Health Budget 2023: ಸಂಸತ್ತಿನಲ್ಲಿ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ಕ್ಷೇತ್ರಕ್ಕೆ ಬೂಸ್ಟರ್ ಡೋಸ್ ಅನ್ನು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಗಾಗಿ ಹಲವು ಹೊಸ ಕ್ರಮಗಳನ್ನು ಉಲ್ಲೇಖಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ, ಔಷಧ ಮತ್ತು ವೈದ್ಯಕೀಯ ಸಾಧನಗಳ ವಿಭಾಗಗಳಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಘೋಷಿಸಿದರು.


ಆರೋಗ್ಯ ಕ್ಷೇತ್ರಕ್ಕೆ ವಿತ್ತ ಸಚಿವರ ಪ್ರಮುಖ ಘೋಷಣೆಗಳು ಕೆಳಕಂಡಂತಿವೆ:
* 157 ಹೊಸ ನರ್ಸಿಂಗ್ ಕಾಲೇಜುಗಳು:

2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು.


ಇದನ್ನೂ ಓದಿ- budget 2023 : ಬಜೆಟ್‌ನಲ್ಲಿ ರೈತರಿಗೆ  ಭರ್ಜರಿ ಗಿಫ್ಟ್!  ಅನ್ನ ಯೋಜನೆ ಘೋಷಿಸಿದ ವಿತ್ತ ಮಂತ್ರಿ 


* 2047 ರ ವೇಳೆಗೆ ರಕ್ತಹೀನತೆಯನ್ನು ತೊಡೆದುಹಾಕಲು ಗುರಿ:
2047 ರ ವೇಳೆಗೆ ಸಿಕಲ್-ಸೆಲ್ ಅನೀಮಿಯಾವನ್ನು ತೊಡೆದುಹಾಕಲು ಮಿಷನ್ ಸ್ಥಾಪಿಸಲಾಗುವುದು. ಪೀಡಿತ ಬುಡಕಟ್ಟು ಪ್ರದೇಶಗಳಲ್ಲಿ 0-40 ವರ್ಷ ವಯಸ್ಸಿನ 7 ಕೋಟಿ ಜನರನ್ನು ತಪಾಸಣೆ ಮಾಡಲಾಗುತ್ತದೆ. ಸರ್ಕಾರವು ಈ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶ ಹೊಂದಿದೆ.


* ಫಾರ್ಮಾದಲ್ಲಿ ನಾವೀನ್ಯತೆಗಾಗಿ ಹೊಸ ನಿಬಂಧನೆ: 
ಫಾರ್ಮಾಸ್ಯುಟಿಕಲ್ಸ್‌ನಲ್ಲಿ ಸಂಶೋಧನೆಗಾಗಿ ಹೊಸ ಕಾರ್ಯಕ್ರಮವನ್ನು ರೂಪಿಸಲಾಗುವುದು ಮತ್ತು ಸಂಶೋಧನೆಯಲ್ಲಿ ಹೂಡಿಕೆ ಮಾಡಲು ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು.


* ವೈದ್ಯಕೀಯ ಸಾಧನಗಳಿಗೆ ಹೊಸ ಕೋರ್ಸ್:
ಐಸಿಎಂಆರ್ ಲ್ಯಾಬ್​ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸಂಶೋಧನೆಗೆ ಒದಗಿಸಲಾಗುವುದು. ಔಷಧ ವಿಜ್ಞಾನದಲ್ಲಿ ಸಂಶೋಧನೆಗೆ ಉತ್ತೇಜನ ನೀಡಲು ಹೊಸ ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ದೇಶಾದ್ಯಂತ ಐಸಿಎಂಆರ್ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವರು ಘೋಷಿಸಿದರು. 


ಇದನ್ನೂ ಓದಿ- Budget 2023 Updates: ಉಚಿತ ಪಡಿತರ ವಿತರಣೆ ಯೋಜನೆ ವಿಸ್ತರಣೆ ಸೇರಿದಂತೆ 5 ಪ್ರಮುಖ ಘೋಷಣೆಗಳು


* ವೈದ್ಯಕೀಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲಾಗುವುದು:
ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗುವುದು. ಅಲ್ಲದೆ, ವೈದ್ಯಕೀಯ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.