Karnataka Budget 2022: ಸ್ವಸಹಾಯ ಸಂಘಗಳು ಹಾಗೂ ಮಹಿಳೆಯರ ಉದ್ಯೋಗಕ್ಕೆ ಬಜೆಟ್ ಕೊಡುಗೆ ಏನು?

Bommai Budget 2022 - ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.  

Written by - Prashobh Devanahalli | Edited by - Nitin Tabib | Last Updated : Mar 4, 2022, 03:10 PM IST
  • ಸಿಎಂ ಬಸವರಾಜ್ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.
  • ತಮ್ಮ ಬಜೆಟ್ ನಲ್ಲಿ ಮಹಿಳೆಯರಿಗೆ ಸಿಎಂ ನೀಡಿದ ಕೊಡುಗೆ ಏನು?
  • ಸ್ವಸಹಾಯ ಗುಂಪುಗಳಿಗೆ ಸಿಎಂ ನೀಡಿದ ಕೊಡುಗೆ ಏನು?
Karnataka Budget 2022: ಸ್ವಸಹಾಯ ಸಂಘಗಳು ಹಾಗೂ ಮಹಿಳೆಯರ ಉದ್ಯೋಗಕ್ಕೆ ಬಜೆಟ್ ಕೊಡುಗೆ ಏನು? title=
Karnataka Budget 2022 For Women(File Photo)

ಬೆಂಗಳೂರು: Bommai Budget 2022 - ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.  ತಮ್ಮ ಬಜೆಟ್ ಮಂಡನೆಯ (Budget 2022) ವೇಳೆ ಮಾತನಾಡಿರುವ ಸಿಎಂ, ಮಹಿಳೆಯರು (Karnataka Budget 2022 For Women), ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಆರ್ಥಿಕವಾಗಿ ದುರ್ಬಲ ವರ್ಗದವರು (Karnataka Budget 2022 For Self Help Groups) ಆರ್ಥಿಕ ಚಟುವಟಿಕೆಯಲ್ಲಿ ಹೆಚ್ಚಾಗಿ ತೊಡಗುವಂತೆ ಮಾಡಲು ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ರೂಪಿಸಿ, ಅವುಗಳನ್ನು ಜಾರಿಗೆ ತರುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ ಎಂದು ಹೇಳಿದ್ದಾರೆ. 

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ
• ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.

• ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ.  

ಇದನ್ನೂ ಓದಿ-Karnataka Budget 2022: ಕೃಷಿ ಕ್ಷೇತ್ರಕ್ಕೆ ಬೊಮ್ಮಾಯಿ ಬಜೆಟ್ 2022ರಲ್ಲಿ ಏನಿದೆ?

• ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು “ಅಸ್ಮಿತೆ” ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ; ಹೋಬಳಿ/ ಜಿಲ್ಲೆ/ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ.

ಇದನ್ನೂ ಓದಿ-Karnataka Budget 2022: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿದ ಸಿಎಂ

• ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ - ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರುನÀಲ್ಲಿ ಸೀರೆ ಮೈಕ್ರೋಕ್ಲಸ್ಟರ್ ಅಭಿವೃದ್ಧಿ.

ಇದನ್ನೂ ಓದಿ-Karnataka Crime : ಗುಂಡ್ಲುಪೇಟೆಯಲ್ಲಿ‌‌‌ ಕಲ್ಲು ಕ್ವಾರಿ ಕುಸಿತ ; ಲಾರಿಗಳೆಲ್ಲಾ ಪಲ್ಟಿ, 6 ಜನ ಸಿಲುಕಿರುವ ಶಂಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News