Interim Budget 2024 Big Announcements: ಭಾರತದಲ್ಲಿ ಸುಮಾರು 20 ಲಕ್ಷ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ವೇತನ ಹೆಚ್ಚಳಕ್ಕೆ ಆಗ್ರಹ ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಸಧ್ಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ.


COMMERCIAL BREAK
SCROLL TO CONTINUE READING

2024 ರ ಮಧ್ಯಂತರ ಬಜೆಟ್ ಪ್ರಸ್ತುತಪಡಿಸಿರುವ ಕೇಂದ್ರ ವಿತ್ತ ಸಚಿವೆ ಸೀತಾರಾಮನ್, ಈಗ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.. ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತರಿಗಾಗಿ ಎಂಎಸ್ಪಿ ಹೆಚ್ಚಳ, 11.8 ಕೋಟಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಲಾಭ


'ನಾರಿ ಶಕ್ತಿ' ಕುರಿತು ಮಾತನಾಡಿರುವ ಸಚಿವೆ ಸೀತಾರಾಮನ್, 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳಾ ದಾಖಲಾತಿ 28% ರಷ್ಟು ಹೆಚ್ಚಾಗಿದೆ, STEM ಕೋರ್ಸ್‌ಗಳಲ್ಲಿ, ಯುವತಿಯರು ಮತ್ತು ಮಹಿಳೆಯರು 43% ದಾಖಲಾತಿಯನ್ನು ಮಾಡುತ್ತಾರೆ, ಇದು ವಿಶ್ವದಲ್ಲೇ ಅತ್ಯಧಿಕವಾಗಿದೆ. ಅಲ್ಲದೆ, ತ್ರಿವಳಿ ತಲಾಖ್‌ ಅನ್ನು ಕಾನೂನುಬಾಹಿರವಾಗಿ ಮಾಡಿರುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 70% ರಷ್ಟು ಮನೆಗಳು ಮಹಿಳೆಯರಿಗೆ ಅವರ ಘನತೆಯನ್ನು ಹೆಚ್ಚಿಸಿವೆ ಎಂದಿದ್ದಾರೆ.


ಮುಂದಿನ ಐದು ವರ್ಷಗಳು ಭಾರತಕ್ಕೆ ಅಭೂತಪೂರ್ವ ಅಭಿವೃದ್ಧಿಯ ವರ್ಷಗಳಾಗಲಿವೆ ಎಂದು ಹೇಳಿರುವ ಸಚಿವರು, ನಮ್ಮ ಸರ್ಕಾರ ಅಭಿವೃದ್ಧಿಯನ್ನು ಉತ್ತೇಜಿಸುವ ಮತ್ತು ಉಳಿಸಿಕೊಳ್ಳುವ ಆರ್ಥಿಕ ನೀತಿಗಳನ್ನು ಅಳವಡಿಸಿಕೊಳ್ಳುತ್ತದೆ, ಅಂತರ್ಗತ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಸುಗಮಗೊಳಿಸುತ್ತದೆ, ಉತ್ಪಾದಕತೆಯನ್ನು ಸುಧಾರಿಸುತ್ತದೆ, ಎಲ್ಲರಿಗೂ ಅವಕಾಶಗಳನ್ನು ಸೃಷ್ಟಿಸುತ್ತದೆ, ಅವರ ಸಾಮರ್ಥ್ಯಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಹೂಡಿಕೆಗಳಿಗೆ ಮತ್ತು ಆಕಾಂಕ್ಷೆಗಳನ್ನು ಪೂರೈಸಲು ಸಂಪನ್ಮೂಲಗಳ ಉತ್ಪಾದನೆಗೆ ಕೊಡುಗೆ ನೀಡುತ್ತದೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.