ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಮೋದಿ ಸರ್ಕಾರದ ಮಹತ್ವದ ಮಾಹಿತಿ : ಹೆಚ್ಚುವರಿ ಪಿಂಚಣಿ ಬಗ್ಗೆಯೂ ಘೋಷಣೆ

Central Government Employees Retirement Age:ಲೋಕಸಭೆಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ  ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲಿಖಿತ ಉತ್ತರ ನೀಡಿದ್ದಾರೆ.  ಈ ಮೂಲಕ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿಯನ್ನು ಪ್ರಕಟಿಸಿದ್ದಾರೆ. 

Written by - Ranjitha R K | Last Updated : Mar 20, 2025, 02:21 PM IST
  • ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಹೆಚ್ಚಳದ ಬಗ್ಗೆ ಅನೇಕ ದಿನಗಳಿಂದ ಚರ್ಚೆ
  • ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಸ್ಪಷ್ಟ ನಿರ್ಧಾರ ಪ್ರಕಟಿಸಿದೆ.
  • ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ
ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಮೋದಿ ಸರ್ಕಾರದ  ಮಹತ್ವದ ಮಾಹಿತಿ : ಹೆಚ್ಚುವರಿ ಪಿಂಚಣಿ ಬಗ್ಗೆಯೂ ಘೋಷಣೆ

Central Government Employees Retirement Age : ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಹೆಚ್ಚಳದ ಬಗ್ಗೆ ಅನೇಕ ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಸ್ಪಷ್ಟ ನಿರ್ಧಾರ ಪ್ರಕಟಿಸಿದೆ. ಲೋಕಸಭೆಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ  ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲಿಖಿತ ಉತ್ತರ ನೀಡಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿಯನ್ನು ಪ್ರಕಟಿಸಿದ್ದಾರೆ. 

Add Zee News as a Preferred Source

ಸರ್ಕಾರ ತನ್ನ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಯಾವುದೇ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು ನೌಕರರ ನಿವೃತ್ತಿಯಿಂದ ಖಾಲಿಯಾಗುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ತೊಂದರೆ ಇಲ್ಲ. ಹಾಗಾಗಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಪ್ರಸ್ತಾಪ ಸರ್ಕಾರದ ಬಳಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಇದನ್ನೂ ಓದಿ : ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರ ಖಾತೆ ಸೇರಲಿದೆ ಕೋವಿಡ್-19 ಸಮಯದಲ್ಲಿ ತಡೆಹಿಡಿದಿದ್ದ ಈ ಭತ್ಯೆ

ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆಗೆ ಬೇಡಿಕೆ : 
ಯಾವುದೇ ಸರ್ಕಾರಿ ನೌಕರರ ಸಂಘ ಅಥವಾ ಸಂಘಟನೆಯು ಸೇವಾ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆಗೆ ಒತ್ತಾಯಿಸಿದೆಯೇ ಎಂದು ಕೇಳಿದಾಗ, "ರಾಷ್ಟ್ರೀಯ ಮಂಡಳಿಯಿಂದ (ಜಂಟಿ ಸಲಹಾ ಕಾರ್ಯವಿಧಾನ) ನೌಕರರಿಗೆ ಯಾವುದೇ ಔಪಚಾರಿಕ ಪ್ರಸ್ತಾವನೆ ಬಂದಿಲ್ಲ" ಎಂದು ಸಚಿವರು ಹೇಳಿದರು. ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳ ನೌಕರರ ನಿವೃತ್ತಿ ವಯಸ್ಸಿನ ವಿವರಗಳು ಮತ್ತು ನಿವೃತ್ತಿ ವಯಸ್ಸಿನ ಅಸಮಾನತೆ ಬಗ್ಗೆ ಉತ್ತರಿಸಿದ ಅವರು, "ಈ ವಿಷಯವು ರಾಜ್ಯ ಪಟ್ಟಿಯ ಅಡಿಯಲ್ಲಿ ಬರುವುದರಿಂದ ಸರ್ಕಾರದಲ್ಲಿ ಅಂತಹ ಯಾವುದೇ ಡೇಟಾವನ್ನು ಕೇಂದ್ರೀಯವಾಗಿ ನಿರ್ವಹಿಸಲಾಗುವುದಿಲ್ಲ" ಎಂದು ಹೇಳಿದರು.

ಹೆಚ್ಚುತ್ತಿರುವ ಅಗತ್ಯಕ್ಕೆ ಅನುಗುಣವಾಗಿ ವೃದ್ಧರಿಗೆ ಹೆಚ್ಚುವರಿ ಪಿಂಚಣಿ : 
 ಇನ್ನು ಕೇಂದ್ರವು ಬುಧವಾರ ಹಳೆಯ ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿ ನೀಡಲಾಗುತ್ತದೆ. ಏಕೆಂದರೆ ಅವರ ಅಗತ್ಯಗಳನ್ನು, ವಿಶೇಷವಾಗಿ ಅವರ ಆರೋಗ್ಯ ಸಂಬಂಧಿತ ಪರಿಸ್ಥಿತಿಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,  ಇದು ಸೂಕ್ತವಾದ ನಿರ್ಧಾರ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಪಿಂಚಣಿ ವಿತರಣಾ ಅಧಿಕಾರಿಗಳು/ಬ್ಯಾಂಕ್‌ಗಳ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಪಿಂಚಣಿಯನ್ನು ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ಸ್ವಯಂಚಾಲಿತವಾಗಿ ಪಾವತಿಸಲಾಗುತ್ತದೆ ಎಂದು ಹೇಳಿದರು. 

ಇದನ್ನೂ ಓದಿ : ಸಾರ್ವಕಾಲಿಕ ದಾಖಲೆ ತಲುಪಿದ ಚಿನ್ನ, ಪ್ರಮುಖ ನಗರಗಳಲ್ಲಿ 10 ಗ್ರಾಂಗೆ ಎಷ್ಟಿದೆ..!

ಸರ್ಕಾರದ ಆರನೇ ಕೇಂದ್ರ ವೇತನ ಆಯೋಗದ (ಸಿಪಿಸಿ) ಶಿಫಾರಸುಗಳ ಪ್ರಕಾರ, 80 ನೇ ವಯಸ್ಸಿನಲ್ಲಿ ಶೇ. 20, 85 ನೇ ವಯಸ್ಸಿನಲ್ಲಿ ಶೇ. 30, 90 ನೇ ವಯಸ್ಸಿನಲ್ಲಿ ಶೇ. 40, 95 ನೇ ವಯಸ್ಸಿನಲ್ಲಿ ಶೇ. 50 ಮತ್ತು 100 ನೇ ವಯಸ್ಸಿನಲ್ಲಿ ಶೇ. 100 ರಷ್ಟು ಹೆಚ್ಚುವರಿ ಪಿಂಚಣಿಯನ್ನು ಅನುಮೋದಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ವಯಸ್ಸಾದಂತೆ, ವಿಶೇಷವಾಗಿ ಆರೋಗ್ಯ ಸಂಬಂಧಿತ ಅಗತ್ಯಗಳು ಹೆಚ್ಚಾಗುವುದರಿಂದ, ಹೆಚ್ಚುವರಿ ಪಿಂಚಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 

Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News