ಈ ಸರ್ಕಾರಿ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಸಿಗುವುದು 9 ಸಾವಿರ ರೂಪಾಯಿ ಪಿಂಚಣಿ
Modi Government PMVVY Scheme : ಈ ಯೋಜನೆಯನ್ನು ಕೇಂದ್ರ ಸರ್ಕಾರವು ಮೇ 26 2020 ರಂದು ಪ್ರಾರಂಭಿಸಿತು. ಈ ಯೋಜನೆಯ ಭಾಗವಾಗಬೇಕಾದರೆ ಮಾರ್ಚ್ 31, 2023 ರವರೆಗೆ ಇದರಲ್ಲಿ ಹೂಡಿಕೆ ಮಾಡಬಹುದು.
Modi Government PMVVY Scheme : ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ಇದರ ಅಡಿಯಲ್ಲಿ ಮಾಸಿಕ ಪಿಂಚಣಿ ಎಷ್ಟು ಸಿಗಲಿದೆ ಎನ್ನುವುದನ್ನು ಖಾತರಿಪಡಿಸಲಾಗಿದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರವು ಮೇ 26 2020 ರಂದು ಪ್ರಾರಂಭಿಸಿತು. ಈ ಯೋಜನೆಯ ಭಾಗವಾಗಬೇಕಾದರೆ ಮಾರ್ಚ್ 31, 2023 ರವರೆಗೆ ಇದರಲ್ಲಿ ಹೂಡಿಕೆ ಮಾಡಬಹುದು. ಈ ಯೋಜನೆಯಲ್ಲಿ, 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಾದವರು ಮಾಸಿಕ ಅಥವಾ ವಾರ್ಷಿಕ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಬಹುದು.
ವಯ ವಂದನಾ ಯೋಜನೆ ಎಂದರೇನು?
ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯು ಸಾಮಾಜಿಕ ಭದ್ರತಾ ಯೋಜನೆಯಾಗಿದೆ. ಇದರ ಅಡಿಯಲ್ಲಿ ಫಲಾನುಭವಿಯು ಮಾಸಿಕ ಪಿಂಚಣಿ ಪಡೆಯುತ್ತಾನೆ. ಇದನ್ನು ಭಾರತ ಸರ್ಕಾರ ಜಾರಿಗೆ ತಂದಿದ್ದು, ಈ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮ ನಿರ್ವಹಿಸುತ್ತಿದೆ. 60 ವರ್ಷ ದಾಟಿದವರು ಗರಿಷ್ಠ 15 ಲಕ್ಷ ರೂ ಹೂಡಿಕೆ ಮಾಡಬಹುದು. ಈ ಮೊದಲು ಹೂಡಿಕೆಯ ಮಿತಿ 7.5 ಲಕ್ಷ ರೂ.ಗಳಾಗಿತ್ತು. ಆದರೆ ಈಗ ಇದನ್ನು ದ್ವಿಗುಣಗೊಳಿಸಲಾಗಿದೆ. ಇತರ ಯೋಜನೆಗಳಿಗೆ ಹೋಲಿಸಿದರೆ, ಹಿರಿಯ ನಾಗರಿಕರು ಈ ಯೋಜನೆಯಲ್ಲಿ ಹೆಚ್ಚಿನ ಬಡ್ಡಿಯನ್ನು ಪಡೆಯುತ್ತಾರೆ. 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರು ಈ ಪಿಂಚಣಿ ಯೋಜನೆಯನ್ನು ಆಯ್ಕೆ ಮಾಡಬಹುದಾಗಿದೆ.
ಇದನ್ನೂ ಓದಿ : ಸರ್ಕಾರದ ಹೊಸ ಪ್ಲಾನ್: ಪೆಟ್ರೋಲ್-ಡೀಸೆಲ್‌ನಿಂದ ಎಲ್‌ಪಿಜಿ ಸಿಲಿಂಡರ್‌ಗಳವರೆಗೆ ಎಲ್ಲವೂ ಅಗ್ಗ!
ಮಾಸಿಕ ಪಿಂಚಣಿ 9250 ರೂ. ಕೈ ಸೇರಲಿದೆ :
ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ, ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯಲ್ಲಿ 15 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಬೇಕಾಗುತ್ತದೆ. ಈ ಯೋಜನೆಯ ಅಡಿಯಲ್ಲಿ, 7.40 ಪ್ರತಿಶತ ವಾರ್ಷಿಕ ಬಡ್ಡಿಯನ್ನು ಪಡೆಯಬಹುದು. ಅದರಂತೆ ಹೂಡಿಕೆಯ ವಾರ್ಷಿಕ ಬಡ್ಡಿ 1,11,000 ರೂ. ಆಗಿರಲಿದೆ. ಇದನ್ನು 12 ತಿಂಗಳುಗಳ ವಿಂಗಡಿಸಿದರೆ 9250 ರೂಪಾಯಿ ಆಗುತ್ತದೆ. ಇನ್ನು ಈ ಯೋಜನೆಯಲ್ಲಿ 1 ಲಕ್ಷದ 50 ಸಾವಿರ ರೂಪಾಯಿಗಳನ್ನು ಹೂಡಿಕೆ ಮಾಡಿದರೆ ಮಾಸಿಕ 1000 ರೂಪಾಯಿಗಳ ಪಿಂಚಣಿ ಪಡೆಯಬಹುದು.
10 ವರ್ಷಗಳಲ್ಲಿ ಸಿಗುವುದು ಪೂರ್ಣ ಮೊತ್ತ :
ಈ ಯೋಜನೆ 10 ವರ್ಷಗಳ ಅವಧಿಯದ್ದಾಗಿದೆ. ಠೇವಣಿ ಹಣದ ಮೇಲೆ ಮಾಸಿಕ ಪಿಂಚಣಿ ನಿರ್ಧಾರವಾಗುತ್ತದೆ. 10 ವರ್ಷಗಳ ಕಾಲ ಯೋಜನೆಯಲ್ಲಿ ಉಳಿದಿದ್ದರೆ, 10 ವರ್ಷಗಳ ನಂತರ ಹೂಡಿಕೆ ಮಾಡಿದ ಹಣವನ್ನು ಹಿಂತಿರುಗಿಸಲಾಗುತ್ತದೆ. ಅಲ್ಲದೆ, ಯಾವುದೇ ಸಮಯದಲ್ಲಿ ಈ ಯೋಜನೆಯನ್ನು ಸರೆಂಡರ್ ಮಾಡಬಹುದು.
ಇದನ್ನೂ ಓದಿ : Gold Price Today :ಇಂದಿನ ಚಿನ್ನ ಬೆಳ್ಳಿ ದರ ತಿಳಿಯಿರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.