ತತ್ಕಾಲ್ ಟ್ರೈನ್ ಟಿಕೆಟ್ ಬುಕ್ಕಿಂಗ್‌ಗೆ ಇನ್ಮುಂದೆ ಈ ನಿಯಮ ಕಡ್ಡಾಯ

Indian Railways: ದೂರದೂರಿಗೆ ದಿಢೀರ್ ಪ್ರಯಾಣಿಸುವಾಗ ಪ್ರಯಾಣಿಕರು ತತ್ಕಾಲ್ ಬುಕ್ಕಿಂಗ್ ಮೂಲಕ ಟ್ರೈನ್ ಟಿಕೆಟ್ ಬುಕ್ ಮಾಡುತ್ತಾರೆ.  ಇದೀಗ ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ ನಿಯಮದಲ್ಲಿ ಪ್ರಮುಖ ಬದಲಾವಣೆಯನ್ನು ಘೋಷಿಸಿದೆ. 

Written by - Yashaswini V | Last Updated : Jun 6, 2025, 02:13 PM IST
  • ಭಾರತೀಯ ರೈಲ್ವೇಯ ಮಹತ್ವದ ನಿರ್ಧಾರ
  • ತತ್ಕಾಲ್ ಟ್ರೈನ್ ಟಿಕೆಟ್ ಬುಕ್ಕಿಂಗ್ ಮಾಡುವವರಿಗೆ ಹೊಸ ರೂಲ್ಸ್
  • ಐ‌ಆರ್‌ಸಿ‌ಟಿ‌ಸಿ ಈ ನಿರ್ಧಾರದಿಂದ ರೈಲು ಪ್ರಯಾಣಿಕರಿಗೆ ಅನುಕೂಲ
ತತ್ಕಾಲ್ ಟ್ರೈನ್ ಟಿಕೆಟ್ ಬುಕ್ಕಿಂಗ್‌ಗೆ ಇನ್ಮುಂದೆ ಈ ನಿಯಮ ಕಡ್ಡಾಯ

Tatkal Train Ticket Rules: ರೈಲು ಸಂಚಾರಕ್ಕಾಗಿ ತತ್ಕಾಲ್ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರಿಗೆ ಹೊಸ ನಿಯಮ ಜಾರಿಗೆ ತರಲು ಭಾರತೀಯ ರೈಲ್ವೆ ಮುಂದಾಗಿದೆ. ಆನ್ಲೈನ್ ನಲ್ಲಿ ಟ್ರೈನ್ ಟಿಕೆಟ್ ಬುಕ್ಕಿಂಗ್ ಮಾಡುವವರಿಗೆ ಅದರಲ್ಲೂ ಮುಖ್ಯವಾಗಿ ತತ್ಕಾಲ್ ಟ್ರೈನ್ ಟಿಕೆಟ್ ಬುಕ್ ಮಾಡುವವರಿಗೆ ಈ ಬದಲಾವಣೆ ನೇರ ಪರಿಣಾಮ ಬೀರಲಿದೆ. 

Add Zee News as a Preferred Source

ವಾಸ್ತವವಾಗಿ, ಇನ್ಮುಂದೆ ರೈಲಿನಲ್ಲಿ ತತ್ಕಾಲ್ ಟಿಕೆಟ್ ಬುಕ್ ಮಾಡಲು ಆಧಾರ್ ವೆರಿಫಿಕೇಶನ್ ಕಡ್ಡಾಯಗೊಳಿಸಲು ಭಾರತೀಯ ರೈಲ್ವೆ ಇಲಾಖೆ ಸಜ್ಜಾಗುತ್ತಿದೆ. ಐ‌ಆರ್‌ಸಿ‌ಟಿ‌ಸಿ, ಭಾರತೀಯ ರೈಲ್ವೇಯ ಈ ನಿರ್ಧಾರಕ್ಕೆ ಪ್ರಮುಖ ಕಾರಣವೇನು ಎಂಬ ಪ್ರಮುಖ ಮಾಹಿತಿ ಇಲ್ಲಿದೆ. 

ಇದನ್ನೂ ಓದಿ- ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ ನಿರ್ಧಾರ: ಸರ್ಕಾರಿ ನೌಕರರಿಗೆ ಜಾಕ್‌ಪಾಟ್

ಪ್ರಯಾಣಿಕರ ಅನುಕೂಲಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆಯು ತತ್ಕಾಲ್ ಟ್ರೈನ್ ಟಿಕೆಟ್'ಗಳನ್ನು ಬುಕ್ಕಿಂಗ್ ಮಾಡುವವರಿಗೆ ಇ-ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಕಡೆ ಗಳಿಗೆಯಲ್ಲಿ ಕನ್ಫರ್ಮ್ ಟಿಕೆಟ್ ಗಾಗಿ ತತ್ಕಾಲ್ ಟ್ರೈನ್ ಟಿಕೆಟ್ ಬುಕ್ಕಿಂಗ್ ಮಾಡುವ ಪ್ರತಿಯೊಬ್ಬರಿಗೂ ಈ ಹೊಸ ನಿಯಮ ಅನ್ವಯವಾಗಲಿದೆ. 

ಭಾರತೀಯ ರೈಲ್ವೆಯ ಉದ್ದೇಶ: 
ತತ್ಕಾಲ್ ಟಿಕೆಟ್ ಬುಕ್ಕಿಂಗ್ ವೇಳೆ ಏಜೆಂಟ್‌ಗಳ ಒಳನುಸುಳುವಿಕೆ, ವಂಚನೆಯನ್ನು ತಡೆಯುವ ಪ್ರಮುಖ ಉದ್ದೇಶದಿಂದ ಐ‌ಆರ್‌ಸಿ‌ಟಿ‌ಸಿ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಭಾರತೀಯ ರೈಲ್ವೆಯ ಈ ಹೊಸ ನಿಯಮದಿಂದ ತತ್ಕಾಲ್ ಕೋಟಾದ ಅಡಿಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಲು ಬಯಸುವ ನೈಜ ಪ್ರಯಾಣಿಕರಿಗೆ ಟಿಕೆಟ್ ಲಭ್ಯವಾಗುವಂತೆ ಮಾಡುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ- ನೀವೂ 10ವರ್ಷದ ಹಳೆಯ ಆಧಾರ್ ಕಾರ್ಡ್ ಹೊಂದಿದ್ದೀರಾ...? ಜೂನ್ 14ರ ಮೊದಲು ತಪ್ಪದೇ ಈ ಕೆಲಸ ಮಾಡಿ

ತತ್ಕಾಲ್ ಟಿಕೆಟ್ ಬುಕ್ಕಿಂಗ್ ಇ-ಆಧಾರ್ ಪರಿಶೀಲನೆ ಲಿಂಕ್ ಮೂಲಕ ಬುಕ್ ಮಾಡುವುದರಿಂದ ಟಿಕೆಟ್ ಬುಕಿಂಗ್ ಪ್ರಕ್ರಿಯೆ ಪಾರದರ್ಶಕವಾಗಲಿದೆ. ಹೊಸ ನಿಯಮದಡಿ ಪ್ರಯಾಣಿಕರು ತಮ್ಮ ಇ-ಆಧಾರ್ ದೃಢೀಕರಣದ ಮೂಲಕ ಸುಲಭವಾಗಿ ಸ್ವಯಂ ಟಿಕೆಟ್ ಬುಕ್ಕಿಂಗ್ ಮಾಡಬಹುದು. 

ರೈಲ್ವೆ ಇಲಾಖೆಯ ಮೂಲಗಳಿಂದ ಲಭ್ಯವಿರುವ ಮಾಹಿತಿಗಳ ಪ್ರಕಾರ, ಜೂನ್ ಅಂತ್ಯದಿಂದ ತತ್ಕಾಲ್ ಟ್ರೈನ್ ಟಿಕೆಟ್ ಬುಕ್ಕಿಂಗ್ ಗಾಗಿ ಈ ಹೊಸ ನಿಯಮ ಅನ್ವಯವಾಗಲಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News