Credit Card: ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ವೇಗವಾಗಿ ಹೆಚ್ಚಾಗುತ್ತಿದೆ. ಒಂದು ನಾಣ್ಯಕ್ಕೆ ಎರಡು ಮುಖಗಳಿರುವಂತೆ ಪ್ರತಿಯೊಂದರಲ್ಲೂ ಒಳ್ಳೆಯದು, ಕೆಟ್ಟದ್ದೂ ಎರಡೂ ಇರುತ್ತದೆ. ಬಹುತೇಕ ಸಂದರ್ಭಗಳಲ್ಲಿ ಕೈಯಲ್ಲಿ ಕಾಸಿಲ್ಲದಿದ್ದಾಗ ಕ್ರೆಡಿಟ್ ಕಾರ್ಡ್ ನಮಗೆ ತುಂಬಾ ಪ್ರಯೋಜನಕಾರಿಯೇ ಆಗಿದ್ದರೂ ನಾವು ಅದನ್ನು ಸರಿಯಾಗಿ ನಿರ್ವಹಿಸದಿದ್ದರೆ ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ದಾರಿ ಮಾಡಿಕೊಡುತ್ತದೆ.
ಹೌದು, ಕ್ರೆಡಿಟ್ ಕಾರ್ಡ್ ತುಂಬಾ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ. ಆದರೆ, ಅದನ್ನು ನೀವು ಸರಿಯಾದ ರೀತಿಯಲ್ಲಿ ಬಳಸಿಕೊಂಡರಷ್ಟೇ ಅದು ಪ್ರಯೋಜನಕಾರಿ. ಕ್ರೆಡಿಟ್ ಕಾರ್ಡ್ ವಿಷಯದಲ್ಲಿ ನೀವು ಮಾಡುವ ಒಂದು ಸಣ್ಣ ತಪ್ಪು ಕೂಡ ನಿಮಗೆ ತೊಂದರೆ ಉಂಟು ಮಾಡಬಹುದು.
ವಾಸ್ತವವಾಗಿ, ನೀವು ಕ್ರೆಡಿಟ್ ಕಾರ್ಡ್ ಬಿಲ್ ಅನ್ನು ಸಮಯಕ್ಕೆ ಸರಿಯಾಗಿ ಪಾವತಿಸದಿದ್ದಾಗ ಇದಕ್ಕಾಗಿ, ಕ್ರೆಡಿಟ್ ಕಾರ್ಡ್ ಕಂಪನಿಗಳು ದಂಡವಾಗಿ ಹೆಚ್ಚಿನ ಬಡ್ಡಿಯನ್ನು ವಿಧಿಸುತ್ತದೆ. ಇದು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುವುದರ ಜೊತೆಗೆ, ನಿಮ್ಮ ಕ್ರೆಡಿಟ್ ರೇಟಿಂಗ್ ಮೇಲೆಯೂ ನಕಾರಾತ್ಮಕ ಪರಿಣಾಮ ಉಂಟು ಮಾಡಬಹುದು. ಇದನ್ನು ತಪ್ಪಿಸಲು ಕೆಲವು ಮಾರ್ಗಗಳನ್ನು ಅನುಸರಿಸುವುದು ಬಹಳ ಮುಖ್ಯ.
ಇದನ್ನೂ ಓದಿ- ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್
ಕ್ರೆಡಿಟ್ ಕಾರ್ಡ್ ಸಾಲದ ಹೊರೆಯಿಂದ ಪರಿಹಾರಕ್ಕಾಗಿ ಇಲ್ಲಿವೆ ಸುಲಭ ಮಾರ್ಗ:-
ಕಡಿಮೆ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್:
ಕೈಯಲ್ಲಿ ಕ್ರೆಡಿಟ್ ಕಾರ್ಡ್ ಇದೆ ಎಂದು ಅತಿಯಾಗಿ ಶಾಪಿಂಗ್ ಮಾಡುವುದನ್ನು ತಪ್ಪಿಸಿ. ಸಮಯಕ್ಕೆ ಬಿಲ್ ಪಾವತಿಸಲು ವಿಫಲವಾದರೆ, ಇದು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತದೆ. ಇದನ್ನು ತಪ್ಪಿಸಲು ಸುಲಭ ಮಾರ್ಗವೆಂದರೆ, ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ಅನ್ನು ಯಾವಾಗಲೂ ಕಡಿಮೆ ಇರಿಸಿ.
ಬ್ಯಾಲೆನ್ಸ್ ಮರುಪಾವತಿ:
ಯಾವಾಗಲೂ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ಮರುಪಾವತಿಗಾಗಿ ಕೊನೆಯ ದಿನಾಂಕದವರೆಗೆ ಕಾಯಬೇಡಿ. ಬದಲಿಗೆ ಮೊದಲೇ ಆ ಹಣವನ್ನು ಮರುಪಾವತಿ ಮಾಡುವುದನ್ನು ಪರಿಗಣಿಸಿ.
ಇಎಂಐ ಮೂಲಕ ಶಾಪಿಂಗ್:
ಹಲವೊಮ್ಮೆ ಯಾವುದಾದರೂ ದೊಡ್ಡ ವಸ್ತುಗಳನ್ನು ಖರೀದಿಸುವಾಗ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸುತ್ತೇವೆ. ಆದರೆ, ಒಟ್ಟಿಗೆ ಪಡೆದ ಹಣಕ್ಕೆ ನಾವು ಹೆಚ್ಚಿನ ಬಡ್ಡಿಯನ್ನು ಪಾವತಿಸಬೇಕಾಗುತ್ತದೆ. ಇದನ್ನು ತಪ್ಪಿಸಲು ನಿಮ್ಮ ಕ್ರೆಡಿಟ್ ಕಾರ್ಡ್ ಕಂಪನಿಯಿಂದ ಇಎಂಐ ಪಾವತಿ ಸೌಲಭ್ಯವಿದ್ದರೆ ಆ ಆಯ್ಕೆಯನ್ನು ಆರಿಸಿ. ಇದರ ಮೇಲೆ ಕಡಿಮೆ ಬಡ್ಡಿಯನ್ನು ವಿಧಿಸಲಾಗುತ್ತದೆ.
ಇದನ್ನೂ ಓದಿ- ರಾಜ್ಯ ಸರ್ಕಾರಿ ನೌಕರರಿಗೂ ಸಿಹಿ ಸುದ್ದಿ ! ದಸರಾ ವೇಳೆಯಲ್ಲಿಯೇ ವೇತನ ಹೆಚ್ಚಳ ಘೋಷಿಸಿದ ಸರ್ಕಾರ ! ಖಾತೆ ಸೇರುವ ಹಣ ಎಷ್ಟು ?
ಒಂದೇ ಸ್ಥಳದಲ್ಲಿ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ವರ್ಗಾಯಿಸಿ:
ನೀವು ಕಡಿಮೆ ಬಡ್ಡಿದರದೊಂದಿಗೆ ಕ್ರೆಡಿಟ್ ಕಾರ್ಡ್ ಹೊಂದಿದ್ದರೆ, ನಂತರ ನಿಮ್ಮ ಮೊದಲ ಕಾರ್ಡ್‌ನ ಬ್ಯಾಲೆನ್ಸ್ ಅನ್ನು ಎರಡನೇ ಕಾರ್ಡ್‌ಗೆ ವರ್ಗಾಯಿಸಿ, ಆದರೆ ಅದಕ್ಕೂ ಮೊದಲು, ನೀವು ಸಂಸ್ಕರಣಾ ಶುಲ್ಕಗಳು ಮತ್ತು ಇತರ ಶುಲ್ಕಗಳ ಬಗ್ಗೆ ತಿಳಿದುಕೊಳ್ಳುವುದನ್ನು ನಿರ್ಲಕ್ಷಿಸಬೇಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.