KMF Nandini Dosa Idli: ಕೆಎಂಎಫ್​​ನ ನಂದಿನಿ ಬ್ರ್ಯಾಂಡ್‌ ಇಡ್ಲಿ ಹಾಗೂ ದೋಸೆ ಹಿಟ್ಟನ್ನು ಸಹ ಮಾರುಕಟ್ಟೆಗೆ ಪರಿಚಯಿಸಿದೆ. ಪ್ರಾಯೋಗಿಕವಾಗಿ ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾತ್ರ ಇಡ್ಲಿ, ದೋಸೆ ಹಿಟ್ಟನ್ನು ಪರಿಚಯಿಸಲಾಗಿದ್ದು ಇದರಲ್ಲಿ ಭಾರೀ ಯಶಸ್ಸನ್ನು ಗಳಿಸಿದೆ. 


COMMERCIAL BREAK
SCROLL TO CONTINUE READING

ಮೂರೇ ದಿನದಲ್ಲಿ ಭರ್ಜರಿ ಲಾಭ: 
ಇನ್ನೂ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಪರಿಚಯಿಸಲಾಗಿರುವ ನಂದಿನಿ ಇಡ್ಲಿ, ದೋಸೆ ಹಿಟ್ಟು ಕೇವಲ ಮೂರೇ ದಿನದಲ್ಲಿ 2250 ಮೆಟ್ರಿಕ್ ಟನ್‌ಗಳಷ್ಟು ಮಾರಾಟವಾಗಿದೆ. ಇದರ ಬೆನ್ನಲ್ಲೇ ಕೆ‌ಎಂಎಫ್ ಕರ್ನಾಟಕದ ಇತರ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ಇಡ್ಲಿ, ದೋಸೆ ಹಿಟ್ಟನ್ನು ಮಾರಾಟ ಮಾಡಲು ಯೋಜನೆ ಕೂಡ ರೂಪಿಸುತ್ತಿದೆ. 


ಇದನ್ನೂ ಓದಿ- Zomatoದಲ್ಲಿ 'Girl Friend' ಸಿಗ್ತಾರಾ... ಹೊಸ ವರ್ಷದ ಹೊತ್ತಲ್ಲಿ ಆಗಿದ್ದೇನು...?


ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಎಂಎಫ್​​ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆ ಹಿಟ್ಟು ಇನ್ನೂ ಒಂದು ವಾರದೊಳಗೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಕೂಡ ಲಭ್ಯವಾಗುವ ಸಾಧ್ಯತೆ ಇದೆ. 


ಜಿಮ್, ಡಯಟ್ನಲ್ಲಿರುವವರನ್ನೂ ಆಕರ್ಷಿಸುತ್ತಿರುವ ನಂದಿನಿ ಬ್ರ್ಯಾಂಡ್ ಹಿಟ್ಟು: 
ಕೆಎಂಎಫ್ ನಂದಿನಿ ದೋಸೆ ಹಿಟ್ಟಿನಲ್ಲಿ ವೇ ಪ್ರೊಟೀನ್ ಕೂಡ ಇರುವುದರಿಂದ ಸದ್ಯ ಜಿಮ್, ಡಯಟ್ ಬಗ್ಗೆ ಗಮನಹರಿಸುವವರು ಕೂಡ ನಂದಿನಿ ಹಿಟ್ಟಿನ ಮೊರೆಹೋಗುತ್ತಿದ್ದಾರೆ ಎನ್ನಲಾಗಿದೆ. ಕೆಎಂಎಫ್, ಇದೇ ಪ್ರಥಮಬಾರಿಗೆ ದೋಸೆ ಹಿಟ್ಟಿಗೆ ಶೇಕಡ 5 ರಷ್ಟು ವೇ ಪ್ರೊಟೀನ್ ಸೇರಿಸಿ ಜನರಿಗೆ ನೀಡುತ್ತಿದೆ. ಇದರಿಂದಾಗಿ ಮತ್ತಷ್ಟು ಜನಪ್ರಿಯತೆ ಗಳಿಸಿದೆ.


ಇದನ್ನೂ ಓದಿ- ನಿಜಕ್ಕೂ 5,000 ರೂ. ಬೆಲೆಯ ನೋಟುಗಳು ಬರಲಿವೆಯಾ? RBI ಹೇಳಿದ್ದೇನು?


ನಂದಿನಿ ದೋಸೆ ಹಿಟ್ಟಿನ ಬೆಲೆ: 
ಬೆಂಗಳೂರಲ್ಲಿ 450 ಗ್ರಾಂ ಪ್ಯಾಕ್ ನಂದಿನಿ ದೋಸೆ ಹಿಟ್ಟಿಗೆ 40 ರೂಪಾಯಿ ಹಾಗೂ 900 ಗ್ರಾಂಗೆ 80 ರೂಪಾಯಿ ದರ ನಿಗದಿಯಾಗಿದೆ. 


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.