Aadhaar Card-Voter ID ಜೋಡಣೆಗೆ ಸಂಬಂಧಿಸಿದಂತೆ ಸರ್ಕಾರದ ಹೊಸ ಆದೇಶ ಜಾರಿ, ತಕ್ಷಣ ತಿಳಿದುಕೊಳ್ಳಿ!

Aadhaar Card-Voter ID Link: ಸರ್ಕಾರದ ವತಿಯಿಂದ ಮತದಾರರ ಗುರುತು ಚೀಟಿ ಮತ್ತು ಆಧಾರ್ ಜೋಡಣೆ ಮಾಡಲು ಕೊನೆಯ ದಿನಾಂಕ ಏಪ್ರಿಲ್ 1, 2023 ಆಗಿತ್ತು. ಆದರೆ, ಇದೀಗ ಅದನ್ನು ಸರ್ಕಾರವು ಮಾರ್ಚ್ 31, 2024 ಕ್ಕೆ ವಿಸ್ತರಿಸಿದೆ. ಆದಾಗ್ಯೂ, ಎರಡೂ ಸಂಗತಿಗಳನ್ನು ಲಿಂಕ್ ಮಾಡುವ ಅನಿವಾರ್ಯವಲ್ಲ  

Written by - Nitin Tabib | Last Updated : Mar 22, 2023, 01:08 PM IST
  • ಚುನಾವಣಾ ಆಯೋಗದ ಪ್ರಕಾರ, ಮತದಾರರ ಪಟ್ಟಿಯಲ್ಲಿ ನಮೂದಿಸಿದ ಹೆಸರು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಗುರಿಯಾಗಿದೆ.
  • ಇದಲ್ಲದೇ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರಾ ಅಥವಾ ಒಂದಕ್ಕಿಂತ ಹೆಚ್ಚು ಬಾರಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆಯೇ ಎಂಬುದೂ ಕೂಡ ತಿಳಿಯುವುದು ಇದರ ಹಿಂದಿನ ಉದ್ದೇಶವಾಗಿದೆ.
Aadhaar Card-Voter ID ಜೋಡಣೆಗೆ ಸಂಬಂಧಿಸಿದಂತೆ ಸರ್ಕಾರದ ಹೊಸ ಆದೇಶ ಜಾರಿ, ತಕ್ಷಣ ತಿಳಿದುಕೊಳ್ಳಿ! title=
ಆಧಾರ್ ಕಾರ್ಡ್-ವೋಟರ್ ಐಡಿ ಜೋಡಣೆ ಹೊಸ ಅಪ್ಡೇಟ್!

Voter ID-Aadhaar Card Link Update: ನೀವೂ ನಿಮ್ಮ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಇನ್ನೂ ಒಂದಕ್ಕೊಂದು ಲಿಂಕ್ ಮಾಡದಿದ್ದರೆ, ಈ ಸುದ್ದಿ ನಿಮಗೆ ಭಾರಿ ನೆಮ್ಮದಿಯನ್ನು ನೀಡಲಿದೆ. ಸರ್ಕಾರದಿಂದ ಮತದಾರರ ಗುರುತು ಚೀಟಿ ಮತ್ತು ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ ಏಪ್ರಿಲ್ 1, 2023 ಆಗಿತ್ತು. ಸರ್ಕಾರವು ಇದೀಗ ಅದನ್ನು  ಮಾರ್ಚ್ 31, 2024 ಕ್ಕೆ ವಿಸ್ತರಿಸಿದೆ. ಆದಾಗ್ಯೂ, ಎರಡೂ ಸಂಗತಿಗಳನ್ನು  ಲಿಂಕ್ ಮಾಡುವ ಅನಿವಾರ್ಯತೆ ಇಲ್ಲ.

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲಾಗುವುದಿಲ್ಲ
ಕಾನೂನು ಮತ್ತು ನ್ಯಾಯ ಸಚಿವಾಲಯದ ಗೆಜೆಟ್ ಅಧಿಸೂಚನೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿಗಳನ್ನು ತಿರಸ್ಕರಿಸಲಾಗುವುದಿಲ್ಲ ಎನ್ನಲಾಗಿದೆ. ಮತದಾರರು ಆಧಾರ್ ಸಂಖ್ಯೆಯನ್ನು ತೋರಿಸಲು ವಿಫಲವಾದರೆ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುವುದಿಲ್ಲ. ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.  ವೋಟರ್ ಐಡಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ಅಭಿಯಾನವನ್ನು ಚುನಾವಣಾ ಆಯೋಗವು ಪ್ರಾರಂಭಿಸಿದೆ ಎಂಬುದು ಇಲ್ಲಿ  ಉಲ್ಲೇಖನೀಯ 

ಈ ಮಾಹಿತಿ ಸ್ಪಷ್ಟವಾಗಿರಲಿ
ಚುನಾವಣಾ ಆಯೋಗದ ಪ್ರಕಾರ, ಮತದಾರರ ಪಟ್ಟಿಯಲ್ಲಿ ನಮೂದಿಸಿದ ಹೆಸರು ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಗುರಿಯಾಗಿದೆ. ಇದಲ್ಲದೇ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರಾ ಅಥವಾ ಒಂದಕ್ಕಿಂತ ಹೆಚ್ಚು ಬಾರಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆಯೇ ಎಂಬುದೂ ಕೂಡ ತಿಳಿಯುವುದು ಇದರ ಹಿಂದಿನ ಉದ್ದೇಶವಾಗಿದೆ.

ಇದನ್ನೂ ಓದಿ-Good News: ಅಡುಗೆ ಎಣ್ಣೆ ಬೆಲೆಯಲ್ಲಿ ಭಾರಿ ಇಳಿಕೆ, ಇಲ್ಲಿದೆ ಹೊಸ 1 ಲೀಟರ್ ಎಣ್ಣೆ ಬೆಲೆ !

ಡಿಸೆಂಬರ್ 2021 ರಲ್ಲಿ ಚುನಾವಣಾ ಕಾನೂನು ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಇದರಲ್ಲಿ ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡಲು ಅನುಮತಿ ನೀಡಲಾಗಿತ್ತು. ಮನೆಯಲ್ಲಿ ಕುಳಿತು ನೀವು ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಬಹುದು.

ಇದನ್ನೂ ಓದಿ-7th Pay Commission: ಯುಗಾದಿ ದಿನ ಮೋದಿ ಸರ್ಕಾರದ ವತಿಯಿಂದ ಸರ್ಕಾರಿ ನೌಕರರಿಗೆ 27,000 ರೂ.ಗಳ ಭಾರಿ ಉಡುಗೊರೆ!

ಈ ರೀತಿ ಆನ್‌ಲೈನ್‌ನಲ್ಲಿ ಲಿಂಕ್ ಮಾಡಿ
>> ಮತದಾರರ ಐಡಿಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು, ಮೊದಲನೆಯದಾಗಿ https://nvsp.in/ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
>> ಲಾಗಿನ್ ಮಾಡಿದ ಬಳಿಕ. ನೀವು ಹೊಸ ಬಳಕೆದಾರರಾಗಿ ನೋಂದಾಯಿಸಿಕೊಳ್ಳುವ ಆಯ್ಕೆಯನ್ನು ಪಡೆಯುತ್ತೀರಿ. ಅದರ ಮೇಲೆ ಕ್ಲಿಕ್ ಮಾಡಿ.
>> ಇದರ ನಂತರ ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾವನ್ನು ನಮೂದಿಸಲು ನಿಮ್ಮನ್ನು ಕೇಳಲಾಗುತ್ತದೆ. ನಿಮ್ಮ ಮೊಬೈಲ್‌ಗೆ OTP ಬರುತ್ತದೆ. ಇದನ್ನು ನಮೂದಿಸಿದ ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ.
>> ಇಲ್ಲಿ ನೀವು ಕೋರಿದ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ಅದನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿಯನ್ನು ಮಾಡಲಾಗುತ್ತದೆ.
>> ಸಂಪೂರ್ಣ ಮಾಹಿತಿಯನ್ನು ಸಲ್ಲಿಸಿದ ನಂತರ, ಸ್ವಯಂಚಾಲಿತ ಸ್ವೀಕೃತಿ ಸಂಖ್ಯೆಯನ್ನು ರಚಿಸಲಾಗುತ್ತದೆ.
>> ನಿಮ್ಮ ವೋಟರ್ ಐಡಿಯನ್ನು ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ನೀವು ಸ್ವೀಕೃತಿ ಸಂಖ್ಯೆಯನ್ನು ಬಳಸಬಹುದು.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News