Ganga Kalyana Scheme: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ.15ರವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಈಗ ನೀವು ಎಟಿಎಂ ಕಾರ್ಡ್ ಇಲ್ಲದೆಯೂ ಹಣವನ್ನು ಹಿಂಪಡೆಯಬಹುದು, ಈ ಸರಳ ವಿಧಾನವನ್ನು ಅನುಸರಿಸಿ..!


ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ


  • ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು

  • ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು

  • ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು

  • ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು

  • ವಯಸ್ಸು 18 ರಿಂದ 60 ವರ್ಷದೊಳಗಿರಬೇಕು

  • ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 1.20 ಲಕ್ಷ ರೂ.ನ ಒಳಗಿರಬೇಕು

  • ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು

  • ಗಂಗಾ ಕಲ್ಯಾಣ ಯೋಜನೆಡಿ 4 ಲಕ್ಷ ರೂ. ಸಬ್ಸಿಡಿ ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ

  • ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

  • ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು


ಬೇಕಾಗುವ ಅಗತ್ಯ ದಾಖಲಾತಿಗಳು


  • ಆಧಾರ್ ಕಾರ್ಡ್

  • ಬ್ಯಾಂಕ್ ಪಾಸ್ ಬುಕ್

  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

  • ಸ್ವಂತ ಜಮೀನಿನ ಪಹಣಿ

  • ಅರ್ಜಿದಾರರ ಭಾವಚಿತ್ರ

  • ಬಿಪಿಎಲ್ ರೇಷನ್ ಕಾರ್ಡ್

  • ಮೊಬೈಲ್ ಸಂಖ್ಯೆ


ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಸೆ.15ರೊಳಗೆ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: 34 ಕಿಮೀ ಮೈಲೇಜ್ ಕೊಡುವ ಈ ಕಾರಿನ ಬೆಲೆ ಈಗ ಬೆಲೆ 5.54 ಲಕ್ಷದಿಂದ ಆರಂಭ...! ಇದರಲ್ಲಿ ಏನೆಲ್ಲಾ ವಿಶೇಷಗಳಿವೆ ಗೊತ್ತೇ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.