Latest news on Karnataka state budget 2024: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಐತಿಹಾಸಿಕ ಬಜೆಟ್ನಲ್ಲಿ ರಾಜ್ಯದ ರೈತರ ಅಭಿವೃದ್ದಿಗಾಗಿ  "ರೈತ ಸಮೃದ್ಧಿ ಯೋಜನೆ"ಯನ್ನು ಘೋಷಿಸಲಾಗಿದೆ. 


COMMERCIAL BREAK
SCROLL TO CONTINUE READING

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 


ರೈತ ಸಮೃದ್ಧಿ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು. ಅವುಗಳೆಂದರೆ... 
>> ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.
>> ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.
>> ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.
>> ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು. 
>> ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.
>> ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸಲು ಈ ಯೋಜನೆ ಅನುಕೂಲಕರವಾಗಿದೆ ಎಂದು ತಿಳಿಸಲಾಗಿದೆ. 


ಇದನ್ನೂ ಓದಿ- Karnataka Budget 2024: ಕೆಸಿ ಜನರಲ್ ಆಸ್ಪತ್ರೆ ನವೀಕರಣ, ಕ್ಯಾನ್ಸರ್ ಚಿಕಿತ್ಸೆಗೆ ಭರಪೂರ ಅನುದಾನ


ಇದಲ್ಲದೆ, ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು. 


ಕೃಷಿ ಭಾಗ್ಯ ಯೋಜನೆ ಮರುಜಾರಿ: 
ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು.   


ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು. 


ಇದನ್ನೂ ಓದಿ- Karnataka Budget 202 : ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್


ನಮ್ಮ ಮಿಲ್ಲೆಟ್ ಹೊಸ ಯೋಜನೆ: 
ನಮ್ಮ ಮಿಲ್ಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಯೋಜನೆಯಡಿಯಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಅಗ್ರಿ-ಟೆಕ್ ಕಂಪನಿಗಳು ಮತ್ತು ರಿಟೇಲ್ ಚೈನ್ಸ್ಗಳ ಸಹಭಾಗಿತ್ವದೊಂದಿಗೆ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು. 


ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ 1,000 ದಂತೆ ಒಟ್ಟು 5,೦೦೦ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು. 


ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ ಆಹಾರ ಸಂಸ್ಕರಣಾ ಆಯುಕ್ತಾಲಯ ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಒಗ್ಗೂಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.