PPF ಸೇರಿದಂತೆ ಇತರ ಉಳಿತಾಯ ಯೋಜನೆಗಳ ಬಡ್ಡಿದರ ಕಡಿತ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

Small savings schemes: ಮಾರ್ಚ್ 31 ರಂದು ಪಿಪಿಎಫ್, ಸುಕನ್ಯಾ ಸಮೃದ್ಧಿಯಂತಹ ಎಲ್ಲಾ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕಡಿತಗೊಳಿಸುವುದಾಗಿ ಸರ್ಕಾರ ಘೋಷಿಸಿತು. ಇದೀಗ ಸರ್ಕಾರದ ಈ ನಿರ್ಧಾರದ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಿಂದ ಮಾಹಿತಿ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ.  

Written by - Yashaswini V | Last Updated : Apr 1, 2021, 09:20 AM IST
  • ಪಿಪಿಎಫ್, ಸುಕನ್ಯಾ ಸಮೃದ್ಧಿಯಂತಹ ಎಲ್ಲಾ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದ ಸರ್ಕಾರ
  • ಇದೀಗ ತನ್ನ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ
  • ಈ ಬಗ್ಗೆ ಸ್ವತಃ ವಿತ್ತ ಸಚಿವರಿಂದಲೇ ಟ್ವೀಟ್ ಮೂಲಕ ಮಾಹಿತಿ
PPF ಸೇರಿದಂತೆ ಇತರ ಉಳಿತಾಯ ಯೋಜನೆಗಳ ಬಡ್ಡಿದರ ಕಡಿತ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ title=
Small savings schemes

ನವದೆಹಲಿ : Small savings schemes: ಮಾರ್ಚ್ 31 ರಂದು ಪಿಪಿಎಫ್, ಸುಕನ್ಯಾ ಸಮೃದ್ಧಿಯಂತಹ ಎಲ್ಲಾ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದ ಸರ್ಕಾರ ಇದೀಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಸ್ವತಃ ಟ್ವೀಟ್ ಮೂಲಕ ಮಾಹಿತಿ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು  ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ 2020-21ರ ಕೊನೆಯ ತ್ರೈಮಾಸಿಕದಲ್ಲಿ ಲಭ್ಯವಿದ್ದ ದರದಲ್ಲಿಯೇ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ - ಪೋಸ್ಟ್ ಆಫೀಸ್ನ ಈ ಯೋಜನೆಗಳಲ್ಲಿ ಹೂಡಿಕೆ ಮಾಡಿ ಸುಲಭವಾಗಿ ಕೋಟ್ಯಾಧಿಪತಿಯಾಗಿ..!

ಅಂದರೆ, 2020-2021ರ ಕೊನೆಯ ತ್ರೈಮಾಸಿಕದಲ್ಲಿ,  ಮಾರ್ಚ್ 2021 ರವರೆಗೆ ಅಸ್ತಿತ್ವದಲ್ಲಿದ್ದ ಬಡ್ಡಿದರಗಳು ಮುಂದೆಯೂ ದೊರೆಯಲಿದೆ ಎಂದಿದ್ದಾರೆ. ಇದರೊಂದಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಹೊರಡಿಸಲಾಗಿದ್ದ ಹಿಂದಿನ ಆದೇಶವನ್ನು ವಾಪಸ್ ಪಡೆಯಲಾಗುವುದು ಎಂದವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ - ನಿಮ್ಮ ಹೂಡಿಕೆಯ ಹಣ ಡಬಲ್ ಮಾಡಲು Post Office ನ Time Deposit ಒಂದು ಉತ್ತಮ ಆಯ್ಕೆ

ವಾಸ್ತವವಾಗಿ ಪ್ರತಿ ತ್ರೈಮಾಸಿಕದಲ್ಲಿ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳ (Small savings schemes) ಬಡ್ಡಿ ದರವನ್ನು ಪರಿಷ್ಕರಿಸುತ್ತದೆ. ಬುಧವಾರ, ಸರ್ಕಾರವು 2021-22ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದ ಬಡ್ಡಿದರಗಳನ್ನು ಪರಿಷ್ಕರಿಸಿದೆ, ಅಂದರೆ 2021 ಏಪ್ರಿಲ್ 1 ರಿಂದ ಜೂನ್ 30 ರವರೆಗೆ ಪರಿಷ್ಕರಿಸಿತ್ತು. ಈ ವೇಳೆ ಪಿಪಿಎಫ್, ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ, ಸೇರಿದಂತೆ ಹಲವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಕಡಿಮೆ ಮಾಡಲಾಗಿತ್ತು. ಇದೀಗ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿರುವುದು ಜನಸಾಮಾನ್ಯರಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News