ಬೆಂಗಳೂರು : ಇತ್ತೀಚೆಗಷ್ಟೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಹೌದು, ನೌಕರರ ತುಟ್ಟಿ ಭತ್ಯೆ ದರದಲ್ಲಿ 4 ಪ್ರತಿಶತದಷ್ಟು ಹೆಚ್ಚಳವಾಗುವುದು ಖಚಿತವಾಗಿದೆ. AICPI ಅಂಕಿಅಂಶಗಳ ಆಧಾರದ ಮೇಲೆ ಈ ಹೆಚ್ಚಳವಾಗಲಿದೆ. ಈ ನಡುವೆ, ಮುಂಬರುವ ವರ್ಷಗಳಲ್ಲಿ ಕೇಂದ್ರ ನೌಕರರ ವೇತನ ಹೆಚ್ಚಳವು ಹೊಸ ಸೂತ್ರವನ್ನು ಆಧರಿಸಿ ನಡೆಯಲಿದೆ. ಪ್ರಸ್ತುತ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಪ್ರಕಾರ ವೇತನ ನೀಡಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ 8 ನೇ ವೇತನ ಆಯೋಗದ ಮಾತು ಕೇಳಿ ಬಂದಿತ್ತು. ಇದೀಗ 8ನೇ ವೇತನ ಆಯೋಗದ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಕಳೆದ ಕೆಲವು ದಿನಗಳಿಂದ ಸರ್ಕಾರ 8ನೇ ವೇತನ ಆಯೋಗವನ್ನು ಶೀಘ್ರದಲ್ಲೇ ಜಾರಿಗೆ ತರಬಹುದು ಎಂದು ಹೇಳಲಾಗುತ್ತಿದೆ. ಆದರೆ, ಇದೀಗ ಸರ್ಕಾರ 8ನೇ ವೇತನ ಆಯೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಿದೆ. ಅದರ ಪ್ರಕಾರ ಹಣಕಾಸು ಸಚಿವ ಪಂಕಜ್ ಚೌಧರಿ ಇತ್ತೀಚೆಗೆ ರಾಜ್ಯಸಭೆಯಲ್ಲಿ ಮುಂಬರುವ ಹೊಸ ಆಯೋಗದ ಬಗ್ಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಇದೇ ತಿಂಗಳಿನಲ್ಲಿ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ! ಬೆಂಗಳೂರಿನಿಂದಲೇ ಓಡಾಟ ನಡೆಸಲಿರುವ ರೈಲು
ಕಾರ್ಯಕ್ಷಮತೆ ಆಧಾರಿತ ವ್ಯವಸ್ಥೆಯಲ್ಲಿ ರೇಟಿಂಗ್ ಪ್ರಕಾರ ವೇತನ ಹೆಚ್ಚಳ :
ಉದ್ಯೋಗಿಗಳು ತಮ್ಮ ಕಾರ್ಯಕ್ಷಮತೆಗೆ ಅನುಗುಣವಾಗಿ ರೇಟಿಂಗ್ ಅನ್ನು ಪಡೆಯುತ್ತಾರೆ. ಅದರ ಆಧಾರದ ಮೇಲೆ ವೇತನ ಹೆಚ್ಚಾಗುತ್ತದೆ. ಇನ್ನು ಏಳನೇ ವೇತನ ಆಯೋಗದ ಶಿಫಾರಸಿನಂತೆ, ಕೇಂದ್ರ ನೌಕರರು ಮತ್ತು ಪಿಂಚಣಿದಾರರ ವೇತನ, ಸವಲತ್ತುಗಳು ಮತ್ತು ಪಿಂಚಣಿಗಳ ರಚನೆಯನ್ನು ಬದಲಾಯಿಸಲು ಹೊಸ ಆಯೋಗವನ್ನು ಸ್ಥಾಪಿಸುವ ಅಗತ್ಯವಿಲ್ಲ.
ಯಾವ ಆಧಾರದ ಮೇಲೆ ವೇತನವನ್ನು ಪರಿಷ್ಕರಿಸಲಾಗುತ್ತದೆ? :
ಮತ್ತೊಂದೆಡೆ, ಹಣಕಾಸು ಸಚಿವ ಪಂಕಜ್ ಚೌಧರಿ ಒಮ್ಮೆ ಸಂಸತ್ತಿನಲ್ಲಿ ಎಲ್ಲಾ ಭತ್ಯೆಗಳು ಮತ್ತು ವೇತನಗಳನ್ನು ಐಕ್ರಾಯ್ಡ್ ಸೂತ್ರದ ಆಧಾರದ ಮೇಲೆ ಪರಿಷ್ಕರಿಸಬಹುದು ಎಂದು ಹೇಳಿದ್ದರು.
ಇದನ್ನೂ ಓದಿ : ಮಹಿಳೆಯರ ಕಲ್ಯಾಣಕ್ಕಾಗಿಯೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಿವು! ನೀವೂ ಲಾಭ ಪಡೆಯಬಹುದು
8ನೇ ವೇತನ ಆಯೋಗದ ಬಗ್ಗೆ ಯಾವುದೇ ಕಲ್ಪನೆ ಇಲ್ಲ :
ಪ್ರಸ್ತುತ ಈ ಬಗ್ಗೆ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಪಂಕಜ್ ಚೌಧರಿ ಸ್ಪಷ್ಟಪಡಿಸಿದ್ದಾರೆ. ವೇತನ ಆಯೋಗವನ್ನು 10 ವರ್ಷಗಳಿಗೊಮ್ಮೆ ಮಾತ್ರ ರಚಿಸಲಾಗುತ್ತದೆ. ಹೀಗಾಗಿ 10 ವರ್ಷಗಳಿಗಿಂತ ಮುನ್ನವೇ ಈ ಬಗ್ಗೆ ಚರ್ಚೆ ಸರಿಯಲ್ಲ ಎಂದಿದ್ದಾರೆ. ಆದರೆ ಮುಂದಿನ ಅವಧಿಯಲ್ಲಿ ಕಾರ್ಯನಿರ್ವಹಣೆ ಆಧಾರಿತ ವ್ಯವಸ್ಥೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದರು.
2016ರಲ್ಲಿ ಕೇಂದ್ರ ಸರಕಾರ 7ನೇ ವೇತನ ಆಯೋಗವನ್ನು ಜಾರಿಗೊಳಿಸಿತ್ತು. ಈಗ 7 ವರ್ಷಕ್ಕೂ ಹೆಚ್ಚು ಕಾಲ ಕಳೆದಿದೆ. ವರದಿಯ ಪ್ರಕಾರ, ಕೇಂದ್ರ ನೌಕರರ ವೇತನವನ್ನು ನಿಗದಿಪಡಿಸಲು 8 ನೇ ವೇತನ ಆಯೋಗ ರಚಿಸುವ ಉದ್ದೇಶ ಸರ್ಕಾರದ ಮುಂದೆ ಇಲ್ಲ. ಆದರೆ ಇದರ ಹೊರತಾಗಿಯೂ ಹೊಸ ಸೂತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಹಾಗಾಗಿ ಕೇಂದ್ರ ನೌಕರರ ವೇತನವನ್ನು ಪ್ರತಿ ವರ್ಷ ನಿಗದಿಪಡಿಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.