ ವೇಳೆ ಮಹಿಳೆಯರು ಸರ್ಕಾರದಿಂದ ಮಾಹಿತಿ ಕೇಳಿದ್ದರು. ಕೆಲವು ಮಜಹಿಜಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಯೋಜನೆಯ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದರು.
ಇದೀಗ ಈ ಯೋಜನೆಯ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಮಹಿಳೆಯರಿಗೆ ಭರವಸೆ ನೀಡಿದ್ದಾರೆ. ಕೊಡಗಿನಲ್ಲಿ ಆಗುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿ ಪರಿಶೀಲನೆ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಅವರು ಮಾತನಾಡಿದ್ದಾರೆ. ಅವರ ಹೇಳಿಕೆ ಪ್ರಕಾರ, ತಾಂತ್ರಿ ಕದೋಷ ಉಂಟಾಗಿರುವ ಕಾರಣ ಜೂನ್ & ಜುಲೈ ತಿಂಗಳ ಹಣ ಬಿಡುಗಡೆಯಾಗುವುದಕ್ಕೆ ತಡವಾಗುತ್ತಿದೆ. ಶೀಘ್ರವೇ ಇದನ್ನು ಸರಿಪಡಿಸಲಿದ್ದು, ಯಾವುದೇ ಮಹಿಳೆಗೂ ಸಹ ಸಮಸ್ಯೆಯಾಗುವುದಿಲ್ಲವೆಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ!
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಿದೆ. ಆದಷ್ಟು ಬೇಗ ಪ್ರತಿಯೊಬ್ಬ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ. ಈ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮಹಿಳೆಯರು ಆತಂಕ ಪಡುವ ಅಗತ್ಯವಿಲ್ಲವೆಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಇನ್ನೆರಡು ದಿನಗಳಲ್ಲಿ ಮಹಿಳೆಯರ ಖಾತೆಗೆ ₹4000 ಜಮಾ ಆಗಲಿದೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.