ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ: ಅಕ್ಕಾತಾಯಿ ಲಂಗೂಟಿ ಮನವಿಗೆ ಸಿಎಂ ಹೇಳಿದ್ದೇನು?
Gruha Laxmi: ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ.
Gruha Laxmi: ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ (Gruha Laxmi Yojane) ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು.
ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ!
ಆದರೆ ಇಂದು ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ (Akkatai langooti) ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ, ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು ಕೇಳಿ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ಇದನ್ನೂ ಓದಿ- ವೈದ್ಯಕೀಯ ಸೇವೆಯಲ್ಲಿ ಬದ್ಧತೆ ಹಾಗೂ ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ
ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ:-
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ (Social Media) ತಿಳಿಸಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ. ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ (Gruha Laxmi Money) ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ ಎಂದು ನುಡಿದಿದ್ದಾರೆ.
ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ.
ಇದನ್ನೂ ಓದಿ- "ಬಿಜೆಪಿ ನಾಯಕರ ಹಗರಣಗಳ ಬಗ್ಗೆ ತನಿಖೆ ಆಗಲೇಬೇಕು"
ಹೀಗಿದ್ದರೂ ಅಕ್ಕಾತಾಯಿ ಲಗೋಟಿ ಅವರಲ್ಲಿ ಒಂದು ಸವಿನಯ ವಿನಂತಿ ಇದೆ. "ಊರಿಗೆ ಹೋಳಿಗೆ ಊಟ ಹಾಕುವುದು ಒಳ್ಳೆಯ ಗುಣವೇ ಸರಿ. ಆದರೆ ಗೃಹಲಕ್ಷ್ಮಿ ಯೋಜನೆಯ ಹಣದ ಮೇಲಿನ ಮೊದಲ ಹಕ್ಕು ಸ್ವಂತ ಕುಟುಂಬದ್ದಾಗಿದೆ. ಅಕ್ಕಾತಾಯಿಯಂತಹ ಒಳ್ಳೆಯ ಮನಸ್ಸಿನ ಸೋದರಿಯರು ಈ ಹಣವನ್ನು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆರೋಗ್ಯಕರವಾದ ಊಟ-ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.