DA Arrears Latest news : ತುಟ್ಟಿಭತ್ಯೆ ಹೆಚ್ಚಳ ಮತ್ತು ತುಟ್ಟಿಭತ್ಯೆ ಮೊತ್ತದ ಇತ್ತೀಚಿನ ಅಪ್ಡೇಟ್ ಗಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿಯಿದು. ಆದಷ್ಟು ಬೇಗ ನೌಕರರ ಬ್ಯಾಂಕ್ ಖಾತೆಗೆ ಭಾರೀ ಮೊತ್ತ ಜಮೆ ಆಗಲಿದೆ. ಮೂಲಗಳ ಪ್ರಕಾರ, ಡಿಎ ಮತ್ತು 18 ತಿಂಗಳ ಬಾಕಿ ಡಿಎ ಈ ಬಾರಿ ನೌಕರರ ಖಾತೆ ಸೇರಲಿದೆ ಎಂದು ಹೇಳಲಾಗುತ್ತಿದೆ.
ಮಾರ್ಚ್‌ನಲ್ಲಿ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಘೋಷಣೆಯಾಗಲಿದೆ ಎಂದು ಹೇಳಲಾಗಿರುವುದರಿಂದ ಈ ಬಗ್ಗೆ ಸ್ವಲ್ಪ ಸ್ಪಷ್ಟತೆ ಇದೆ. ಆದರೆ, 18 ತಿಂಗಳ ಡಿಎ ಬಾಕಿ ಮೊತ್ತದ ಬಗ್ಗೆ ಇನ್ನೂ ಗೊಂದಲವಿದೆ.ಈ ಕುರಿತು ಪ್ರಸ್ತುತ ಅಪ್‌ಡೇಟ್ ಏನು? ಈ ಮೊತ್ತ ಯಾವಾಗ ನೌಕರರ ಕೈ ಸೇರುತ್ತದೆ ಎನ್ನುವ ವಿವರಗಳನ್ನು ಇಲ್ಲಿ ಕಾಣಬಹುದು.
ಇದನ್ನೂ ಓದಿ : ಮತ್ತೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಅಗ್ಗದ ಲೂನಾ; ಬೆಲೆ ಮತ್ತು ವೈಶಿಷ್ಟ್ಯತೆಗಳ ಬಗ್ಗೆ ತಿಳಿಯಿರಿ
18 ತಿಂಗಳ ಡಿಎ ಬಾಕಿ ಮೊತ್ತ: ಹಣಕಾಸು ಸಚಿವರಿಗೆ ಪತ್ರ :
ಕರೋನವೈರಸ್ ಸಾಂಕ್ರಾಮಿಕ ಸಮಯದಲ್ಲಿ ತಡೆ ಹಿಡಿಯಲಾಗಿದ್ದ ತುಟ್ಟಿಭತ್ಯೆ ಬಾಕಿಯನ್ನು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಶೀಘ್ರದಲ್ಲೇ ಸ್ವೀಕರಿಸುತ್ತಾರೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತವೆ.ಈ ಸಂಬಂಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೂ ಪತ್ರ ಬರೆಯಲಾಗಿದೆ ಎನ್ನಲಾಗಿದೆ.
ಈ ಪತ್ರದಲ್ಲಿ ಭಾರತೀಯ ಪ್ರತೀಕ್ಷಾ ಮಸ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಮುಖೇಶ್ ಸಿಂಗ್ ಕೇಂದ್ರ ಸರ್ಕಾರ 18 ತಿಂಗಳ ಅವಧಿಯ ಡಿಎ ಬಾಕಿಯನ್ನು ಪಾವತಿಸಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಆಧಾರ್‌ನೊಂದಿಗೆ ಪ್ಯಾನ್ ಲಿಂಕ್: 600 ಕೋಟಿ ರೂ. ದಂಡ ಸಂಗ್ರಹಿಸಿದ ಕೇಂದ್ರ ಸರ್ಕಾರ!
18 ತಿಂಗಳು ತುಟ್ಟಿಭತ್ಯೆ ತಡೆಹಿಡಿದಿರುವ ಕಾರಣ ? :
ಕರೋನಾ ಸಾಂಕ್ರಾಮಿಕ ಸಮಯದಲ್ಲಿ, ಪ್ರಪಂಚದಾದ್ಯಂತ ಪರಿಸ್ಥಿತಿ ಸರಿ ಇರಲಿಲ್ಲ. ಆ ಸಮಯದಲ್ಲಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯನ್ನು ನಿಭಾಯಿಸಲು, ಕೇಂದ್ರ ಸರ್ಕಾರಿ ನೌಕರರ ಭತ್ಯೆಯನ್ನು ತಡೆಹಿಡಿಯಲಾಗಿತ್ತು. ಜನವರಿ 2020 ರಿಂದ ಜೂನ್ 2021 ರವರೆಗೆ ಉದ್ಯೋಗಿಗಳಿಗೆ ತುಟ್ಟಿ ಭತ್ಯೆ ನೀಡಲಾಗಿಲ್ಲ. ಪರಿಸ್ಥಿತಿ ಸ್ವಲ್ಪ ಸರಿಯಾದ ತಕ್ಷಣ ಫ್ರೀಜ್ ಅನ್ನು ತೆಗೆದುಹಾಕಲಾಯಿತು. ಆದರೆ, ಸ್ಥಗಿತಗೊಂಡ 18 ತಿಂಗಳ ತುಟ್ಟಿಭತ್ಯೆ ಬಾಕಿಯನ್ನು ಇನ್ನೂ ನೌಕರರಿಗೆ ಪಾವತಿಸಿಲ್ಲ. ಇದನ್ನು ನೀಡುವಂತೆ ನೌಕರರು ಮತ್ತು ಪಿಂಚಣಿದಾರರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ .
ಈಗ ಈ ನಿಟ್ಟಿನಲ್ಲಿ ಉತ್ತಮ ನಿರ್ಧಾರ ಕೈಗೊಳ್ಳಬಹುದು ಎನ್ನುತ್ತವೆ ಮೂಲಗಳು. ಈ ಬಗ್ಗೆ ಮಾತುಕತೆಯೂ ನಡೆಯುತ್ತಿದೆ. ಅದರಲ್ಲೂ ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರನ್ನು ಓಲೈಸುವ ಸಲುವಾಗಿ ಕೇಂದ್ರ ಸರ್ಕಾರ 18 ತಿಂಗಳ ಡಿಎ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ ಎಂಬುದು ಗಮನಾರ್ಹ.
ಇದನ್ನೂ ಓದಿ : Repo Rate update : ಬ್ಯಾಂಕ್ ಲೋನ್ ಮೇಲಿನ EMI ಮೇಲೆ ಬಿಗ್ ಅಪ್ಡೇಟ್ ! ಹೊರಬಿತ್ತು RBI ನಿರ್ಧಾರ
4% ಡಿಎ ಹೆಚ್ಚಳ :
ಇತ್ತೀಚೆಗೆ ಡಿಸೆಂಬರ್ ತಿಂಗಳ AICPI ಸೂಚ್ಯಂಕ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ. ಇವುಗಳ ಆಧಾರದ ಮೇಲೆ, ಜನವರಿ 2024 ರಿಂದ 4 ಪ್ರತಿಶತದಷ್ಟು ಡಿಎ ಹೆಚ್ಚಳವಾಗುವ ನಿರೀಕ್ಷೆಯಿದೆ. ತುಟ್ಟಿಭತ್ಯೆಯಲ್ಲಿ ಶೇ.4ರಷ್ಟು ಹೆಚ್ಚಳವಾದರೆ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.50ಕ್ಕೆ ಏರಿಕೆಯಾಗಲಿದೆ. ಇದರಿಂದ ನೌಕರರ ಮಾಸಿಕ ವೇತನದಲ್ಲಿ ಭಾರೀ ವ್ಯತ್ಯಾಸವಾಗಲಿದೆ. ಮಾರ್ಚ್‌ನಲ್ಲಿ ಹೋಳಿ ಹಬ್ಬದ ಸಂದರ್ಭ ಈ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.