Gruha Jyothi Yojana: ಗೃಹ ಜ್ಯೋತಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ!
Gruha Jyothi Scheme: ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ RR ಸಂಖ್ಯೆಯೊಂದಿಗೆ ನೋಂದಣಿ ಮಾಡಿಕೊಂಡು ಈ ಯೋಜನೆಯ ಲಾಭ ಪಡೆಯಬಹುದು.
Gruha Jyothi Yojana: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಯೋಜನೆಯೂ ಒಂದು. ಈ ಯೋಜನೆಯಡಿ ಪ್ರತಿತಿಂಗಳು 200 ಯೂನಿಟ್‌ವರೆಗೆ ಮನೆ ಬಳಕೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಇದೀಗ ಗೃಹ ಜ್ಯೋತಿ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ ದೊರಕಿದೆ. ಹೌದು, ಗೃಹ ಜ್ಯೋತಿ ಫಲಾನುಭವಿಗಳಿಗೆ ಸಿಹಿಸಿದ್ದು ಸಿಕ್ಕಿದ್ದು, ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ ಒದಗಿಸಲಾಗುತ್ತದೆ. ಮನೆ ಬದಲಾಯಿಸಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ RR ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ.
ಈ ಯೋಜನೆಗೆ 1 ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೋ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ RR ಸಂಖ್ಯೆಯೊಂದಿಗೆ ನೋಂದಣಿ ಮಾಡಿ ಯೋಜನೆಯ ಲಾಭ ಪಡೆಯಬಹುದು. ಫಲಾನುಭವಿಗಳು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹಜ್ಯೋತಿ ಪೋರ್ಟಲ್ ಓಪನ್ ಆಗದಿದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆ ಪಡೆಯಬಹುದು.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ!
ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್ ನಂಬರ್ ಜೊತೆಗೆ ಲಿಂಕ್ ಆಗಿರುವ RR ನಂಬರ್ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್ ಜೊತೆಗೆ ಲಿಂಕ್ ಆಗಿರದ RR ನಂಬರ್‌ಗೆ ಲಿಂಕ್ ಮಾಡಬಹುದು. ಅಂದರೆ ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. 2024ರ ಜೂನ್‌ವರೆಗೆ ಒಟ್ಟು 1.67 ಕೋಟಿ ಜನರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಒಟ್ಟು 1.56 ಕೋಟಿ ಫಲಾನುಭವಿಗಳಿದ್ದಾರೆ. 2023 ಆಗಸ್ಟ್‌ನಿಂದ 2024ರ ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು ಸಬ್ಸಿಡಿ ಮೊತ್ತ 8,239 ಕೋಟಿ ರೂ. ಆಗಿದೆ.
ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಮಧ್ಯಮ ವರ್ಗದ ಜನರಿಗೆ ಈ ಯೋಜನೆ ಹೆಚ್ಚಿನ ಅನುಕೂಲವಾಗಿದೆ. ವಿದ್ಯುತ್ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಅನೇಕರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ʼನುಡಿದಂತೆ ನಡೆದಿದ್ದೇವೆಂಬ ಸಾರ್ಥಕ ಭಾವ ನಮ್ಮಲ್ಲಿದೆ. ಡಿ-ಲಿಂಕ್ ಸೌಲಭ್ಯ ಬೇಕೆಂದು ಜನರು ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ ಜನತೆಗೆ ಈ ಸೌಲಭ್ಯ ಒದಗಿಸಲಾಗಿದೆʼ ಎಂದಿದ್ದಾರೆ.
ಇದನ್ನೂ ಓದಿ: ಮೈತ್ರಿ ಪಕ್ಷಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.