ಆಯುಷ್ಮಾನ್ ಭಾರತ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ವಿಧಾನ

Ayushman Bharat Card: ಬಡ ಕುಟುಂಬಗಳಿಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸುವ ಪ್ರಮುಖ ಯೋಜನೆ ಎಂದರೆ ಆಯುಷ್ಮಾನ್ ಭಾರತ್. ಇದಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ. 

Written by - Yashaswini V | Last Updated : Dec 25, 2023, 07:09 AM IST
  • ಆಯುಷ್ಮಾನ್ ಭಾರತ್ ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಆರೋಗ್ಯ ಸೌಲಭ್ಯವನ್ನು ನೀಡುತ್ತದೆ.
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಆಯುಷ್ಮಾನ್ ಭಾರತ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು.
  • ಅದಕ್ಕೂ ಮೊದಲು ಈ ಯೋಜನೆಯ ಫಲಾನುಭವಿಯಾಗಲು ಅರ್ಹತಾ ಮಾನದಂಡ ಏನು? ಎಂದು ತಿಳಿದಿರುವುದು ಮುಖ್ಯ.
ಆಯುಷ್ಮಾನ್ ಭಾರತ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ವಿಧಾನ  title=

Ayushman Bharat Card: ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದೂ ಸಹ ಕರೆಯಲಾಗುತ್ತದೆ. ಭಾರತ ಸರ್ಕಾರದ ಈ ಮಹಾತ್ವಾಕಾಂಕ್ಷೆಯ ಯೋಜನೆಯು ಬಡ ಮತ್ತು ಹಿಂದುಳಿದ ಕುಟುಂಬಗಳಿಗೆ ಉಚಿತ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸುತ್ತದೆ. 

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ವಿತರಿಸಲಾಗುತ್ತದೆ. ಇದರ ನೆರವಿನಿಂದ ಅರ್ಹ ಭಾರತೀಯ ನಾಗರೀಕರು ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. 

ನೀವೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಆಯುಷ್ಮಾನ್ ಭಾರತ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಅದಕ್ಕೂ ಮೊದಲು ಈ ಯೋಜನೆಯ ಫಲಾನುಭವಿಯಾಗಲು ಅರ್ಹತಾ ಮಾನದಂಡ ಏನು? ಇದಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸುಲಭ ಮಾರ್ಗ ಯಾವುದು ಎಂದು ತಿಳಿಯೋಣ... 

ಇದನ್ನೂ ಓದಿ- ಆಕಸ್ಮಿಕವಾಗಿ ಬೇರೆಯವರ ಹಣ ನಿಮ್ಮ ಅಕೌಂಟ್'ಗೆ ಬಂದಿದ್ಯಾ? ಈ ವಿಷಯಗಳು ನಿಮಗೂ ತಿಳಿದಿರಲಿ

ಆಯುಷ್ಮಾನ್ ಭಾರತ್ ಕಾರ್ಡ್‌ಗಾಗಿ  ಅರ್ಹತಾ ಮಾನದಂಡ:- 
ನಿಯಮಾನುಸಾರ, ಎಲ್ಲಾ ಸಾಮಾಜಿಕ ಆರ್ಥಿಕ ಜಾತಿಗಳ (SECC) ಫಲಾನುಭವಿಗಳು ಆಯುಷ್ಮಾನ್ ಭಾರತ್ ಯೋಜನೆಯಡಿ ಸಿಗುವ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.  ಈ ಯೋಜನೆಗೆ ನೀವು ಅರ್ಹರಾಗಿದ್ದೀರಿಯೇ ಎಂದು ಪರಿಶೀಲಿಸಲು ಆಯುಷ್ಮಾನ್ ಭಾರತ್ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ  "ನಿಮ್ಮ ಅರ್ಹತೆಯನ್ನು ಪರಿಶೀಲಿಸಿ" ಎಂಬ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ನಿಮ್ಮ ಪಡಿತರ ಕಾರ್ಡ್ ಸಂಖ್ಯೆ ಅಥವಾ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.

ಆಯುಷ್ಮಾನ್ ಭಾರತ್ ಕಾರ್ಡ್‌ಗಾಗಿ ಅಪ್ಲಿಕೇಶನ್ ಪ್ರಕ್ರಿಯೆ:- 
ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯಗಳನ್ನು ಪಡೆಯಲು ನೀವು ಅರ್ಹರಾಗಿದ್ದರೆ, ನೀವು ಅದೇ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಇದಕ್ಕಾಗಿ, "ಅಪ್ಪ್ಲೈ ಮಾಡಿ" ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಗದಿತ ಜಾಗದಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ರೇಷನ್ ಕಾರ್ಡ್ ಸಂಖ್ಯೆ ಅಥವಾ ಆಧಾರ್ ಕಾರ್ಡ್ ಸಂಖ್ಯೆಯಂತಹ ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ. ಇದನ್ನು ಸೇವ್ ಮಾಡುವ ಮೊದಲು ನೀವು ನಮೂದಿಸಿರುವ ಎಲ್ಲಾ ಮಾಹಿತಿಗಳು ಸರಿಯಾಗಿವೆಯೇ ಎಂದು ಎಚ್ಚರಿಕೆಯಿಂದ ಪರಿಶೀಲಿಸಿ. ಬಳಿಕ ಸೇವ್ ಮಾಡಿ. 

ಅರ್ಜಿ ಸಲ್ಲಿಸಿದ ವೇಳೆ ನೀವು ಅಪ್ಲಿಕೇಶನ್ ಉಲ್ಲೇಖ ಸಂಖ್ಯೆಯನ್ನು ಸ್ವೀಕರಿಸುತ್ತೀರಿ. ಭವಿಷ್ಯದ ಉಪಯೋಗಕ್ಕಾಗಿ ಇದರ ಪ್ರಿಂಟ್ ಔಟ್ ಪಡೆದು ಜೋಪಾನವಾಗಿಡಿ. 

ಆಯುಷ್ಮಾನ್ ಭಾರತ್ ಕಾರ್ಡ್‌:-
ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ಬಳಿಕ ಕೆಲವೇ ವಾರಗಳಲ್ಲಿ ನಿಮ್ಮ ಆಯುಷ್ಮಾನ್ ಭಾರತ್ ಕಾರ್ಡ್ ನಿಮ್ಮ ವಿಳಾಸಕ್ಕೆ ಬರುತ್ತದೆ. ಈ ಕಾರ್ಡ್ ಸಹಾಯದಿಂದ ನಿಗದಿತ ಮೊತ್ತದವರೆಗೆ ನೀವು ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ಇದನ್ನೂ ಓದಿ- ಹೆದ್ದಾರಿಗಳಲ್ಲಿ ಇನ್ನಿರುವುದಿಲ್ಲ ಟೋಲ್ ಪ್ಲಾಜಾ ! ಈ ರೀತಿ ಸಂಗ್ರಹವಾಗಲಿದೆ ಟೋಲ್ !

ಆಯುಷ್ಮಾನ್ ಭಾರತ್ ಕಾರ್ಡ್‌ ಸ್ಟೇಟಸ್ ಪರಿಶೀಲನೆ:-
ನೀವು ಒಮ್ಮೆ ಆಯುಷ್ಮಾನ್ ಭಾರತ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ನೀವು ಅದೇ ವೆಬ್‌ಸೈಟ್‌ನಲ್ಲಿ ಟ್ರ್ಯಾಕ್ ಮಾಡಬಹುದು. ಇದಕ್ಕಾಗಿ "ಟ್ರ್ಯಾಕ್ ಅಪ್ಲಿಕೇಶನ್ ಸ್ಟೇಟಸ್" ಲಿಂಕ್ ಅನ್ನು ಆಯ್ಕೆಯ್ ಮಾಡಿ ನಿಗದಿತ ಜಾಗದಲ್ಲಿ ಅಪ್ಲಿಕೇಶನ್ ಉಲ್ಲೇಖ ಸಂಖ್ಯೆಯನ್ನು ನಮೂದಿಸಿ. ಈ ಸಮಯದಲ್ಲಿ ನಿಮ್ಮ ಅಪ್ಲಿಕೇಶನ್ ಯಾವ ಸ್ಥಿತಿಯಲ್ಲಿದೆ ಎಂಬ ಇತ್ತೀಚಿನ ಮಾಹಿತಿಯನ್ನು ಪಡೆಯುತ್ತೀರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News