Karnataka Budget 2025 : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16 ನೆ ಬಜೆಟ್ ಮಂಡಿಸುತ್ತಿದ್ದಾರೆ. ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಭರಪೂರ ಕೊಡುಗೆ ನೀಡಲಾಗಿದೆ. ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಿಸುವ ಬಗ್ಗೆ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಅಲ್ಪಸಂಖ್ಯಾತರಿಗಾಗಿ ಬಜೆಟ್ ಕೊಡುಗೆಗಳು :
1.ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಸ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣ.
2.2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪನೆ.
ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 2 ಕೋಟಿ ರೂ. ಅನುದಾನ.
3.ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ. ಮಹಾಭೋಧಿ ಅಧ್ಯಯನ ಕೇಂದ್ರದ 100 ವರ್ಷಗಳ ಹಳೆಯ ಗ್ರಂಥಾಲಯವನ್ನು 1 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಿ ಉನ್ನತೀಕರಣಕ್ಕೆ.
4.ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ ಅನುದಾನ.
ಇದನ್ನೂ ಓದಿ : Karnataka Budget 2025 : SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರುವತ್ತ ಸಿಎಂ ಚಿತ್ತ : ಭರ್ಜರಿ ಯೋಜನೆ ಅನುಷ್ಠಾನಕ್ಕೆ
5.ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂ.
6.ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನ 6,000 ರೂ. ಗಳಿಗೆ ಹೆಚ್ಚಳ. ಸಿಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳಿಗೆ ನೀಡುವ ಮಾಸಿಕ ಗೌರವಧನವನ್ನು 5,000ಕ್ಕೆ ಏರಿಕೆ.
7.ಪ್ರಾಚೀನ ಬೌದ್ಧ ಕೇಂದ್ರವಾಗಿರುವ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆ.
8.ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲಾ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನಗಳನ್ನು ನಿರ್ಮಾಣ.
9.ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐ.ಟಿ.ಐ ಗಳಲ್ಲಿ ಹೊಸ ಕೋರ್ಸ್‌ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭ
10.KEA ಮುಖಾಂತರ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಶುಲ್ಕದಲ್ಲಿ ಶೇ.50 ರಷ್ಟನ್ನು ಮರುಪಾವತಿ.
ಇದನ್ನೂ ಓದಿ : Karnataka Budget 2025 : ಕರ್ನಾಟಕ ಪಬ್ಲಿಕ್ ಶಾಲೆಗಳವಿಸ್ತರಣೆ ! ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣು ಆರು ದಿನವೂ ಲಭ್ಯ !
11.ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಏರಿಕೆ.
12. ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿ.ಯು. ಕಾಲೇಜನ್ನು ಸ್ಥಾಪನೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









