LPG Gas Cylinder QR Code: ನೀವು ಸಹ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಹೊಂದಿದ್ದರೆ ಈ ಸುದ್ದಿ ನಿಮಗೆ ಮಹತ್ವದ್ದಾಗಿದೆ. ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಯನ್ನು ಜಾರಿಗೆ ತಂದಿದ್ದು ದೇಶದ ಪ್ರತಿ ಗ್ರಾಹಕರಿಗೂ ಸಹ ಇದರ ನೇರ ಪ್ರಯೋಜನ ಲಭ್ಯವಾಗಲಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್), ಕ್ಯೂಆರ್ ಕೋಡ್ ಆಧಾರಿತ ಸಿಲಿಂಡರ್ ಅನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಗ್ರಾಹಕರು ಸಿಲಿಂಡರ್ ಅನ್ನು ಟ್ರ್ಯಾಕ್ ಮಾಡಲು ಮತ್ತು ಪತ್ತೆಹಚ್ಚಲು ಸಾಧ್ಯವಾಗುತ್ತದೆ.
ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳು ಕ್ಯೂಆರ್ ಕೋಡ್:
ಈ ಕುರಿತಂತೆ ಮಾಹಿತಿ ನೀಡಿರುವ ಇಂಡಿಯನ್ ಆಯಿಲ್ (ಐಒಸಿಎಲ್) ಅಧ್ಯಕ್ಷ ಶ್ರೀಕಾಂತ್ ಮಾಧವ್ ವೈದ್ಯ, ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳು ಕ್ಯೂಆರ್ ಕೋಡ್ ಅನ್ನು ಹೊಂದಿರುತ್ತದೆ ಎಂದು ಹೇಳಿದರು.
ಇದೊಂದು ಕ್ರಾಂತಿಕಾರಿ ಬದಲಾವಣೆ ಎಂದು ಬಣ್ಣಿಸಿದ ಪೆಟ್ರೋಲಿಯಂ ಸಚಿವರು:
2022ರ ವಿಶ್ವ ಎಲ್‌ಪಿಜಿ ಸಪ್ತಾಹದ ಸಂದರ್ಭದಲ್ಲಿ, ಗ್ರಾಹಕರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುವುದರಿಂದ ಇದು ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಇದನ್ನೂ ಓದಿ- Cheapest Electric Car: ಫುಲ್ ಚಾರ್ಜ್‌ನಲ್ಲಿ 200 KM ಮೈಲೇಜ್ ನೀಡುವ ಭಾರತದ ಅತ್ಯಂತ ಅಗ್ಗದ ಎಲೆಕ್ಟ್ರಿಕ್ ಕಾರ್ ಬಿಡುಗಡೆ
ಎಲ್‌ಪಿಜಿ ಸಿಲಿಂಡರ್‌ನಲ್ಲಿ ಕ್ಯೂಆರ್ ಕೋಡ್ ಪ್ರಯೋಜನವೇನು?
ಹೊಸ ಸಿಲಿಂಡರ್‌ನಲ್ಲಿ ಕ್ಯೂಆರ್ ಕೋಡ್ ಅನ್ನು ವೆಲ್ಡ್ ಮಾಡಲಾಗುವುದು. ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ಸಿಲಿಂಡರ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಉದಾಹರಣೆಗೆ, ಸಿಲಿಂಡರ್ ಅನ್ನು ಎಲ್ಲಿ ರೀಫಿಲ್ ಮಾಡಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗೆ ಸಂಬಂಧಿಸಿದಂತೆ ಯಾವ ಸುರಕ್ಷತಾ ಪರೀಕ್ಷೆಗಳನ್ನು ಮಾಡಲಾಗಿದೆ ಎಂಬಿತ್ಯಾದಿ ಮಾಹಿತಿಗಳು ಇದರಲ್ಲಿ ಲಭ್ಯವಾಗಲಿವೆ. ಕ್ಯೂಆರ್ ಕೋಡ್ ಅನ್ನು ಅಸ್ತಿತ್ವದಲ್ಲಿರುವ ಸಿಲಿಂಡರ್‌ನಲ್ಲಿ ಲೇಬಲ್ ಮೂಲಕ ಅಂಟಿಸಲಾಗುತ್ತದೆ, ಆದರೆ ಅದನ್ನು ಹೊಸ ಸಿಲಿಂಡರ್‌ನಲ್ಲಿ ಬೆಸುಗೆ ಅಂದರೆ ವೆಲ್ಡ್ ಮಾಡಲಾಗುತ್ತದೆ.
ಇದನ್ನೂ ಓದಿ- ಎಟಿಎಂ ನಗದು ವಹಿವಾಟಿನ ನಿಯಮಗಳಲ್ಲಿ ಮತ್ತೆ ಬದಲಾವಣೆ.!
20 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳನ್ನು ಕ್ಯೂಆರ್ ಕೋಡ್ ಎಂಬೆಡೆಡ್ ಗಾಗಿ ನೀಡಲಾಗಿದೆ:
ಯುನಿಟ್ ಕೋಡ್ ಆಧಾರಿತ ಟ್ರ್ಯಾಕ್ ಅಡಿಯಲ್ಲಿ, ಮೊದಲ ಹಂತದಲ್ಲಿ ಕ್ಯೂಆರ್ ಕೋಡ್ ಅಳವಡಿಸಿದ 20 ಸಾವಿರ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡಲಾಗಿದೆ. ಇದು ಒಂದು ರೀತಿಯ ಬಾರ್‌ಕೋಡ್ ಆಗಿದ್ದು, ಇದನ್ನು ಡಿಜಿಟಲ್ ಸಾಧನದಿಂದ ಓದಬಹುದು. ಮುಂದಿನ ಮೂರು ತಿಂಗಳಲ್ಲಿ ಎಲ್ಲಾ 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಕ್ಯೂಆರ್ ಕೋಡ್ ಅಳವಡಿಸಲಾಗುವುದು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಪ್ರಾರಂಭಿಸುವ ಮೊದಲು, ದೇಶದ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಅಡುಗೆ ಇಂಧನದ ಲಭ್ಯತೆ ದೊಡ್ಡ ಸವಾಲಾಗಿತ್ತು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆ ಜಾರಿಯಾದ ಬಳಿಕ ಗ್ರಾಮಸ್ಥರಿಗೆ ನೆಮ್ಮದಿ ಸಿಕ್ಕಿದೆ. ಇದೀಗ ಸರ್ಕಾರದ ಈ ಕ್ರಾಂತಿಕಾರಿ ಬದಲಾವಣೆಯಿಂದ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ಟ್ರ್ಯಾಕ್ ಮಾಮಾಡುವುದು ಇನ್ನೂ ಸುಲಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.