7th Pay Commission Update: ವರ್ಷ 2023ನೇ ಸಾಲಿನ ಆಯವ್ಯಯ ಮಂಡನೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ.  ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರದಿಂದ ಹಲವು ಘೋಷಣೆಗಳು ಹೊರಬೀಳುವ ಸಾಧ್ಯತೆ ಇದೆ. ಇದೇ ವೇಳೆ, ಈ ಬಜೆಟ್‌ನಲ್ಲಿ ಸರ್ಕಾರ ಅನೇಕ ಪರಿಹಾರ ಘೋಷಣೆಗಳನ್ನು ಸಹ ಮಾಡಬಹುದೆಂಬ ಭರವಸೆಯಲ್ಲಿ ಜನರಿದ್ದಾರೆ. ಇದರ ಜೊತೆಗೆ ಜನರು 7 ನೇ ವೇತನ ಆಯೋಗದ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಡಿಎ ಹೆಚ್ಚಳ, ಫಿಟ್‌ಮೆಂಟ್ ಫ್ಯಾಕ್ಟರ್ ಸುಧಾರಣೆ ಹಾಗೂ ಬಾಕಿ ಇರುವ ಡಿಎ ಪಾವತಿಯನ್ನು ಬಜೆಟ್‌ನಲ್ಲಿ ಪ್ರಕಟಿಸಬೇಕು ಎಂಬುದು ಸರ್ಕಾರಿ ನೌಕರರ ಆಗ್ರಹವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮತ್ತು ಈ ಘೋಷಣೆಗಳನ್ನು ಸರ್ಕಾರ ಬಜೆಟ್ ನಲ್ಲಿ ಮೊಳಗಿಸಿದರೆ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಹೆಚ್ಚಳ ಸಂಭವಿಸಲಿದೆ.


COMMERCIAL BREAK
SCROLL TO CONTINUE READING

ಡಿಎ ಹೆಚ್ಚಳ
ನೌಕರರು ಡಿಎ ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದಾರೆ. ಕೇಂದ್ರ ನೌಕರರ ಡಿಎಯನ್ನು ಸರ್ಕಾರವು ಪ್ರತಿ ವರ್ಷ ಎರಡು ಬಾರಿ ಹೆಚ್ಚಿಸುತ್ತದೆ. ಈ ಹೆಚ್ಚಳವನ್ನು ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಲ್ಲಿ ಮಾಡಲಾಗುತ್ತದೆ. ಇದೇ ವೇಳೆ ಕೇಂದ್ರ ನೌಕರರು ಈ ವರ್ಷ ಡಿಎ ಹೆಚ್ಚಳವನ್ನು ಬಜೆಟ್‌ನ ಜೊತೆಗೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ, ಇದರಿಂದ ಅವರ ವೇತನದಲ್ಲಿ ಭಾರಿ ಪ್ರಮಾಣದ ಹೆಚ್ಚಳ ಉಂಟಾಗುವ ಸಾಧ್ಯತೆ ಇದೆ.


ಇದನ್ನೂ ಓದಿ-Budget 2023: ಪಿಎಂ ಆವಾಸ್ ಯೋಜನೆಯ ಫಲಾನುಭವಿಗಳಿಗೆ ಸಿಗುತ್ತಾ ಈ ಸಂತಸದ ಸುದ್ದಿ!


ಫಿಟ್ಮೆಂಟ್ ಫ್ಯಾಕ್ಟರ್


ಫಿಟ್‌ಮೆಂಟ್ ಫ್ಯಾಕ್ಟರ್ ಹೆಚ್ಚಿಸಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಆಗ್ರಹವಾಗಿದೆ. ಒಂದು ವೇಳೆ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಫಿಟ್ಮೆಂಟ್ ಫ್ಯಾಕ್ಟರ್ ಹೆಚ್ಚಿಸಿದ್ದೆ ಆದಲ್ಲಿ,  ನೌಕರರ ಕನಿಷ್ಠ ವೇತನವು ಹೆಚ್ಚಾಗಲಿದೆ.


ಇದನ್ನೂ ಓದಿ-Gratuity-Pension Rule: ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಿದೆ ಸರ್ಕಾರ!


ಬಾಕಿ ಇರುವ ಡಿಎ ಪಾವತಿ
ಕೊರೊನಾದಿಂದಾಗಿ ಕೇಂದ್ರ ನೌಕರರ ಡಿಎ ಪಾವತಿಯನ್ನು ಸರ್ಕಾರ ಸ್ಥಗಿತಗೊಳಿಸಿದೆ. ಕೊರೊನಾ ಅವಧಿಯಲ್ಲಿ ಕೇಂದ್ರ ಸರ್ಕಾರ ನೌಕರರ 18 ತಿಂಗಳ ಡಿಎಗೆ ಬ್ರೇಕ್ ಹಾಕಿತ್ತು.  ಈ ಹಿನ್ನೆಲೆಯಲ್ಲಿ ಇದೀಗ ಪೋಸ್ಟ್ ಕೊವಿಡ್ ನಲ್ಲಿ ಸರ್ಕಾರ 18 ತಿಂಗಳ ಡಿಎ ಪಾವತಿಸಬೇಕಾಗಿದೆ. ಈ ಬಾರಿಯ ಬಜೆಟ್ ನಲ್ಲಿ ಈ ಕುರಿತು ಸರ್ಕಾರ ಘೋಷಿಸಬೇಕು ಎಂಬುದು ನೌಕರರ ಬೇಡಿಕೆಯಾಗಿದೆ. 


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.