Gruha Lakshmi Scheme: ಹಂತ ಹಂತವಾಗಿ ಖಾತೆಗೆ ʻಗೃಹಲಕ್ಷ್ಮಿʼ ಹಣ ಜಮಾ!

Gruha Lakshmi Scheme: ಈ ಬಗ್ಗೆ ಮಾತನಾಡಿರುವ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ʼರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ಜೂನ್‌ ಮತ್ತು ಜುಲೈ ತಿಂಗಳ ಹಣ ಹಂತಹಂತವಾಗಿ ಯಜಮಾನಿಯರ ಖಾತೆಗೆ ಜಮಾ ಆಗಲಿದೆʼ ಎಂದಿದ್ದಾರೆ. 

Written by - Puttaraj K Alur | Last Updated : Jul 20, 2024, 08:46 AM IST
  • ಕಳೆದೆರಡು ತಿಂಗಳಿನಿಂದ ʼಗೃಹಲಕ್ಷ್ಮಿʼ ಯೋಜನೆಯ ಹಣ ಸಂದಾಯವಾಗಿಲ್ಲ
  • ಹಣ ಬರದ ಕಾರಣ ಪ್ರತಿದಿನ ಮಹಿಳೆಯರು ಬ್ಯಾಂಕುಗಳಿಗೆ ಅಲೆದಾಡುತ್ತಿದ್ದಾರೆ
  • ಇನ್ಮುಂದೆ ಹಂತ ಹಂತವಾಗಿ ಖಾತೆ ಜಮಾ ಆಗಲಿದೆ ʼಗೃಹಲಕ್ಷ್ಮಿʼ ಯೋಜನೆ ಹಣ
Gruha Lakshmi Scheme: ಹಂತ ಹಂತವಾಗಿ ಖಾತೆಗೆ ʻಗೃಹಲಕ್ಷ್ಮಿʼ ಹಣ ಜಮಾ!  title=
ʼಗೃಹಲಕ್ಷ್ಮಿʼ ಯೋಜನೆ ಅಪ್‌ಡೇಟ್‌!

Gruha Lakshmi Scheme: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ʼಗೃಹಲಕ್ಷ್ಮಿʼ ಯೋಜನೆ ಹಣ ಲೋಕಸಭಾ ಚುನಾವಣೆ ನಂತರ ಯಜಮಾನಿಯರ ಖಾತೆಗೆ ಬಂದಿಲ್ಲ. ಹಣ ಬಾರದಿರುವುದು ಮಹಿಳೆಯರನ್ನು ಕಂಗೆಡೆಸಿದ್ದು, ಅವರು ಪ್ರತಿನಿತ್ಯ ಬ್ಯಾಂಕ್‌ ಹಾಗೂ ಅಂಗನವಾಡಿಗಳಿಗೆ ಅಲೆಯುವಂತಾಗಿದೆ.

ಕರ್ನಾಟಕದಲ್ಲಿ ಮೇ 7ರಂದು ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿತ್ತು. ಇದೇ ವೇಳೆ ಮಹಿಳೆಯರ ಖಾತೆಗೆ ಮೇ ತಿಂಗಳ ʼಗೃಹಲಕ್ಷ್ಮಿʼ ಹಣ ಸಂದಾಯವಾಗಿತ್ತು. ಇದಾಗಿ ಎರಡು ತಿಂಗಳು ಕಳೆದರೂ ಮತ್ತೆ ಹಣ ಬರದಿರುವುದು ಮಹಿಳೆಯರಲ್ಲಿ ಗೊಂದಲ ಮೂಡುವಂತೆ ಮಾಡಿದೆ.

ಇದನ್ನೂ ಓದಿ: ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನೆ

ಇದೀಗ ಈ ಯೋಜನೆಯ ಬಗ್ಗೆ ಮಹತ್ವದ ಅಪ್‌ಡೇಟ್‌ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ʼರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿರುವ ʼಗೃಹಲಕ್ಷ್ಮಿʼ ಯೋಜನೆಯ ಜೂನ್‌ ಮತ್ತು ಜುಲೈ ತಿಂಗಳ ಹಣ ಹಂತಹಂತವಾಗಿ ಯಜಮಾನಿಯರ ಖಾತೆಗೆ ಜಮಾ ಆಗಲಿದೆʼ ಎಂದಿದ್ದಾರೆ. 

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಜಿಲ್ಲೆಗಳಾದ್ಯಂತ ಹಂತ ಹಂತವಾಗಿ ʼಗೃಹಲಕ್ಷ್ಮಿʼ ಹಣ ವಿತರಣೆಯೊಂದಿಗೆ ಯಾವುದೇ ಅಡೆತಡೆಯಿಲ್ಲದೆ ಯೋಜನೆ ಮುಂದುವರಿಯುತ್ತದೆ ಎಂದು ಫಲಾನುಭವಿಗಳಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿರಿಲಯನ್ಸ್ ಜಿಯೋ ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ: ಮುಂದಿನ ವರ್ಷ ಐಪಿಒ ಸಾಧ್ಯತೆ

ಕಳೆದ ಆಗಸ್ಟ್‌ನಲ್ಲಿ ಪ್ರಾರಂಭಿಸಲಾದ ʼಗೃಹಲಕ್ಷ್ಮಿʼ ಯೋಜನೆಯು ಆರ್ಥಿಕವಾಗಿ ದುರ್ಬಲ ವರ್ಗಗಳ ಅರ್ಹ ಮಹಿಳೆಯರಿಗೆ ಮಾಸಿಕ 2,000 ರೂ.ಗಳ ಆರ್ಥಿಕ ನೆರವು ನೀಡುವ ಗುರಿ ಹೊಂದಿದೆ. ಆದರೆ ಕಳೆದ ಕೆಲವು ತಿಂಗಳುಗಳಿಂದ ʼಗೃಹಲಕ್ಷ್ಮಿʼ ಹಣ ಸಿಗದಿರುವುದು ಕೋಟ್ಯಂತರ ಮಹಿಳೆಯರಿಗೆ ಬೇಸರ ತರಿಸಿದೆ. ಅನೇಕರು ಪ್ರತಿದಿನ ಬ್ಯಾಂಕುಗಳಿಗೆ ಎಡತಾಕುತ್ತಿದ್ದು, ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News