Good News: ನಾಳೆಯಿಂದ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ

Apply for ration card: ಕರ್ನಾಟಕದಲ್ಲಿ ಹೊಸ BPL/APL ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬೇಕು? ಅದಕ್ಕೆ ಬೇಕಿರುವ ದಾಖಲೆಗಳು ಯಾವುವು? ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  ​

Written by - Puttaraj K Alur | Last Updated : Mar 31, 2024, 01:36 PM IST
  • ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ
  • ಏಪ್ರಿಲ್ 1ರಿಂದ ಹೊಸ BPL/APL ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ
  • ಹೊಸ BPL/APL ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬೇಕು? ತಿಳಿಯಿರಿ
Good News: ನಾಳೆಯಿಂದ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ title=
ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದೆ. ಏಪ್ರಿಲ್ 1 ಅಂದರೆ ನಾಳೆಯಿಂದ ಹೊಸ BPL/APL ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಪೋರ್ಟಲ್ ಆರಂಭವಾಗಲಿದೆ. ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ www.ahara.kar.nic.in ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.

ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿಲ್ಲದ ಜನರು ಅಗತ್ಯವಿರುವ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ತಮ್ಮ ಅರ್ಜಿಯ ಸ್ಥಿತಿಗತಿಯನ್ನೂ ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ BPL/APL ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸಬೇಕು? ಅದಕ್ಕೆ ಬೇಕಿರುವ ದಾಖಲೆಗಳು ಯಾವುವು? ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಹೇಗೆ?

  • ಮೊದಲು ನೀವು www.kar.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ಮುಖಪುಟದಲ್ಲಿ ಕಾಣಿಸುವ ʼಇ-ಸೇವೆಗಳುʼ ಆಪ್ಶನ್ ಕ್ಲಿಕ್ ಮಾಡಿ.
  • ಇದಲ್ಲದೇ https://ahara.kar.nic.in/Home/EServices ಆಪ್ಶನ್‌ಗೂ ನೇರವಾಗಿ ಕ್ಲಿಕ್ ಮಾಡಬಹುದು.
  • ಇ-ಪಡಿತರ ಚೀಟಿ ಆಯ್ಕೆ ಮಾಡಿದ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅದಕ್ಕೆ ಕ್ಲಿಕ್‌ ಮಾಡಬೇಕು.
  • ಬಳಿಕ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಭಾಷೆ ಆಯ್ಕೆ ಮಾಡಬೇಕು. ಅಲ್ಲಿ ಕೇಳುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.
  • ನೀವು BPL/APL ಕಾರ್ಡ್‌ಗೆ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಬೇಕು.
  • ಬಳಿಕ ಅರ್ಜಿಯ ಜೊತೆಗೆ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಬೇಕು. ಈ ರೀತಿ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: ಏಪ್ರಿಲ್ 1ರಿಂದ ಬದಲಾಗಲಿವೆ ಈ ಪ್ರಮುಖ 4 ನಿಯಮಗಳು; ಏನೆಂದು ತಿಳಿಯಿರಿ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ವೋಟರ್ ಐಡಿ
  • ಆಧಾರ್ ಕಾರ್ಡ್
  • ವಯಸ್ಸಿನ ಪ್ರಮಾಣ ಪತ್ರ
  • ಡ್ರೈವಿಂಗ್ ಲೈಸೆನ್ಸ್
  • ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ಸಂಖ್ಯೆ
  • ಸ್ವಯಂ ಘೋಷಿತ ಪ್ರಮಾಣ ಪತ್ರ

ಹೊಸ BPL/APL ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅರ್ಹತೆ

  • ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಪಡಿತರ ಚೀಟಿ ಇಲ್ಲದಿರುವವರು ಅರ್ಜಿ ಸಲ್ಲಿಸಬಹುದು
  • ಹೊಸದಾಗಿ ಮದುವೆಯಾದ ದಂಪತಿ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಬಹುದು
  • ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ BPL/APL ಎಂಬುದು ನಿರ್ಧಾರವಾಗಲಿದೆ

ಇದನ್ನೂ ಓದಿ: Income Tax ರೇಡಾರ್ ನಲ್ಲಿ ಮನೆ ಬಾಡಿಗೆ ಭತ್ಯೆ ಕ್ಲೇಮ್ ಮಾಡುವವರು, ಆದಾಯ ತೆರಿಗೆ ವಿಭಾಗಕ್ಕೆ ಕೋಟ್ಯಂತರ ನಷ್ಟ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News