PM Kisan: ಸರ್ಕಾರದ ಮಹತ್ವದ ನಿರ್ಧಾರ, ಈ ರೈತರಿಗೆ ಸಿಗಲ್ಲ ಪಿಎಂ ಕಿಸಾನ್ ಪ್ರಯೋಜನ
ಪ್ರಧಾನಮಂತ್ರಿ ಕಿಸಾನ್ ಯೋಜನೆ: ರೈತರ ಅನುಕೂಲಕ್ಕಾಗಿ ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೂಡ ಒಂದು. ಈ ಯೋಜನೆಯಡಿ, ರೈತರು ಆರ್ಥಿಕ ಪ್ರಯೋಜನಗಳನ್ನು ಪಡೆಯುತ್ತಾರೆ. ಆದರೆ, ಪಿಎಂ ಕಿಸಾನ್‌ನ ವೆಬ್ಸೈಟ್ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗದ ಅನೇಕ ವರ್ಗಗಳ ಜನರಿದ್ದಾರೆ, ವಿಶೇಷವಾಗಿ ಆರ್ಥಿಕವಾಗಿ ಸಬಲರಾಗಿರುವವರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ದೇಶದ ರೈತರಿಗೆ ಆರ್ಥಿಕವಾಗಿ ನೆರವಾಗುವ ನಿಟ್ಟಿನಲ್ಲಿ ಜಾರಿಗೆ ತರಲಾಗಿರುವ ಕೇಂದ್ರ ಸರ್ಕಾರದ ಮಹತ್ವದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಇದೆ. ಈ ಯೋಜನೆಯಡಿ ಅರ್ಹರಲ್ಲದ ರೈತರಿಗೆ ಇದರ ಪ್ರಯೋಜನ ಲಭ್ಯವಾಗುವುದಿಲ್ಲ.
ವಾಸ್ತವವಾಗಿ, ರೈತರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೂ ಕೂಡ ಒಂದು. ಕೇಂದ್ರ ಸರ್ಕಾರದ ಈ ಮಹತ್ವದ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಸರ್ಕಾರದಿಂದ ರೈತರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಆದರೆ, ಸರ್ಕಾರದ ಈ ಯೋಜನೆಯ ಲಾಭ ಪಡೆಯಲು ಕೆಲವು ನಿಯಮಗಳು ಮತ್ತು ಷರತ್ತುಗಳನ್ನು ವಿಧಿಸಲಾಗಿದೆ.
ಇದನ್ನೂ ಓದಿ- ಐಸಿಐಸಿಐ ಬ್ಯಾಂಕ್ ಗ್ರಾಹಕರೇ ಗಮನಿಸಿ: ಈ ವಾಟ್ಸಾಪ್ ಸಂದೇಶದ ಬಗ್ಗೆ ಇರಲಿ ಎಚ್ಚರ!
ಪಿಎಂ ಕಿಸಾನ್‌ನ ವೆಬ್‌ಸೈಟ್‌ನ ಪ್ರಕಾರ, ಪಿಎಂ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗದ ಅನೇಕ ವರ್ಗಗಳ ಜನರಿದ್ದಾರೆ, ವಿಶೇಷವಾಗಿ ಆರ್ಥಿಕವಾಗಿ ಸಬಲರಾಗಿರುವ, ಸರಳ ಭಾಷೆಯಲ್ಲಿ ಹೇಳುವುದಾದರೆ ಶ್ರೀಮಂತರು ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ.
ಇದನ್ನೂ ಓದಿ- PM Kisan: ಪಿಎಂ ಕಿಸಾನ್ ನಿಧಿಯ 12ನೇ ಕಂತಿಗೆ ಸಂಬಂಧಿಸಿದಂತೆ ಬಿಗ್ ನ್ಯೂಸ್
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ಯಾರು ಪಡೆಯಲು ಸಾಧ್ಯವಿಲ್ಲ ತಿಳಿಯೋಣ....
ಇಂತಹ ರೈತ ಕುಟುಂಬಗಳು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಿಲ್ಲ.
* 2 ಹೆಕ್ಟೇರ್‌ಗಿಂತ ಹೆಚ್ಚು ಸಾಗುವಳಿ ಭೂಮಿ ಹೊಂದಿರುವವರಿಗೆ ಈ ಯೋಜನೆಯಡಿ ಪ್ರಯೋಜನ ಲಭ್ಯವಿಲ್ಲ.
* ಯಾವುದೇ ಸಾಂವಿಧಾನಿಕ ಹುದ್ದೆ ಹೊಂದಿರುವ ರೈತ ಕುಟುಂಬಗಳು.
* ಹಾಲಿ ಅಥವಾ ಮಾಜಿ ಸಚಿವರು ಅಥವಾ ರಾಜ್ಯ ಸಚಿವರು, ಮಾಜಿ ಅಥವಾ ಹಾಲಿ ಲೋಕಸಭೆ ಅಥವಾ ರಾಜ್ಯಸಭಾ ಸಂಸದರು, ವಿಧಾನಸಭೆ ಅಥವಾ ವಿಧಾನಪರಿಷತ್ ಸದಸ್ಯರು, ಮಹಾನಗರ ಪಾಲಿಕೆಯ ಮೇಯರ್, ಜಿಲ್ಲಾ ಪಂಚಾಯಿತಿ ಮಾಜಿ ಅಥವಾ ಹಾಲಿ ಅಧ್ಯಕ್ಷರು ಸಹ ಯೋಜನೆಯ ಲಾಭವನ್ನು ಪಡೆಯುವಂತಿಲ್ಲ.
* ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು, ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯಮಗಳ ನೌಕರರು, ಸರ್ಕಾರದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಸಾಮಾನ್ಯ ನೌಕರರು ಸಹ ಯೋಜನೆಯ ಪ್ರಯೋಜನವನ್ನು ಪಡೆಯುವಂತಿಲ್ಲ. (ಆದಾಗ್ಯೂ, ಬಹುಕಾರ್ಯಕ ಸಿಬ್ಬಂದಿ, ಗ್ರೂಪ್-4 ಮತ್ತು ಗ್ರೂಪ್-ಡಿ ಉದ್ಯೋಗಿಗಳಿಗೆ ಯಾವುದೇ ನಿರ್ಬಂಧವಿಲ್ಲ. )
* ಮಾಸಿಕ ಪಿಂಚಣಿ 10,000 ರೂ.ಗಿಂತ ಹೆಚ್ಚಿರುವ ನಿವೃತ್ತ ಪಿಂಚಣಿದಾರರು ಸಹ ಯೋಜನೆಯ ಲಾಭವನ್ನು ಪಡೆಯುವಂತಿಲ್ಲ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.