Guarantee Schemes: 2023ರ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವುದಕ್ಕಿಂತ ಮೊದಲು ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ನೀಡುವ ʼಶಕ್ತಿʼ ಯೋಜನೆ​, ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ʼಗೃಹಲಕ್ಷ್ಮೀʼ ಯೋಜನೆ, ಉಚಿತ ಅಕ್ಕಿ ನೀಡುವ ʼಅನ್ನಭಾಗ್ಯʼ, ೨೦೦ ಯೂನಿಟ್‌ ಉಚಿತ ವಿದ್ಯುತ್ ಹಾಗೂ ಪದವೀಧರರಿಗೆ ನಿರುದ್ಯೋಗ ಭತ್ಯೆ. ಇವು ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಯೋಜನೆಗಳನ್ನು ಜಾರಿ ಮಾಡಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯ ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿತ್ತು.


COMMERCIAL BREAK
SCROLL TO CONTINUE READING

ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಜ್ಯೋತಿ ಯೋಜನೆಯ ಮೂಲಕ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ₹2000, ಅನ್ನಭಾಗ್ಯ ಯೋಜನೆಯ ಮೂಲಕ 5 ಕೆಜಿ ಅಕ್ಕಿ ಹಾಗೂ 5 ಕೆಜಿಯ ಅಕ್ಕಿಯ ಹಣ ಮತ್ತು ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ₹3000 ಸ್ಟೈಪಂಡ್ ಕೊಡುವ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರವು ಜಾರಿಗೆ ತಂದಿದ್ದು, ರಾಜ್ಯದ ಜನರು ಈ ಯೋಜನೆಗಳ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಇದರ ಹೊಡೆತ ಈಗ ಜನರ ಮೇಲೆ ಬಿದ್ದಿದೆ.


ಇದನ್ನೂ ಓದಿ: ಜುಲೈಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ! ಹೇಗೆ ಎಷ್ಟು ಸಂಪೂರ್ಣ ಲೆಕ್ಕಾಚಾರ ಇಲ್ಲಿದೆ


ಈ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸುವುದಕ್ಕೆ ಸರ್ಕಾರಕ್ಕೆ ಸಾವಿರಾರು ಕೋಟಿ ಹಣ ಬೇಕಾಗಿದೆ. ಈಗಾಗಲೇ 5 ಯೋಜನೆಗಳ ನಿರ್ವಹಣೆಗೆ ಸರ್ಕಾರ ₹56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಇನ್ನು ಪ್ರತಿ ತಿಂಗಳು ಎಲ್ಲಾ ಯೋಜನೆಗಳನ್ನು ಉಚಿತವಾಗಿ ಜನರಿಗೆ ತಲುಪಿಸುವ ಹೊರೆ ಸರ್ಕಾರದ ಮೇಲಿದೆ. ಹೀಗಾಗಿ ಸರ್ಕಾರವು ಇದೀಗ ಪ್ರಮುಖ ನಿರ್ಧಾರಗಳನ್ನು ಮಾಡುತ್ತಿದ್ದು, ಇದರಿಂದ ಎಲ್ಲದರ ಹೊರೆ ನೇರವಾಗಿ ಜನರ ಮೇಲೆ ಬೀಳುತ್ತಿದೆ. ಇತ್ತೀಚೆಗಷ್ಟೇ ಪೆಟ್ರೋಲ್ & ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಿದ್ದ ಕಾಂಗ್ರೆಸ್‌ ಸರ್ಕಾರವು ಹಾಲಿನ ಬೆಲೆಯನ್ನೂ ಏರಿಸಿದೆ. ಹೀಗಾಗಿ ಮಧ್ಯಮ ವರ್ಗದ ಮತ್ತು ಬಡವರ್ಗಕ್ಕೆ ಸೇರಿದ ಜನರಿಗೆ ಇದರಿಂದ ಮತ್ತಷ್ಟು ಹೊರೆ ಬಿದ್ದಂತಾಗಿದೆ. 


ಇವುಗಳ ಜೊತೆಗೆ ತರಕಾರಿ ಸೇರಿದಂತೆ ಅಗತ್ಯವಸ್ತುಗಳ ಬೆಲೆಯು ಸಹ ಏರಿಕೆಯಾಗುತ್ತಿದೆ. ಹಾಲಿನ ದರ ಏರಿಕೆ ಮಾಡಿರುವ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರೆ, ಹಾಲಿನ ದರ ಜಾಸ್ತಿ ಮಾಡಿಲ್ಲ, ಹೆಚ್ಚಿನ ಹಾಲು ಉತ್ಪಾದನೆ ಆಗುತ್ತಿರುವ ಕಾರಣ ಹಾಲಿನ ಪ್ಯಾಕೆಟ್ಗಳಲ್ಲಿ 50ml ಹಾಲನ್ನು ಜಾಸ್ತಿ ಮಾಡಲಾಗಿದೆ. ಅದಕ್ಕೆ ತಕ್ಕ ಹಾಗೆ ಹಾಲಿನ ಬೆಲೆಯನ್ನು ಜಾಸ್ತಿ ಮಾಡಲಾಗಿದೆ ಎಂದು ಸ್ಪಷ್ಟಣೆ ನೀಡಲಾಗಿದೆ. ಈ ಬೆಲೆ ಏರಿಕೆಯ ಜೊತೆಗೆ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್‌ ಸುದ್ದಿ ಎದುರಾಗಿದೆ. ಹಾಲಿನ ಬೆಲೆಯ ಜೊತೆಗೆ ಇದೀಗ ಕುಡಿಯುವ ನೀರಿನ ಬೆಲೆ ಏರಿಸಲು ಸರ್ಕಾರ ನಿರ್ಧರಿಸಿದೆ. ಇದರ ಬಗ್ಗೆ ಬೆಂಗಳೂರು ಜಲ ಮಂಡಳಿ ಜೊತೆಗೆ ಮಾತುಕತೆ ನಡೆಸಿದ್ದು, ಈ ಬಗ್ಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಯಾವುದೇ ರೀತಿಯ ತೊಂದರೆ ಬಂದಿದ್ದರೂ ಕಳೆದ 14 ವರ್ಷಗಳಿಂದ ಸರ್ಕಾರ ನೀರಿನ ಬೆಲೆಯನ್ನು ಏರಿಕೆ ಮಾಡಿರಲಿಲ್ಲ. ಆದರೆ ಇದೀಗ ನೀರಿನ ಬೆಲೆ ಏರಿಸಿ ನೇರವಾಗಿ ಜನರ ಜೇಬಿಗೆ ಕಾಂಗ್ರೆಸ್‌ ಸರ್ಕಾರ ಕತ್ತರಿ ಪ್ರಯೋಗ ಮಾಡಲು ಮುಂದಾಗಿದೆ.   


ಇದನ್ನೂ ಓದಿ: Bank Holidays In July: ಜುಲೈನಲ್ಲಿ 12 ದಿನ ಬ್ಯಾಂಕ್‌ಗಳಿಗೆ ರಜೆ, ಇಲ್ಲಿದೆ ಲಿಸ್ಟ್


ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಸಿದ್ದರಾಮಯ್ಯರ ಸರ್ಕಾರ ಒಂದು ರೀತಿ ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸುತ್ತಿದೆ ಅಂತಾ ಆಕ್ರೋಶ ವ್ಯಕ್ತವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಬೆಲೆ ಏರಿಕೆ ನೀತಿಯನ್ನು ಪಾಲಿಸುತ್ತಿದೆ. ಇದು ನೇರವಾಗಿ ರಾಜ್ಯದ ಜನತೆಯ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಕಾಂಗ್ರೆಸ್‌ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಕೂಡಲೇ ನಿಲ್ಲಿಸಬೇಕು ಅನ್ನೋ ಆಗ್ರಹಗಳು ಕೇಳಿಬರುತ್ತಿವೆ. ಗ್ಯಾರಂಟಿ ಯೋಜನೆಗಳೊಂದಿಗೆ ಸರ್ಕಾರ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಈ ಬಗ್ಗೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಸುಖಾಸುಮ್ಮನೆ ಪ್ರತಿಯೊಂದರ ಬೆಲೆ ಏರಿಕೆ ಮಾಡುತ್ತಾ ಹೋದರೆ ಜೀವನ ನಡೆಸುವುದು ಕಷ್ಟವೆಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಅಂತಿಮವಾಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್‌ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅನ್ನೋದರ ಬಗ್ಗೆ ಕಾದು ನೋಡಬೇಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.