ಶ್ರೀರಾಮ ಜನ್ಮ ಭೂಮಿಯಲ್ಲಿ ಕರ್ಣಾಟಕ ಬ್ಯಾಂಕ್ ನ 915 ನೇ ಶಾಖೆ ಪ್ರಾರಂಭ

ಭಗವಾನ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಕರ್ಣಾಟಕ ಬ್ಯಾಂಕ್ ತನ್ನ 915ನೇ ಶಾಖೆಯನ್ನು ತೆರೆದಿದೆ. ಅಲ್ಲದೆ, ನೂತನ ಶಾಖೆಯ ಮಿನಿ ಇ-ಲಾಬಿಯನ್ನೂ ಸಹ ಪ್ರಾರಂಭಿಸಿದೆ. ಜನವರಿ 22ರಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆಯಾಗಲಿದೆ.

Written by - Krishna N K | Last Updated : Jan 10, 2024, 03:14 PM IST
  • ಅಯೋಧ್ಯೆಯಲ್ಲಿ ಕರ್ಣಾಟಕ ಬ್ಯಾಂಕ್‌ನ 915ನೇ ಶಾಖೆ ಪ್ರಾರಂಭ
  • ಮಿನಿ ಇ-ಲಾಬಿಯನ್ನೂ ಸಹ ಪ್ರಾರಂಭಿಸಿದ ಕರ್ಣಾಟಕ ಬ್ಯಾಂಕ್‌
  • ಚಂಪತ್‌ ರೈ ಅವರು ಈ ನೂತನ ಶಾಖೆಯನ್ನು ಉದ್ಘಾಟಿಸಿದರು
ಶ್ರೀರಾಮ ಜನ್ಮ ಭೂಮಿಯಲ್ಲಿ ಕರ್ಣಾಟಕ ಬ್ಯಾಂಕ್ ನ 915 ನೇ ಶಾಖೆ ಪ್ರಾರಂಭ title=

ಅಯೋಧ್ಯೆ : ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್ ತನ್ನ 915ನೇ ಶಾಖೆಯನ್ನು ತೆರೆದಿದೆ, ಅದನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳಾದ ಚಂಪತ್‌ ರೈ ಅವರು ಈ ನೂತನ ಶಾಖೆಯನ್ನು ಉದ್ಘಾಟಿಸಿದರು.

ಪವಿತ್ರ ಅಯೋಧ್ಯೆಯಲ್ಲಿ ನಮ್ಮ 915ನೇ ಶಾಖೆಯನ್ನು ಪ್ರಾರಂಭಿಸಲು ನಾವು ಸಂತೋಷ ಪಡುತ್ತೇವೆ. 100 ವರ್ಷಗಳ ವಿಶ್ವಾಸಾರ್ಹ ಹಾಗೂ ಗ್ರಾಹಕಸ್ನೇಹಿ ಪರಂಪರೆಯನ್ನು ಹೊಂದಿರುವ ಕರ್ಣಾಟಕ ಬ್ಯಾಂಕ್, ಅಯೋಧ್ಯೆಯ ನಾಗರಿಕರಿಗೆ ಮತ್ತು ಪ್ರವಾಸಿಗರಿಗೆ ಉತ್ತಮ ಬ್ಯಾಂಕಿಂಗ್ ಸೇವೆಗಳನ್ನು ನೀಡಲಿದೆ ಎಂದು ಭರವಸೆ ನೀಡಿದರು. ಅಲ್ಲದೆ, ಅಯೋಧ್ಯೆಯು ವಿಶ್ವ ದರ್ಜೆಯ ಮೂಲಸೌಕರ್ಯ ಹಾಗೂ ಸಾಂಸ್ಕೃತಿಕ ಸಂರಕ್ಷಣೆಯ ಪರಿಪೂರ್ಣ ತಾಣವಾಗಿ ಹೊರಹೊಮ್ಮಿದೆ ಹಾಗೂ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತದೆ ಬ್ಯಾಂಕಿನ ಎಂಡಿ ಮತ್ತು ಸಿಇಒ ಶ್ರೀಕೃಷ್ಣನ್ ಎಚ್ ಅವರು ತಿಳಿಸಿದರು.  

ಇದನ್ನೂ ಓದಿ: ಹಸುಗಳಿಗೆ ಡ್ರೈ ಫ್ರೂಟ್ಸ್‌ ತಿನ್ನಿಸಿ, ಬಿಯರ್‌ ಕುಡಿಸಿ, ʼಗೋಮಾಂಸʼ ರುಚಿಯಾಗಿರುತ್ತೆ..!

ಶ್ರೀರಾಮನ ಪವಿತ್ರ ಜನ್ಮಸ್ಥಳ ಅಯೋಧ್ಯೆಯಲ್ಲಿ ನಮ್ಮ ಬ್ಯಾಂಕಿನ ಹೊಸ ಶಾಖೆಯನ್ನು ಉದ್ಘಾಟಿಸಲು ಸಂತೋಷವಾಗುತ್ತಿದೆ. ಇದು ಆರ್ಥಿಕ ಸಮೃದ್ಧಿ ಮತ್ತು ಸಮುದಾಯದ ಅಭಿವೃದ್ಧಿಗೆ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ ಎಂದು ನೂತನ ಶಾಖೆಯ ಮಿನಿ ಇ-ಲಾಬಿಯನ್ನು ಉದ್ಘಾಟಿಸಿ ಬ್ಯಾಂಕ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್ ರಾವ್ ಹೇಳಿದರು. ಅಲ್ಲದೆ, ಅಯೋಧ್ಯೆಯಲ್ಲಿ ಪ್ರಾರಂಭವಾಗಿರುವ ನಮ್ಮ ನೂತನ ಶಾಖೆಯು ಅತ್ಯಾದುನಿಕ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತ ಮತ್ತು ಉತ್ತಮ ಹಣಕಾಸು ಸೇವೆಗಳನ್ನು ನೀಡಲಿದೆ ಎಂದು ಭರವಸೆ ನೀಡಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News