Karnataka Budget 2024:15 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ

Karnataka Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಇಲಾಖೆಯ ಅನುದಾನದಲ್ಲಿ ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.  

Written by - Prashobh Devanahalli | Last Updated : Feb 16, 2024, 11:12 AM IST
  • ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ, ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದರು.
  • ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ 57,000 ರೈತರಿಗೆ ಅನುಕೂಲವಾಗಲಿದೆ.
  • ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 16ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ.
Karnataka Budget 2024:15 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ title=

Latest news on Karnataka state budget 2024:  ಸಹಕಾರ ಇಲಾಖೆಯ ಅನುದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ, ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದರು.

ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;

1. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನಾ ಮಾಡಲಾಗಿತ್ತು. ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು 132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮವಾಗಿ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

2. ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ 57,000 ರೈತರಿಗೆ ಅನುಕೂಲವಾಗಲಿದೆ. ಸುಮಾರು ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿರುವುದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ.
ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಇದನ್ನೂ ಓದಿ: Karnataka Budget 202 : ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್

3. ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 16ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು.

4. ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News