ನವದೆಹಲಿ: ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ವಾಹನ ತಯಾರಿಕಾ ಕಂಪನಿಗಳು ಮತ್ತು ಗ್ರಾಹಕರಿಬ್ಬರಿಗೂ EV ಪ್ರಚಾರ ಮಾಡಲು ಯೋಜನೆ ರೂಪಿಸಲಾಗಿದೆ. ಆದಾಗ್ಯೂ, ಭಾರತದಲ್ಲಿ EVಗಳಿಗೆ ದೊಡ್ಡ ಅಡಚಣೆಯೆಂದರೆ ಚಾರ್ಜಿಂಗ್ ಮೂಲಸೌಕರ್ಯ. ಆದರೆ, ಈ ದಿಸೆಯಲ್ಲಿಯೂ ಅತ್ಯಂತ ವೇಗವಾಗಿ ಕೆಲಸ ನಡೆಯುತ್ತಿದೆ. ಕಳೆದ ತಿಂಗಳ ಮಾರ್ಚ್‌ನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ನೀಡಿದ ಮಾಹಿತಿ ಪ್ರಕಾರ, ಭಾರತದಲ್ಲಿ ಒಟ್ಟು 10,60,707 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿದ್ದು, 1,742 ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳು (PCS) ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ.


COMMERCIAL BREAK
SCROLL TO CONTINUE READING

ಮಾರ್ಚ್ 19ರವರೆಗಿನ Vehicle 4ರ ಮಾಹಿತಿಯ ಪ್ರಕಾರ, ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ 10,60,707 ಇವೆ. ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಪ್ರಕಾರ ಮಾರ್ಚ್ 21, 2022ರಂತೆ ದೇಶದಲ್ಲಿ  ಒಟ್ಟು 1,742 ಪಬ್ಲಿಕ್ ಚಾರ್ಜಿಂಗ್ ಸ್ಟೇಷನ್‌(PCS)ಗಳು ಕಾರ್ಯನಿರ್ವಹಿಸುತ್ತಿವೆ.


ಇದನ್ನೂ ಓದಿ: Petrol-Diesel Price: ದೇಶದಲ್ಲಿ ಮತ್ತಷ್ಟು ಅಗ್ಗವಾಗಲಿದೆ ಪೆಟ್ರೋಲ್-ಡೀಸೆಲ್! ಇಂದಿನ ಅಪ್‌ಡೇಟ್ ತಿಳಿಯಿರಿ


ಅನೇಕ ಸರ್ಕಾರಿ ಮತ್ತು ಖಾಸಗಿ ಕಂಪನಿಗಳು ಇವಿ ಚಾರ್ಜಿಂಗ್ ಮೂಲಸೌಕರ್ಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿವೆ. ಟಾಟಾ ಪವರ್, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಎನರ್ಜಿ ಎಫಿಷಿಯನ್ಸಿ ಸರ್ವೀಸಸ್ ಲಿಮಿಟೆಡ್ (EESL) ಮತ್ತು ವಿದ್ಯುತ್ ಮತ್ತು ಉಷ್ಣ ನಿರ್ವಹಣಾ ಪರಿಹಾರ ಕಂಪನಿ ಡೆಲ್ಟಾ ಸೇರಿದಂತೆ ವಿವಿಧ ಪಾಲುದಾರರು ಮತ್ತು OEMಗಳು ಇವುಗಳಲ್ಲಿ ಸೇರಿವೆ.


ಇತ್ತೀಚೆಗೆ ಡೆಲ್ಟಾ 6,000 EV ಚಾರ್ಜರ್‌ಗಳನ್ನು ಸ್ಥಾಪಿಸುವ ಮೈಲಿಗಲ್ಲನ್ನು ಸಾಧಿಸಿದೆ ಎಂದು ಮಾಹಿತಿ ನೀಡಿದೆ. ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್ ಬಹು EV ಚಾರ್ಜರ್‌ಗಳನ್ನು ಹೊಂದಬಹುದು. ಆದ್ದರಿಂದ ಈ ಅಂಕಿ ಅಂಶವು ದೇಶದಲ್ಲಿ ಅಸ್ತಿತ್ವದಲ್ಲಿರುವ ಸಾರ್ವಜನಿಕ ಚಾರ್ಜಿಂಗ್ ಸ್ಟೇಷನ್‌ಗಳ ಸಂಖ್ಯೆಗಿಂತ ಹೆಚ್ಚಾಗಿದೆ. ಟಾಟಾ ಪವರ್ ಲಿಮಿಟೆಡ್ ಕಂಪನಿಯ ಸಹಭಾಗಿತ್ವದಲ್ಲಿ ಡೆಲ್ಟಾ 1000ಕ್ಕೂ ಹೆಚ್ಚು ಚಾರ್ಜರ್‌ಗಳನ್ನು ಪೂರೈಸಿದೆ.


ಇದನ್ನೂ ಓದಿ: Gold-Sliver Price: ಚಿನ್ನ ಪ್ರಿಯರೇ ಸಿಹಿ ಸುದ್ದಿ: ಹಳದಿ ಲೋಹದ ಬೆಲೆಯಲ್ಲಿ ಭಾರೀ ಇಳಿಕೆ


ಭಾರತದಲ್ಲಿ ಇದೀಗ ಅತಿ ದೊಡ್ಡ ಸಮಸ್ಯೆ ಎಂದರೆ ಚಾರ್ಜಿಂಗ್ ಸ್ಟೇಷನ್‌ಗಳು ಎಂಬುದು ಗಮನಿಸಬೇಕಾದ ಸಂಗತಿ. ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಾತನಾಡುವಾಗ ಚಾರ್ಜ್ ಮಾಡುವ ಕಾಳಜಿಯು ಜನರ ಮನಸ್ಸಿನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚುತ್ತಿರುವ ಚಾರ್ಜಿಂಗ್ ಮೂಲಸೌಕರ್ಯದೊಂದಿಗೆ ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಸಾಧ್ಯವಾಗುತ್ತದೆ. ಆದಾಗ್ಯೂ, ಚಾರ್ಜಿಂಗ್ ಮೂಲಸೌಕರ್ಯದ ಪ್ರಸ್ತುತ ಸ್ಥಿತಿ ಹೇಗಿದೆ ಅನ್ನೋದು ಈಗಾಗಲೇ ನಿಮಗೆ ತಿಳಿದಿದೆ. ಈಗ EV ಖರೀದಿಸಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ನಿಮಗೆ ಬಿಟ್ಟದ್ದು. ಆದರೆ ಭವಿಷ್ಯದಲ್ಲಿ EV ವಾಹನಗಳ ಕಾರುಬಾರು ಜೋರಾಗಿರುತ್ತದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.