ನಿಮ್ಮ ರೇಷನ್‌ ಕಾರ್ಡ್‌ ಬಂದ್‌! ಪಡಿತರ ಚೀಟಿದಾರರು ಮಾರ್ಚ್ 31 ರೊಳಗೆ ಈ ಕೆಲಸ ಮಾಡಿ

Ration Card Aadhaar Link: ಕೇಂದ್ರದ ಮೋದಿ ಸರ್ಕಾರ ದೇಶದ ಬಡವರು ಮತ್ತು ನಿರ್ಗತಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ.

Written by - Chetana Devarmani | Last Updated : Mar 2, 2025, 06:54 AM IST
  • ರೇಷನ್‌ ಕಾರ್ಡ್‌ ಆಧಾರ್ ಕಾರ್ಡ್‌ ಲಿಂಕ್
  • ಆಧಾರ್‌ನೊಂದಿಗೆ ರೇಷನ್ ಕಾರ್ಡ್ ಅನ್ನು ಹೇಗೆ ಲಿಂಕ್ ಮಾಡುವುದು
  • ರೇಷನ್‌ ಕಾರ್ಡ್‌ ಜೊತೆ ಆಧಾರ್ ಲಿಂಕ್ ಮಾಡಲು ಕೊನೆಯ ದಿನ
ನಿಮ್ಮ ರೇಷನ್‌ ಕಾರ್ಡ್‌ ಬಂದ್‌! ಪಡಿತರ ಚೀಟಿದಾರರು ಮಾರ್ಚ್ 31 ರೊಳಗೆ ಈ ಕೆಲಸ ಮಾಡಿ
ration card aadhar link

Ration Card Aadhaar Link: ಕೇಂದ್ರದ ಮೋದಿ ಸರ್ಕಾರ ದೇಶದ ಬಡವರು ಮತ್ತು ನಿರ್ಗತಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಮಹಿಳೆಯರು, ರೈತರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪರಿಹಾರ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿವೆ. 

Add Zee News as a Preferred Source

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ, ಸರ್ಕಾರವು ಬಡವರಿಗೆ ಉಚಿತವಾಗಿ ಮತ್ತು ಸಬ್ಸಿಡಿ ಬೆಲೆಯಲ್ಲಿ ಪಡಿತರವನ್ನು ಒದಗಿಸುತ್ತದೆ. ಇದಕ್ಕಾಗಿ ಸರ್ಕಾರ ಪಡಿತರ ಚೀಟಿ ನೀಡುತ್ತದೆ. ಪ್ರಸ್ತುತ, ಭಾರತದಲ್ಲಿ ಕೋಟ್ಯಂತರ ಜನರು ಪಡಿತರ ಚೀಟಿಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಸರ್ಕಾರವು ಜನರು ತಮ್ಮ ಪಡಿತರ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಸಲಹೆ ನೀಡಿದೆ. ನೀವು ಇದನ್ನು ಮಾಡದಿದ್ದರೆ, ನಿಮ್ಮ ಪಡಿತರ ಕಡಿತಗೊಳ್ಳಬಹುದು.

ಇದನ್ನೂ ಓದಿ:ಕ್ರೆಡಿಟ್ ಕಾರ್ಡ್ ಬಳಸಿ ಚಿನ್ನ ಖರೀದಿಸುತ್ತಿದ್ದೀರಾ..? ನೀವು ಮಾಡುವ ಈ ತಪ್ಪು ನಿಮಗೆ ದೊಡ್ಡ ನಷ್ಟ.. ಹೇಗೆ ಗೊತ್ತೆ..? 

ಆಧಾರ್ ಲಿಂಕ್ ಮಾಡಲು ಕೊನೆಯ ದಿನಾಂಕ:

ಪಡಿತರ ಚೀಟಿದಾರರಿಗೆ ಒಂದು ಪ್ರಮುಖ ಸುದ್ದಿ ಬಂದಿದೆ. ಸರ್ಕಾರ ಪಡಿತರ ಚೀಟಿ ಜೊತೆ ನಿಮ್ಮ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇದಕ್ಕಾಗಿ ಮಾರ್ಚ್ 31, 2024 ರಂದು ಅಂತಿಮ ದಿನಾಂಕವನ್ನು ನಿಗದಿಪಡಿಸಿದೆ. 

ಆಧಾರ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ?

ಪಡಿತರ ಚೀಟಿದಾರರು ತಮ್ಮ ಕಾರ್ಡ್‌ನಲ್ಲಿರುವ ಯಾವುದೇ ಸದಸ್ಯರ ಆಧಾರ್ ಕಾರ್ಡ್‌ ಜೋಡಣೆಯನ್ನು ಮಾರ್ಚ್ 31 ರೊಳಗೆ ಮಾಡದಿದ್ದರೆ, ಅವರು ಏಪ್ರಿಲ್ 1, 2024 ರಿಂದ ಪಡಿತರ ಚೀಟಿಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಎಲ್ಲಾ ಪಡಿತರ ಚೀಟಿದಾರರು ಈ ಪ್ರಕ್ರಿಯೆಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕು.  

ರೇಷನ್‌ ಕಾರ್ಡ್‌ ಗೆ ಆಧಾರ್ ಲಿಂಕ್ ಮಾಡುವುದು ಹೇಗೆ? 

- ಹತ್ತಿರದ ಪಡಿತರ ವಿತರಕರ ಅಂಗಡಿಗೆ ಹೋಗಿ.

- ನಿಮ್ಮ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ನಿಮ್ಮೊಂದಿಗೆ ಕೊಂಡೊಯ್ಯಿರಿ.

- ಬಯೋಮೆಟ್ರಿಕ್ ಅಥವಾ ಫೇಶಿಯಲ್ ಇ-ಕೆವೈಸಿ ಮೂಲಕ ಆಧಾರ್ ಲಿಂಕ್‌ ಮಾಡುತ್ತಾರೆ

- ಪರಿಶೀಲನೆಯ ನಂತರ ಆಧಾರ್ ಲಿಂಕ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

ಸರ್ಕಾರಿ ವರದಿಯ ಪ್ರಕಾರ, ದೇಶಾದ್ಯಂತ 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಿರುವವರಿಗೆ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಪಡಿತರ ಚೀಟಿ ಹೊಂದಿರುವವರು ಮಾರ್ಚ್ 31 ರೊಳಗೆ ಆಧಾರ್ ಲಿಂಕ್ ಮಾಡಬೇಕು.

ಇದನ್ನೂ ಓದಿ:ಪ್ರಧಾನ ಮಂತ್ರಿ ಆವಾಸ್ ಯೋಜನೆ: ಪ್ರತಿಯೊಬ್ಬರಿಗೂ ಮನೆ ಕಟ್ಟಲು ಆರ್ಥಿಕ ನೆರವು! ಸುಲಭವಾಗಿ ಅರ್ಜಿ ಸಲ್ಲಿಸಿ, ಉತ್ತಮ ಮನೆ ನಿರ್ಮಿಸಿ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News