ನವದೆಹಲಿ : ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಚಂದಾದಾರರಿಗೆ ದೊಡ್ಡ ಪ್ರಯೋಜನಗಳನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಫಲಾನುಭವಿಗಳಿಗೆ ಕನಿಷ್ಠ ಪಿಂಚಣಿಯನ್ನು ಹೆಚ್ಚಿಸಬಹುದು ಎಂದು ವರದಿಗಳು ಸೂಚಿಸುತ್ತವೆ. ಫೆಬ್ರವರಿಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಸಭೆ ನಡೆಯಲಿದ್ದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು.
ಸಭೆಯ ಕಾರ್ಯಸೂಚಿಯು ನೌಕರರ ಪಿಂಚಣಿ ಯೋಜನೆ(Employees' Pension Scheme) ಅಥವಾ ಇಪಿಎಸ್ ಅಡಿಯಲ್ಲಿ ಕನಿಷ್ಠ ಪಿಂಚಣಿ ಹೆಚ್ಚಳವಾಗಿದ್ದು, ಕನಿಷ್ಠ ಮಾಸಿಕ ಪಿಂಚಣಿಯನ್ನು 1,000 ರೂ. ನಿಂದ 9,000 ರೂ.ಗೆ ಹೆಚ್ಚಿಸಬಹುದು. ಪಿಂಚಣಿದಾರರು ಈ ಕುರಿತು ಸಾಕಷ್ಟು ದಿನಗಳಿಂದ ಬೇಡಿಕೆ ಇಟ್ಟಿದ್ದು, ಈಗಾಗಲೇ ಹಲವು ಸುತ್ತಿನ ಚರ್ಚೆಗಳು ನಡೆದಿವೆ.
ಇದನ್ನೂ ಓದಿ : Arecanut Price: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ
ಸಂಸತ್ತಿನ ಸ್ಥಾಯಿ ಸಮಿತಿಯ ಶಿಫಾರಸುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಹೊಸ ವೇತನ ಸಂಹಿತೆ ಜಾರಿ ಮತ್ತು ನೌಕರರ ಪಿಂಚಣಿ ಯೋಜನೆಯಡಿ ಕನಿಷ್ಠ ಪಿಂಚಣಿ ಸೇರಿದಂತೆ ಎರಡು ಪ್ರಮುಖ ವಿಷಯಗಳು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ಮಾರ್ಚ್ 2021 ರಲ್ಲಿ, ಸಂಸತ್ತಿನ ಸ್ಥಾಯಿ ಸಮಿತಿಯು ಕನಿಷ್ಠ ಪಿಂಚಣಿ ಮೊತ್ತವನ್ನು 1,000 ರೂ.ನಿಂದ 3,000 ರೂ.ಗೆ ಹೆಚ್ಚಿಸಲು ಶಿಫಾರಸು ಮಾಡಿತ್ತು. ಆದರೆ, ಪಿಂಚಣಿ(Pension) ಮೊತ್ತವನ್ನು ಕನಿಷ್ಠ 9 ಸಾವಿರ ರೂ.ಗೆ ಹೆಚ್ಚಿಸಬೇಕು ಎಂಬುದು ಪಿಂಚಣಿದಾರರ ಆಗ್ರಹವಾಗಿದೆ. ಆಗ ಮಾತ್ರ EPS-95 ಪಿಂಚಣಿದಾರರು ನಿಜವಾದ ಅರ್ಥದಲ್ಲಿ ಪ್ರಯೋಜನವನ್ನು ಪಡೆಯುತ್ತಾರೆ.
ಇದನ್ನೂ ಓದಿ : SBI New Year Offer: ಎಸ್‌ಬಿಐ ಗ್ರಾಹಕರಿಗೆ ವಿಶೇಷ ಕೊಡುಗೆ, ಕಡಿಮೆ ಬಡ್ಡಿ ದರದಲ್ಲಿ ಪಡೆಯಿರಿ ಪರ್ಸನಲ್ ಲೋನ್
ನಿವೃತ್ತಿಗೆ ಸ್ವಲ್ಪ ಮೊದಲು ನೌಕರನ ಕೊನೆಯ ಸಂಬಳದ ಪ್ರಕಾರ ಪಿಂಚಣಿಯನ್ನು ನಿಗದಿಪಡಿಸಬೇಕು ಎಂದು ಒಂದು ಸಲಹೆ ಹೇಳುತ್ತದೆ. ಕಾರ್ಮಿಕ ಸಚಿವಾಲಯದ ಸಭೆಯಲ್ಲೂ ಈ ಸಲಹೆಯನ್ನು ಪರಿಗಣಿಸಲಾಗುವುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.