Guarantee Schemes: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಸೇರಿವೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ರೂಪಿಸಿದೆ.‌ ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.


COMMERCIAL BREAK
SCROLL TO CONTINUE READING

ಕುಟುಂಬದ ನಿರ್ವಹಣೆಯಲ್ಲಿ ಮನೆಯ ಯಜಮಾನಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಲಿ ಎಂದು ಸರ್ಕಾರವು ಕುಟುಂಬದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಜಮಾ ಮಾಡಲು ಈ ಯೋಜನೆ ಅನುಷ್ಠಾನ ಮಾಡಿದೆ. ಈಗಾಗಲೇ ಮೇ ತಿಂಗಳವರೆಗೆ 10 ಕಂತುಗಳ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ. ತಾಂತ್ರಿಕ ಕಾರಣದಿಂದ ಜೂನ್‌ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈಗ ಈ ಎರಡೂ ತಿಂಗಳ 4000 ರೂ. ಹಣವನ್ನು ಒಟ್ಟಿಗೆ ಜಮಾ ಮಾಡುವುದಾಗಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ತಿಳಿಸಿದ್ದಾರೆ.


ಇದನ್ನೂ ಓದಿ: ಏಕಾಏಕಿ 10 ದಿನಗಳ ಕಾಲ ರಜೆ ಘೋಷಿಸಿದ ವಿಶ್ವದ ಅತಿದೊಡ್ಡ ವಜ್ರಾಭರಣಗಳ ತಯಾರಕ ಕಂಪನಿ..!


ಇನ್ನು ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು, ಆದರೆ ಈಗ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಉಳಿದ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ಗಳಂತೆ ಐದು ಕೆಜಿ ಅಕ್ಕಿಗೆ ಒಟ್ಟು 170 ರೂ.ವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಅಥವಾ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್‌ ಹೇಗೆ ಚೆಕ್‌ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  


ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಹಣದ ಸ್ಟೇಟಸ್‌ ಈ ರೀತಿ ಚೆಕ್‌  


  • ನಿಮ್ಮ ಮೊಬೈಲ್‌ನಲ್ಲಿ ಪ್ಲೇ ಸ್ಟೋರ್‌ ಓಪನ್‌ ಮಾಡಿಕೊಳ್ಳಿ

  • DBT Karnataka ಅಪ್ಲಿಕೇಶನ್‌ ಡೌನ್‌ಲೋಡ್ ಮಾಡಿ

  • ಡೌನ್‌ಲೋಡ್ ಮಾಡಿದ ಅಪ್ಲಿಕೇಶನ್‌ ಓಪನ್‌ ಮಾಡಿ

  • ನಂತರ ನಿಮ್ಮ ಆಧಾರ್‌ ಕಾರ್ಡ್‌ ನಂಬರ್‌ ಮತ್ತು ಮೊಬೈಲ್‌ ನಂಬರ್‌ ಹಾಕಿ. ಈಗ ಆಧಾರ್‌ ಕಾರ್ಡ್‌ಗೆ ಲಿಂಕ್‌ ಇರುವ ನಂಬರ್‌ಗೆ ಬಂದಿರುವ OTP ನಮೂದಿಸಿ

  • 4 ಡಿಜಿಟ್‌ ಇರುವ ಕೊಡ್ ಕ್ರಿಯೇಟ್ ಮಾಡಿ (Password)

  • ಈಗ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಸಹಿತ ಎಲ್ಲಾ ವಿವರಗಳನ್ನು ತಿಳಿದುಕೊಳ್ಳಬಹುದು


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಬಂಪರ್ !ವೇತನದಲ್ಲಿ ಆಗುವುದು ಒಂದು ಲಕ್ಷಕ್ಕಿಂತ ಅಧಿಕ ಹೆಚ್ಚಳ ! ಯಾವ ಲೆಕ್ಕಾಚಾರದಲ್ಲಿ ಎನ್ನುವ ವಿವರ ಇಲ್ಲಿದೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.