ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಫ್ರೀ ರೇಷನ್ ಕುರಿತು ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ
Modi Govt on Free Ration: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು (ಸೆಪ್ಟೆಂಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ಯೋಜನೆಯನ್ನು ಡಿಸೆಂಬರ್ 2022 ರವರೆಗೆ ವಿಸ್ತರಿಸಲು ಮೋದಿ ಸರ್ಕಾರ ನಿರ್ಧರಿಸಿದೆ.
ಫ್ರೀ ರೇಷನ್ ಲೇಟೆಸ್ಟ್ ಅಪ್ಡೇಟ್: ಕೇಂದ್ರದ ಮೋದಿ ಸರ್ಕಾರ ಪಡಿತರ ಚೀಟಿದಾರರಿಗೆ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು (ಸೆಪ್ಟೆಂಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಉಚಿತ ಪಡಿತರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ)ಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲು ನಿರ್ಧರಿಸಲಾಗಿದೆ.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರದ ಅನ್ವಯ, ಪಿಎಂಜಿಕೆಎವೈ ಯೋಜನೆಯಡಿ, ಪಡಿತರ ಚೀಟಿದಾರರು ಡಿಸೆಂಬರ್ 2022 ರವರೆಗೆ ಸರ್ಕಾರದಿಂದ ಉಚಿತ ಪಡಿತರ ಪ್ರಯೋಜನವನ್ನು ಪಡೆಯಲಿದ್ದಾರೆ.
ಇದನ್ನೂ ಓದಿ- Ration Card: ಉಚಿತ ಪಡಿತರ ಪ್ರಯೋಜನಗಳನ್ನು ಪಡೆಯಲು ಈ ಹೊಸ ನಿಯಮಗಳನ್ನು ತಪ್ಪದೇ ತಿಳಿಯಿರಿ
ವಾಸ್ತವವಾಗಿ, ಕೇಂದ್ರ ಸರ್ಕಾರವು ಏಪ್ರಿಲ್ 2020 ರಲ್ಲಿ ಕೋವಿಡ್ ಅವಧಿಯಲ್ಲಿ ಈ ಮಹತ್ವದ ಯೋಜನೆಯನ್ನು ಪ್ರಾರಂಭಿಸಿತು. ನಂತರ ಮಾರ್ಚ್ 2022 ರಲ್ಲಿ ಆರು ತಿಂಗಳವರೆಗೆ ಸೆಪ್ಟೆಂಬರ್ ವರೆಗೆ ವಿಸ್ತರಿಸಲಾಯಿತು. ಇದೀಗ ಸರ್ಕಾರ ಮತ್ತೊಮ್ಮೆ 2022ರ ಡಿಸೆಂಬರ್‌ವರೆಗೆ ಮೂರು ತಿಂಗಳ ಕಾಲ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದೆ.
ಇದನ್ನೂ ಓದಿ- ರೇಷನ್ ಕಾರ್ಡ್ ಬಿಗ್ ಅಪ್ಡೇಟ್: 2.4 ಕೋಟಿ ಪಡಿತರ ಚೀಟಿ ರದ್ದು!
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಯೋಜನೆಯು ದೇಶದ ಅತಿದೊಡ್ಡ ಆಹಾರ ಯೋಜನೆಯಾಗಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ದೇಶದ 80 ಕೋಟಿ ಜನರಿಗೆ ಇದರ ನೇರ ಪ್ರಯೋಜನ ಲಭ್ಯವಾಗಲಿದೆ. ಈ ಯೋಜನೆಯಡಿ, ದೇಶದ ಎಲ್ಲಾ ಬಡ ಪಡಿತರ ಚೀಟಿದಾರರ ಕುಟುಂಬಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರವನ್ನು ನೀಡಲಾಗುತ್ತದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.