Nirmala Sitharaman on Education Budget 2024 : ಮೋದಿ ಸರ್ಕಾರದ ಮೂರನೇ ಅವಧಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ.ಭಾರತದ ಆರ್ಥಿಕತೆ ಬಲಿಷ್ಠವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ. ಉದ್ಯೋಗ ಹೆಚ್ಚಿಸುವತ್ತ ಸರ್ಕಾರದ ಗಮನ ಹರಿಸಲಾಗಿದೆ ಎಂದಿದ್ದಾರೆ.ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಮತ್ತು ರೈತರಿಗೆ ಒತ್ತು ನೀಡಲಾಗಿದೆ.ಸಬ್ಕಾ ಸಾಥ್, ಸಬ್ಕಾ ವಿಕಾಸ್‌ಗೆ ಸರ್ಕಾರ ಬದ್ಧವಾಗಿದೆ. ಈ ಬಾರಿ ಬಜೆಟ್ ನಲ್ಲಿ ಯುವಕರಿಗೆ 2 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಹಣಕಾಸು ಸಚಿವರು ತಿಳಿಸಿದರು. 


COMMERCIAL BREAK
SCROLL TO CONTINUE READING

ಐದು ಯೋಜನೆಗಳ ಪ್ರಧಾನಮಂತ್ರಿ ಪ್ಯಾಕೇಜ್  : 
ಹಣಕಾಸು ಸಚಿವರು ಐದು ಯೋಜನೆಗಳ ಪ್ರಧಾನಮಂತ್ರಿ ಪ್ಯಾಕೇಜ್ ಅನ್ನು ಘೋಷಿಸಿದ್ದಾರೆ. ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ  ಇದಕ್ಕಾಗಿ ಮೀಸಲಿಡುವ ಮೊತ್ತವನ್ನು 2 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಈ ವರ್ಷ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.


ಇದನ್ನೂ ಓದಿ : ಸೇಲ್ಸ್ ಗರ್ಲ್ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವೆಯಾಗಿದ್ದು ಹೇಗೆ ? ಕಾಂಗ್ರೆಸ್ ಕಟ್ಟಾಳುಗಳಾದ ಪತಿ, ಅತ್ತೆ, ಮಾವನ ಮಧ್ಯೆ ಬರೆದಿದ್ದಾರೆ ಹಲವು ದಾಖಲೆ


10 ಲಕ್ಷದವರೆಗೆ ಸಾಲ:
ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರು ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ.ವರೆಗಿನ ಸಾಲಕ್ಕೆ ಸರ್ಕಾರದಿಂದ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಹಾಸ್ಟೆಲ್‌ಗಳನ್ನು ನಿರ್ಮಿಸಲು ಮತ್ತು ಮಹಿಳೆಯರಿಗೆ ವಿಶೇಷ ಕೌಶಲ್ಯ ಕಾರ್ಯಕ್ರಮಗಳನ್ನು ಆಯೋಜಿಸಲು ಸಹಭಾಗಿತ್ವವನ್ನು ರೂಪಿಸುವ ಮೂಲಕ ಇದನ್ನು ಸುಗಮಗೊಳಿಸಲಾಗುವುದು ಎಂದು ಅವರು ಹೇಳಿದರು.


ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಿಗೆ (ಎಲ್ಲಾ ಔಪಚಾರಿಕ ಕ್ಷೇತ್ರಗಳಲ್ಲಿ ಹೊಸದಾಗಿ ಪ್ರವೇಶಿಸುವವರಿಗೆ) ಒಂದು ತಿಂಗಳ ವೇತನವನ್ನು ನೀಡಲಾಗುವುದು. ಎರಡನೆಯದಾಗಿ, ಇಪಿಎಫ್‌ಒ ಮಾರ್ಗಸೂಚಿಗಳ ಪ್ರಕಾರ ಉತ್ಪಾದನಾ ವಲಯ  ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ ಪ್ರೋತ್ಸಾಸ ನೀಡಲಾಗುವುದು.ಎಲ್ಲಾ ವಲಯಗಳಲ್ಲಿ ಹೆಚ್ಚುವರಿ ಉದ್ಯೋಗ ಮತ್ತು 50 ಲಕ್ಷ ಜನರಿಗೆ ಹೆಚ್ಚುವರಿ ಉದ್ಯೋಗವನ್ನು ಒದಗಿಸಲು ಪ್ರೋತ್ಸಾಹಕ ಯೋಜನೆಗಳನ್ನು ಒಳಗೊಂಡಿರುತ್ತದೆ.


1.:ಮೊದಲ ಬಾರಿಗೆ ಉದ್ಯೋಗ  ಮಾಡುವವರಿಗಾಗಿ : 
ಮೊದಲ ಬಾರಿಗೆ EPFO ​​ನಲ್ಲಿ ನೋಂದಾಯಿತ ಉದ್ಯೋಗಿಗಳಿಗೆ 15,000 ರೂ.ವರೆಗಿನ ಮೂರು ಕಂತುಗಳಲ್ಲಿ ಒಂದು ತಿಂಗಳ ಸಂಬಳದ ನೇರ ಲಾಭ ವರ್ಗಾವಣೆ.


ಇದನ್ನೂ ಓದಿ :  Budget 2024: ಬಜೆಟ್ ನಲ್ಲಿ ಈ ಬೇಡಿಕೆಗೆ ಸಚಿವರು ಅಸ್ತು ಎಂದರೆ ಮಧ್ಯಮ ಮತ್ತು ವೇತನ ವರ್ಗಕ್ಕೆ ಸಿಗುವುದು ಬಹು ದೊಡ್ಡ ಉಡುಗೊರೆ !


2.:ಉತ್ಪಾದನಾ ವಲಯದಲ್ಲಿ ಉದ್ಯೋಗ ಸೃಷ್ಟಿ :
ಉದ್ಯೋಗದ ಮೊದಲ ನಾಲ್ಕು ವರ್ಷಗಳಲ್ಲಿ ಅವರ EPFO ​​ಕೊಡುಗೆಯ ಪ್ರಕಾರ ಉದ್ಯೋಗಿ ಮತ್ತು ಉದ್ಯೋಗದಾತರಿಗೆ ನೇರ ಪ್ರೋತ್ಸಾಹವನ್ನು ಒದಗಿಸಲಾಗುತ್ತದೆ.


3 :ಉದ್ಯೋಗದಾತರಿಗೆ ಬೆಂಬಲ :
ಉದ್ಯೋಗದಾತರು ತಮ್ಮ ಇಪಿಎಫ್‌ಒ ಕೊಡುಗೆಯನ್ನು ಪ್ರತಿ ಉದ್ಯೋಗಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3,000 ರೂಪಾಯಿವರೆಗೆ ಪಾವತಿಸಬೇಕು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ