Good News: ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಇಂದೇ ಅರ್ಜಿ ಸಲ್ಲಿಸಿ

Self Employment Direct Loan Scheme: ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸಲಾಗುವುದು.

Written by - Puttaraj K Alur | Last Updated : Nov 25, 2023, 09:08 AM IST
  • ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ನೇರ ಸಾಲ ಯೋಜನೆ
  • SC/ST ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆ
  • ಅರ್ಹ ಅಭ್ಯರ್ಥಿಗಳು ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
Good News: ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಇಂದೇ ಅರ್ಜಿ ಸಲ್ಲಿಸಿ title=
ನೇರ ಸಾಲ ಯೋಜನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಪೈಕಿ SC/ST ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆ ಜಾರಿಗೆ ತಂದಿದೆ.

ಪರಿಶಿಷ್ಟ ಜಾತಿ ಮಾದಿಗ ಮತ್ತು ಸಂಬಂಧಿತ ಜಾತಿಗೆ ಸೇರಿದ ನಿರುದ್ಯೋಗಿಗಳು ಕೈಗಾಡಿಗಳನ್ನು ಖರೀದಿಸಿ, ರೈತರಿಂದ ತರಕಾರಿ-ಹಣ್ಣುಗಳನ್ನು ಖರೀದಿ ಮಾಡಿ ತಳ್ಳುವ ಗಾಡಿ ಮೂಲಕ ಮಾರಾಟ ಮಾಡಿ ಸ್ವಯಂ ಉದ್ಯೋಗ ಕೈಗೊಂಡು ಆದಾಯ ಗಳಿಸಲು ಅವಶ್ಯವಿರುವ ಸಾಲ ಮತ್ತು ಸಹಾಯಧನವನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಮಂಜೂರು ಮಾಡಲಾಗುವುದು.

ಸ್ವಯಂ ಉದ್ಯೋಗ:

  • ಈ ಯೋಜನೆಯಡಿ ಪರಿಶಿಷ್ಟ ಜಾತಿಯ ಮಾದಿಗ ಜಾತಿಗೆ ಸೇರಿದ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವನ್ನು ಒದಗಿಸಲಾಗುವುದು.
  • ಯೋಜನೆಯ ಘಟಕ ವೆಚ್ಚ 1 ಲಕ್ಷ ರೂ.ಗಳಾಗಿದ್ದು, ಈ ಪೈಕಿ 50 ಸಾವಿರ ರೂ. ಸಹಾಯಧನ ಮತ್ತು 50 ಸಾವಿರ ರೂ. ಸಾಲವಾಗಿರುತ್ತದೆ.
  • ಸಾಲದ ಮೊತ್ತವನ್ನು ಶೇ.4ರ ಬಡ್ಡಿದರದಲ್ಲಿ 30 ಸಮಾನ ಕಂತುಗಳಲ್ಲಿ ನಿಗಮಕ್ಕೆ ಮರು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ರೈಲ್ವೆಯಿಂದ ವಿಶೇಷ ಸೌಲಭ್ಯ! ಹಿರಿಯ ನಾಗರಿಕರಿಗೆ ಹೆಚ್ಚು ಅನುಕೂಲ

ಅರ್ಹತೆ:

  • ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಸೇರಿದವರಾಗಿರಬೇಕು.
  • ಆದಿ ಕರ್ನಾಟಕ, ಆದಿ ಆಂಧ್ರ ಮತ್ತು ಆದಿ ದ್ರಾವಿಡ ಎಂಬ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದಲ್ಲಿ ಕಡ್ಡಾಯವಾಗಿ ಮೂಲ ಜಾತಿಯನ್ನು ನಮೂದಿಸಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ.
  • ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
  • ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು.

ನಿಯಮಗಳು:

  • ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ 1.50 ಲಕ್ಷ ರೂ. ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ರೂ.ಗಳ ಮಿತಿಯೊಳಗಿರಬೇಕು.
  • ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು.
  • ಉದ್ದೇಶಿತ ವ್ಯಾಪಾರ /ಚಟುವಟಿಕೆ ಆಧಾರದ ಮೇಲೆ ಸಾಲ/ಸಹಾಯಧನ ಮಂಜೂರು ಮಾಡಲಾಗುವುದು.
  • ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡು ಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುತ್ತದೆ.
  • ಸಹಾಯಧನ ಮತ್ತು ಸಾಲವನ್ನು ನೇರವಾಗಿ ಫಲಾನುಭವಿಗಳಿಗೆ/ಮಾರಾಟಗಾರರಿಗೆ ಬಿಡುಗಡೆ ಮಾಡಲಾಗುವುದು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

  • ಅರ್ಜಿ
  • ಭಾವಚಿತ್ರ
  • ಜಾತಿ ಪತ್ರ (RD ಸಂಖ್ಯೆ ಹೊಂದಿರಬೇಕು)
  • ಆಧಾಯ ಪತ್ರ (RD ಸಂಖ್ಯೆ ಹೊಂದಿರಬೇಕು)
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್‍ಬುಕ್

ಇದನ್ನೂ ಓದಿ: ನೀವೂ ಕಾಲೇಜು ವಿದ್ಯಾರ್ಥಿಗಳೇ? ನಿಮಗಾಗಿ ಲಾಂಚ್ ಆಗಿವೆ ಎರಡು ಹೊಸ ಇ-ಸ್ಕೂಟರ್ ಗಳು, ಬೆಲೆ ಜಸ್ಟ್ 55 ಸಾವಿರ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News