GruhaLakshmi Scheme: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ!
GruhaLakshmi Scheme: ಮೊದಲು ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಇವಿಷ್ಟು ಜಿಲ್ಲೆಗಳಿಗೆ ಬಿಡುಗಡೆಯಾಗಲಿದೆ.
GruhaLakshmi Scheme: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ 11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದೆ ಎನ್ನಲಾಗಿದೆ. ಈಗಾಗಲೇ 10 ಕಂತುಗಳ ಹಣ ಜಮಾ ಆಗಿದ್ದು, 11ನೇ ಕಂತು ಮತ್ತು ನಂತರದ ಕಂತುಗಳು ಎರಡ್ಮೂರು ದಿನಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ರಾಜ್ಯ ಸರ್ಕಾರವು ಅರ್ಹ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ 10 ಕಂತುಗಳ ಹಣವನ್ನು ಯಶಸ್ವಿಯಾಗಿ ವರ್ಗಾಯಿಸಿದೆ. ಆದರೆ ಅಪೂರ್ಣ KYC ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ.
ಇದನ್ನೂ ಓದಿ: HSRP deadline: ವಾಹನ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್!
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಸರ್ಕಾರದಿಂದ ಶೀಘ್ರವೇ ಬಿಡುಗಡೆಯಾಗಲಿದೆ. ಮೊದಲು ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಇವಿಷ್ಟು ಜಿಲ್ಲೆಗಳಿಗೆ ಬಿಡುಗಡೆಯಾಗಲಿದೆ. ನಂತರ ಇನ್ನುಳಿದ ಜಿಲ್ಲೆಗಳ ಫಲಾನುಭವಿಗಳಿಗೂ ಯೋಜನೆಯ ಹಣ ತಲುಪಲಿದೆ ಎಂದು ತಿಳಿದುಂಬಿದೆ.
ಗೃಹಲಕ್ಷ್ಮಿ ಹಣ ಬರದಿದ್ದವರು ಏನು ಮಾಡಬೇಕು?
ಹಣ ವರ್ಗಾವಣೆಗೆ ಅನುಕೂಲವಾಗುವಂತೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಬೇಕು
ಪಡಿತರ ಚೀಟಿ ವಿವರಗಳನ್ನು ನವೀಕರಿಸಬೇಕು
KYC ಅವಶ್ಯಕತೆಗಳನ್ನು ಪೂರ್ಣಗೊಳಿಸುವುದು ಅತ್ಯಗತ್ಯ
ದಾಖಲೆಗಳ ಮೂಲಕ ಮಾತ್ರ ಅರ್ಹ ಮಹಿಳೆಯರು ಗೃಹಲಕ್ಷ್ಮಿ ಯೋಜನೆಡಿ 11ನೇ ಕಂತು ಮತ್ತು ಬಾಕಿ ಇರುವ ಕಂತುಗಳ ಹಣ ಪಡೆಯಬಹುದು
ಇದನ್ನೂ ಓದಿ: ಎಟಿಎಂ ಕಾರ್ಡ್ ಬಳಕೆದಾರರಿಗೆ ಬಿಗ್ ಶಾಕ್; ಇನ್ಮುಂದೆ ಹೆಚ್ಚಿನ ಶುಲ್ಕ ಪಾವತಿಸಬೇಕು!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.