Gruha Lakshmi Scheme: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಈ ಯೋಜನೆಯಡಿ ಪ್ರತಿಯೊಂದು ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತದೆ. ಮಹಿಳಾ ಸಬಲೀಕರಣದ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಸಿಬಂದ ಈ ಯೋಜನೆಯಡಿ ಈಗಾಗಲೇ 10 ಕಂತುಗಳ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಲೋಕಸಭಾ ಚುನಾವಣೆ ಬಳಿಕ ಯಾವುದೇ ಮಹಿಳೆಯರಿಗೆ ಹಣ ತಲುಪಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 


COMMERCIAL BREAK
SCROLL TO CONTINUE READING

ಗೃಹಲಕ್ಷ್ಮಿ ಯೋಜನೆಯಡಿ ಮೇ ತಿಂಗಳವರೆಗೂ ಹಣ ಜಮಾ ಆಗಿದೆ. ಆದರೆ ಜೂನ್‌, ಜುಲೈ ತಿಂಗಳ ಹಣ ಇನ್ನೂ ಜಮಾ ಆಗಿಲ್ಲ. ಈ ಬಗ್ಗೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಯೋಜನೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿರುವ ಅವರು, ʼಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣವನ್ನು ಇನ್ನು 10 ದಿನಗಳ ಒಳಗಾಗಿ ಖಾತೆಗೆ ಹಾಕಲಾಗುತ್ತದೆʼ ಎಂದು ಹೇಳಿದ್ದಾರೆ. ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲವೆಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳು, ಮೇ ತಿಂಗಳ ಹಣವನ್ನು ಈಗಾಗಲೇ ಹಾಕಿದ್ದೇವೆ. ಜೂನ್ ಮತ್ತು ಜುಲೈ ತಿಂಗಳ ಹಣ ತಾಂತ್ರಿಕ ಕಾರಣದಿಂದ ತಡವಾಗಿದೆ. ಶೀಘ್ರವೇ ಈ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಹಾಕಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.


ಇದನ್ನೂ ಓದಿ: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ: ಸಿಎಂ ಸಿದ್ದರಾಮಯ್ಯ


ಪರಿಷತ್‌‌ನಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯೆ ಭಾರತೀ ಶೆಟ್ಟಿ ಅವರು ಗೃಹಲಕ್ಷ್ಮಿ ಯೋಜನೆ ಕುರಿತು ಪ್ರಶ್ನಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣ ಕಳೆದ 4 ತಿಂಗಳಿನಿಂದ ಹಣ ಬಿಡುಗಡೆಯಾಗುತ್ತಿಲ್ಲ. ಹಣ ಸರಿಯಾಗಿ ಆಯಾ ತಿಂಗಳಿಗೆ ಬರುವಂತೆ ನೋಡಿಕೊಳ್ಳಬೇಕು ಅಂತಾ ಒತ್ತಾಯಿಸಿದ್ದರು. ಈ ಬಗ್ಗೆ ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾ ನಾಯಕ, ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದರು.


ಗೃಹಲಕ್ಷ್ಮಿ ಯೋಜನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ʼಗೃಹಲಕ್ಷ್ಮಿ ಯೋಜನೆಯನ್ನು 5 ವರ್ಷ ಕೊಡುತ್ತೇವೆ ಅಂತಾ ಸಿಎಂ ಸಿದ್ದರಾಮಯ್ಯನವರು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಲೋಕಸಭಾ ಚುನಾವಣೆ ವೇಳೆ ಒಂದೇ ಬಾರಿಗೆ 2 ಕಂತುಗಳಲ್ಲಿ ಹಣ ಹಾಕಿ ಮಹಿಳೆಯರನ್ನು ಮೆಚ್ಚಿಸಿದ್ದರು. ಆದರೆ ಚುನಾವಣೆ ಮುಗಿದ ಮೇಲೆ ಹಣ ಹಾಕಿಲ್ಲ. ಲೋಕಸಭಾ ಚುನಾವಣೆಯ ಸೋಲಿನಿಂದ ಕಾಂಗ್ರೆಸ್‌ಗೆ ಆಘಾತವಾಗಿದೆ. ಹೀಗಾಗಿ ರಾಜ್ಯದ ಮಹಿಳೆಯರಿಗೆ ಹಣ ಹಾಕಿಲ್ಲ. ಇದೀಗ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ಟೀಕಿಸಿದ್ದರು.  


ಇದನ್ನೂ ಓದಿ: ಜುಲೈ 27ರಿಂದ ಮೂರು ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ ಸಾರ್ವಜನಿಕರ ಸಹಕಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ


ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ʼಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣವನ್ನು ಮುಂದಿನ 10 ದಿನಗಳೊಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು. ಈ ಹಣವನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ನೀಡಲಾಗುತ್ತಿದೆ. ಚುನಾವಣಾ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹೀಗಾಗಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.  


ಈಗಾಗಲೇ ನೇರ ನಗದು ಹಣ ವರ್ಗಾವಣೆಯ ಮೂಲಕ ಹಣ ಹಾಕಲು ಪ್ರಾರಂಭಿಸಿದ್ದೇವೆ. ಗರಿಷ್ಠ 10 ದಿನಗಳ ಒಳಗೆ 2 ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ರಾಜ್ಯದ ಮಹಿಳೆಯರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲವೆಂದು ಅವರು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.