PM Kisan ಯೋಜನೆಯ ಫಲಾನುಭವಿಗಳಿಗೊಂದು ಮಹತ್ವದ ಅಪ್ಡೇಟ್, ಖಾತೆಗೆ 12,000 ಬರುವುದೋ ಅಥವಾ ಇಲ್ಲ? ಉತ್ತರ ನೀಡಿದ ಸರ್ಕಾರ!

PM Kisan Big Update: ಕೃಷಿ ಸಚಿವ ಅರ್ಜುನ್ ಮುಂಡಾ ಲೋಕಸಭೆಯಲ್ಲಿ ನೀಡಿದ ತಮ್ಮ ಲಿಖಿತ ಉತ್ತರದಲ್ಲಿ, ಈ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸುತ್ತಿಲ್ಲ ಅಥವಾ ಯೋಜನೆಯಡಿಯಲ್ಲಿ ಮಹಿಳಾ ರೈತರ ಪ್ರಯೋಜನಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದಾರೆ. (Busienss News In Kannada)  

Written by - Nitin Tabib | Last Updated : Feb 6, 2024, 09:15 PM IST
  • ಮೋದಿ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿತ್ತು,
  • ಇದರಲ್ಲಿ ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ. ಮೊತ್ತವನ್ನು ತಲಾ ಎರಡು ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ.
  • ಇದಕ್ಕಾಗಿ, ಡಿಬಿಟಿ ಅಂದರೆ ನೇರ ಲಾಭ ವರ್ಗಾವಣೆ ಮಾಧ್ಯಮವನ್ನು ಬಳಸಲಾಗುತ್ತದೆ,
PM Kisan ಯೋಜನೆಯ ಫಲಾನುಭವಿಗಳಿಗೊಂದು ಮಹತ್ವದ ಅಪ್ಡೇಟ್, ಖಾತೆಗೆ 12,000 ಬರುವುದೋ ಅಥವಾ ಇಲ್ಲ? ಉತ್ತರ ನೀಡಿದ ಸರ್ಕಾರ! title=

PM Kisan Samman Nidhi: ರೈತರಿಗೆ ಸಹಾಯ ಮಾಡಲು ಪ್ರಾರಂಭಿಸಲಾದ ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ-ಕಿಸಾನ್ ಅಡಿಯಲ್ಲಿ ರೈತರಿಗೆ ಸಹಾಯದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಸರ್ಕಾರದಿಂದ ಸ್ಪಷ್ಟೀಕರಣ ಬಂದಿದೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರ ಲಾಭದ ಮೊತ್ತವನ್ನು ವಾರ್ಷಿಕ 6,000 ರೂ.ಗಳಿಂದ 12,000 ರೂ.ಗೆ ಹೆಚ್ಚಿಸುವ ಯಾವುದೇ ಪ್ರಸ್ತಾವನೆಯನ್ನು ಸರಕಾರ ಪರಿಗಣಿಸುತ್ತಿಲ್ಲ ಎಂದು ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. (Busienss News In Kannada)

ಕೃಷಿ ಸಚಿವ ಅರ್ಜುನ್ ಮುಂಡಾ ಲೋಕಸಭೆಯಲ್ಲಿ ಈ ಕುರಿತು ನೀಡಿದ ಲಿಖಿತ ಉತ್ತರದಲ್ಲಿ, ಈ ಯೋಜನೆಯ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಸಿದ್ಧತೆ ನಡೆಸುತ್ತಿಲ್ಲ ಅಥವಾ ಯೋಜನೆಯಡಿಯಲ್ಲಿ ಮಹಿಳಾ ರೈತರ ಪ್ರಯೋಜನಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದಾರೆ. ಈ ಯೋಜನೆಯಡಿ ವಾರ್ಷಿಕ 8,000 ರೂ.ನಿಂದ 12,000 ರೂ.ಗೆ ಹೆಚ್ಚಿಸಲು ಸರ್ಕಾರ ಯೋಜಿಸುತ್ತಿದೆಯೇ ಎಂದು ಲೋಕಸಭೆಯಲ್ಲಿ ಸರ್ಕಾರವನ್ನು ಪ್ರಶ್ನಿಸಿದಾಗ, ಅಂತಹ ಯಾವುದೇ ಪ್ರಸ್ತಾಪವು ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ.

ಮೋದಿ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿತ್ತು, ಇದರಲ್ಲಿ ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ. ಮೊತ್ತವನ್ನು ತಲಾ ಎರಡು ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ. ಇದಕ್ಕಾಗಿ, ಡಿಬಿಟಿ ಅಂದರೆ ನೇರ ಲಾಭ ವರ್ಗಾವಣೆ ಮಾಧ್ಯಮವನ್ನು ಬಳಸಲಾಗುತ್ತದೆ, ಅಂದರೆ, ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಕಳುಹಿಸಲಾಗುತ್ತದೆ.

ಇದನ್ನೂ ಓದಿ-LIC ಹೂಡಿಕೆದಾರರಿಗೊಂದು ಭಾರಿ ಸಂತಸದ ಸುದ್ದಿ, ಎರಡೂ ಕೈಗಳಿಂದ ಹಣ ಬಾಚಿಕೊಳ್ಳುವ ಅವಕಾಶ!

ಈ ಯೋಜನೆಯಡಿ ಎಷ್ಟು ಪ್ರಗತಿಯಾಗಿದೆ ಎಂದು ವಿವರಿಸಿದ ಅವರು, ಈ ಯೋಜನೆಯಡಿ ಇದುವರೆಗೆ 11 ಕೋಟಿ ರೈತರಿಗೆ 15 ಕಂತುಗಳಲ್ಲಿ 2.81 ಲಕ್ಷ ಕೋಟಿ ರೂ.ಗಳನ್ನು ಸರ್ಕಾರ ವಿತರಿಸಿದೆ. ಪಿಎಂ ಕಿಸಾನ್ ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಯಾಗಿದೆ ಎಂದು ಅವರು ಹೇಳಿದ್ದಾರೆ. ರೈತರನ್ನು ಕೇಂದ್ರದಲ್ಲಿ ಇಟ್ಟುಕೊಂಡು ಡಿಜಿಟಲ್ ಮೂಲಸೌಕರ್ಯವನ್ನು ರಚಿಸಿರುವುದರಿಂದ, ಮಧ್ಯವರ್ತಿಗಳನ್ನು ಬೈಪಾಸ್ ಮಾಡುವುದು ಮತ್ತು ಅವರಿಗೆ ನೇರ ಪ್ರಯೋಜನಗಳನ್ನು ಒದಗಿಸುವುದು ಸುಲಭವಾಗಿದೆ.

ಇದನ್ನೂ ಓದಿ-New Rule: ತಂಬಾಕು-ಪಾನ್ ಮಸಾಲಾಗೆ ಸಂಬಂಧಿಸಿದ ನಿಯಮದಲ್ಲಿ ಬದಲಾವಣೆ, ಏಪ್ರಿಲ್ 1 ರಿಂದ 1 ಲಕ್ಷ ರೂ. ದಂಡ

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಪ್ರದೇಶದಲ್ಲಿ ಯೋಜನೆ ಪ್ರಾರಂಭವಾದಾಗಿನಿಂದ 2,62,45,829 ರೈತರು ಪಿಎಂ ಕಿಸಾನ್ ಪ್ರಯೋಜನವನ್ನು ಪಡೆದಿದ್ದಾರೆ. ಯೋಜನೆಯಡಿಯಲ್ಲಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ರಾಜ್ಯದ ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಮತ್ತು ಪರಿಶೀಲಿಸಬೇಕು ಎಂಬ ನಿಯಮವಿದೆ, ಇದರಿಂದ ಷರತ್ತುಗಳನ್ನು ಪೂರೈಸುವ ರೈತರು ಅದರ ಪ್ರಯೋಜನಗಳನ್ನು ಪಡೆಯಬಹುದು.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News