Latest news on Karnataka state budget 2024: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರೀ ಕೊಡುಗೆಗಳನ್ನು ನೀಡಿದ್ದಾರೆ. ಇದರಲ್ಲಿ ಮುಖ್ಯವಾಗಿ, ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆ ನವೀಕರಣಕ್ಕೆ ಬಂಪರ್ ಕೊಡುಗೆ ನೀಡಿದ್ದು, ಕ್ಯಾನ್ಸರ್ ಚಿಕಿತ್ಸೆಗೆ ಭರಪೂರ ಅನುದಾನವನ್ನು ನೀಡಲಾಗಿದೆ.
ಆರೋಗ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಈ ಕೆಳಕಂಡಂತಿದೆ:
ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು.
ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
ಇದನ್ನೂ ಓದಿ- Karnataka Budget 2024 Live Updates: ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲವೆಂದ ಸಿಎಂ ಸಿದ್ದರಾಮಯ್ಯ
ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.
ಕೆ.ಸಿ. ಜನರಲ್ ಆಸ್ಪತ್ರೆ ನವೀಕರಣಕ್ಕೆ ಕೊಡುಗೆ:
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಗ್ರಾಮೀಣ ಪ್ರದೇಶದ ಜನರಿಗೆ 24x7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ 2 ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 15 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಾನವ ಸಂಪನ್ಮೂಲದೊಂದಿಗೆ ಕಾರ್ಯಗತಗೊಳಿಸಲಾಗುವುದು.
ಕ್ಯಾನ್ಸರ್ ಚಿಕಿತ್ಸೆ:
ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕಿಮೋಥೆರಪಿ (Chemotherapy) ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇದನ್ನೂ ಓದಿ- Karnataka Budget 202 : ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ ಒಟ್ಟಾರೆಯಾಗಿ 21ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.