ಬೆಂಗಳೂರು : ಪ್ರತಿಯೊಬ್ಬರೂ ತಾವು ಮಾಡುವ ಸಂಪಾದನೆಯಲ್ಲಿ ಸ್ವಲ್ಪವಾದರೂ ಉಳಿತಾಯ ಮಾಡಬೇಕು ಎಂದು ಬಯಸುತ್ತಾರೆ. ಸರಿಯಾದ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ವೃದ್ಧಾಪ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಿಲ್ಲ. ಇಂದು ಹಲವಾರು ರೀತಿಯ ನಿವೃತ್ತಿ ಯೋಜನೆಗಳು ಲಭ್ಯವಿದೆ. ಆದರೆ ಇವುಗಳಲ್ಲಿ ಸರ್ಕಾರದ ಎಪಿವೈ ಅಂದರೆ ಅಟಲ್ ಪಿಂಚಣಿ ಯೋಜನೆ ಹೆಚ್ಚು ಜನಪ್ರಿಯವಾಗಿದೆ. ಈ ಯೋಜನೆಯು 60 ವಯಸ್ಸಿನ ನಂತರ ಐಷಾರಾಮಿ ಬದುಕು ನಡೆಸಲು ಸೂಕ್ತ ಅವಕಾಶ ಕಲ್ಪಿಸಿಕೊಡುತ್ತದೆ. ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಣ್ಣ ಮೊತ್ತವನ್ನು ಠೇವಣಿ ಮಾಡಿದರೆ, ಖಾತರಿಯ ಪಿಂಚಣಿ ಸಿಗುತ್ತದೆ.


COMMERCIAL BREAK
SCROLL TO CONTINUE READING

5 ಕೋಟಿಗೂ ಹೆಚ್ಚು ಜನರಿಂದ ಹೂಡಿಕೆ :  
ಜನಪ್ರಿಯ ಅಟಲ್ ಪಿಂಚಣಿ ಯೋಜನೆ (APY) ಅನ್ನು 2015-16 ರಲ್ಲಿ ಪಿಂಚಣಿ ಯೋಜನೆಯಾಗಿ ಪ್ರಾರಂಭಿಸಲಾಯಿತು. ವೇತನದಾರರಿಗೆ ನಿವೃತ್ತಿಯ ನಂತರ ನಿಯಮಿತ ಆದಾಯವನ್ನು ಒದಗಿಸುವ ಉದ್ದೇಶದಿಂದ  ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮುಖ್ಯ ಪ್ರಯೋಜನವೆಂದರೆ ಯಾವುದೇ ರೀತಿಯ ಸರ್ಕಾರಿ ಪಿಂಚಣಿ ಪಡೆಯಲು ಸಾಧ್ಯವಾಗದವರು, ಇದರಲ್ಲಿ ಹೂಡಿಕೆ ಮಾಡುವ ಮೂಲಕ ನಿಯಮಿತ ಆದಾಯವನ್ನು ಖಚಿತಪಡಿಸಿಕೊಳ್ಳಬಹುದು. ಈ ಯೋಜನೆಯ ಪ್ರಯೋಜನಗಳಿಂದಾಗಿ, ಜನರು ಇದರತ್ತ ಆಕರ್ಷಿತರಾಗುತ್ತಿದ್ದಾರೆ. ಇದನ್ನು APY ಯೋಜನೆಯ ಚಂದಾದಾರರ ಸಂಖ್ಯೆಯಿಂದ ಅಳೆಯಬಹುದು. ಇದುವರೆಗೆ 5 ಕೋಟಿಗೂ ಹೆಚ್ಚು ಮಂದಿ ಈ ಯೋಜನೆಯಲ್ಲಿ ಹೂಡಿಕೆ ಮಾಡುತ್ತಿದ್ದಾರೆ. 


ಇದನ್ನೂ ಓದಿ : Sugar Price Hike: ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಸಕ್ಕರೆ ದರ ಏರಿಕೆ!


ನಿವೃತ್ತಿಯ ನಂತರ ಸಿಗುವುದು ಒತ್ತಡವಿಲ್ಲದ ಬದುಕು : 
ವೃದ್ಧಾಪ್ಯದಲ್ಲಿ ಪಿಂಚಣಿ ದೊಡ್ಡ ಸಹಾಯವಾಗಿದೆ. ಇದಕ್ಕಾಗಿ ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಲಾಭದಾಯಕ ವ್ಯವಹಾರವಾಗಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ 1000 ರಿಂದ 5000 ರೂ.ವರೆಗೆ ಮಾಸಿಕ ಪಿಂಚಣಿ ಪಡೆಯಬಹುದು. ಇದಕ್ಕಾಗಿ ಪ್ರತಿ ತಿಂಗಳು ಸಣ್ಣ ಮೊತ್ತವನ್ನು ಇದರಲ್ಲಿ ಠೇವಣಿ ಮಾಡಬಹುದು. 18 ರಿಂದ 40 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.  ಪ್ರತಿ ತಿಂಗಳು 5,000 ರೂಪಾಯಿಗಳ ಪಿಂಚಣಿ ಪಡೆಯಲು, APY ಯೋಜನೆಯಲ್ಲಿ ಪ್ರತಿ ತಿಂಗಳು 210 ರೂಪಾಯಿಗಳನ್ನು ಹೂಡಿಕೆ ಮಾಡಬೇಕಾಗುತ್ತದೆ.


ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ನಿಗದಿ : 
ಈ ಯೋಜನೆಯಡಿ ಖಾತೆಯನ್ನು ತೆರೆಯಲು ವ್ಯಕ್ತಿಯು ಭಾರತದ ಪ್ರಜೆಯಾಗಿರಬೇಕು. ಅರ್ಜಿದಾರರ ವಯಸ್ಸು 18-40 ರ ನಡುವೆ ಇರಬೇಕು.  ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಇದಲ್ಲದೆ, ಅರ್ಜಿದಾರರು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಈಗಾಗಲೇ ಅಟಲ್ ಪಿಂಚಣಿಯ ಫಲಾನುಭವಿಯಾಗಿರಬಾರದು. ಇದರಲ್ಲಿ, ಕನಿಷ್ಠ ಕೊಡುಗೆ ಅವಧಿಯನ್ನು 20 ವರ್ಷಗಳಿಗೆ ನಿಗದಿಪಡಿಸಲಾಗಿದೆ.


ಇದನ್ನೂ ಓದಿ : ಶ್ರಾವಣದಲ್ಲಿ ನಿರಂತರ ಇಳಿಕೆ ಕಾಣುತ್ತಿದೆ ಚಿನ್ನದ ಬೆಲೆ: ಇಂದು 10 ಗ್ರಾಂ ಬಂಗಾರದ ದರ ಎಷ್ಟಿದೆ ಗೊತ್ತಾ?


ಸರ್ಕಾರ ಮಾಡಿದ ಬದಲಾವಣೆಗಳು : 
ಸರ್ಕಾರ ಕಳೆದ ತಿಂಗಳು ಯೋಜನೆಯ ನಿಯಮಗಳನ್ನು ಬದಲಾಯಿಸಿದೆ. ಸರ್ಕಾರದ ಹೊಸ ನಿಯಮದ ಪ್ರಕಾರ, ಆದಾಯ ತೆರಿಗೆ ಪಾವತಿದಾರರು  ಈ ಯೋಜನೆಯನ್ನು ಪಡೆಯಲು ಸಾಧ್ಯವಿಲ್ಲ. ಬದಲಾವಣೆಯನ್ನು ಅಕ್ಟೋಬರ್ 1, 2022 ರಿಂದ ಜಾರಿಗೆ ತರಲಾಗಿದೆ. ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆದಾರರಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.