Budget 2024 : ಅನೇಕ ಸರ್ಕಾರಿ ಯೋಜನೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ.ಈ ಬಾರಿಯ ಬಜೆಟ್ ನಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರ ದೊಡ್ಡ ಉಡುಗೊರೆ ನೀಡಬಹುದು. ಈ ಬಾರಿ ಸರ್ಕಾರ ಅಟಲ್ ಪಿಂಚಣಿ ಯೋಜನೆಯ ಮೊತ್ತವನ್ನು ಹೆಚ್ಚಿಸಬಹುದು ಎಂದು ನಿರೀಕ್ಷಿಸಲಾಗಿದೆ. ಈ ಯೋಜನೆಯಲ್ಲಿ, ಕನಿಷ್ಠ ಪಿಂಚಣಿಯನ್ನು ಸರ್ಕಾರವು ಖಾತರಿಪಡಿಸುತ್ತದೆ. 


COMMERCIAL BREAK
SCROLL TO CONTINUE READING

ಫೆಬ್ರವರಿ 1 ರಂದು ಹಣಕಾಸು ಸಚಿವರು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ವಿಶೇಷ ಘೋಷಣೆ ಮಾಡುವ ಸಾಧ್ಯತೆ ಇದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಸರ್ಕಾರಕ್ಕೆ ಪತ್ರ ಬರೆದು ಅಟಲ್ ಪಿಂಚಣಿ ಯೋಜನೆಯಡಿ ಪಡೆದ ಪಿಂಚಣಿ ಮೊತ್ತವನ್ನು ಹೆಚ್ಚಿಸುವಂತೆ ಮನವಿ ಮಾಡಿದೆ. 


ಇದನ್ನೂ ಓದಿ : ಇನ್ನು ಕೇವಲ 12 ದಿನಗಳಲ್ಲಿ ಹೊರ ಬೀಳುವುದು ನಿರ್ಧಾರ !ದುಪ್ಪಟ್ಟಾಗುವುದು ಸರ್ಕಾರಿ ನೌಕರರ ವೇತನ


ಪಿಂಚಣಿ ಮೊತ್ತ 7000 ರೂ.ಗೆ ಏರಬಹುದು : 
ಮಾಧ್ಯಮಗಳೊಂದಿಗೆ ಮಾತನಾಡಿದ ಪಿಎಫ್‌ಆರ್‌ಡಿಎ ಅಧ್ಯಕ್ಷ ದೀಪಕ್ ಮೊಹಂತಿ, ಯೋಜನೆಯ ಮೊತ್ತವನ್ನು ಹೆಚ್ಚಿಸಲು ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಗೂ ಮುನ್ನ ಸಾರ್ವಜನಿಕರ ಮನವೊಲಿಸಲು ಸರ್ಕಾರ ಗರಿಷ್ಠ ಪಿಂಚಣಿ ಮೊತ್ತವನ್ನು 5000 ರೂ.ನಿಂದ 7000 ರೂ.ಗೆ ಹೆಚ್ಚಿಸುವ ಸಾಧ್ಯತೆ ಇದೆ.  


ಯೋಜನೆಯ ಲಾಭ ಪಡೆಯುತ್ತಿದ್ದಾರೆ 5.3 ಕೋಟಿ ಜನ :
ದೇಶದಲ್ಲಿ ಹಣದುಬ್ಬರ ಹೆಚ್ಚುತ್ತಿರುವ  ಹಿನ್ನೆಲೆಯಲ್ಲಿ ಗರಿಷ್ಠ ಪಿಂಚಣಿ ಮೊತ್ತವನ್ನೂ ಹೆಚ್ಚಿಸಬೇಕು. ಪ್ರಸ್ತುತ ಅಟಲ್ ಪಿಂಚಣಿ ಯೋಜನೆಯಲ್ಲಿ  5.3 ಕೋಟಿಗೂ ಹೆಚ್ಚು ಷೇರುದಾರರಿದ್ದಾರೆ.ಪ್ರಸ್ತುತ ಹೆಚ್ಚಿನ ಸಂಖ್ಯೆಯ ಜನರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. 


ಇದನ್ನೂ ಓದಿ : 2024ರಲ್ಲಿಯೂ ಭಾರತದ ಪ್ರಬಲ ಬ್ರ್ಯಾಂಡ್ ಆಗಿ ಮುಂದುವರಿದ ಜಿಯೋ: ಬ್ರ್ಯಾಂಡ್ ಫೈನಾನ್ಸ್ ವರದಿ


 2015-16 ರಲ್ಲಿ ಈ ಯೋಜನೆ ಪ್ರಾರಂಭ : 
2015-16ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರ ಈ ಯೋಜನೆ ಆರಂಭಿಸಿತ್ತು. ಅಸಂಘಟಿತ ವಲಯದ ಜನರಿಗಾಗಿ ಈ ಯೋಜನೆ ಆರಂಭಿಸಲಾಗಿದೆ. ಅಸಂಘಟಿತ ವಲಯದ ಜನರು ನಿವೃತ್ತಿಯ ನಂತರ ಆದಾಯದ ಕೊರತೆಯಿಂದಾಗಿ ಪಿಂಚಣಿಗಾಗಿ ಈ ಯೋಜನೆಯ ಲಾಭವನ್ನು ಪಡೆಯಬಹುದು. ಈ ಯೋಜನೆಯನ್ನು PFRDA ನಡೆಸುತ್ತಿದೆ. 


ಯಾರು ಯೋಜನೆಯ ಲಾಭ ಪಡೆಯಬಹುದು? : 
ಈ ಯೋಜನೆಯಡಿ, ಪ್ರತಿ ತಿಂಗಳು 1000 ರಿಂದ 5000 ರೂ.ಪಿಂಚಣಿ ಪಡೆಯಬಹುದು.   ಈ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯ ವಯಸ್ಸು 18 ರಿಂದ 40 ವರ್ಷಗಳ ನಡುವೆ ಇರಬೇಕು. ಅಂದರೆ 40 ವರ್ಷಗಳ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.