ಪಡಿತರದಾರರಿಗೆ ಬಂಪರ್! ಪ್ರತಿ ತಿಂಗಳೂ ಸಿಗಲಿದೆ 5,000 ರೂ. ಇಂದೇ ಅರ್ಜಿ ಸಲ್ಲಿಸಿ
ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಪ್ರತಿ ತಿಂಗಳು 5,000 ರೂ. ಪಡೆಯಬಹುದಾದ ಯೋಜನೆಗೆ ನೀವೂ ಸಹ ಅರ್ಜಿ ಸಲ್ಲಿಸಬಹುದು. ಈ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Atal Pension Yojana: ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಪ್ರತಿ ತಿಂಗಳು 5,000 ರೂ. ಪಡೆಯಬಹುದಾದ ಯೋಜನೆಗೆ ನೀವೂ ಸಹ ಅರ್ಜಿ ಸಲ್ಲಿಸಬಹುದು. ಈ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
2015ರ ಕೇಂದ್ರ ಬಜೆಟ್‌ನಲ್ಲಿ ಪ್ರಧಾನಿ ಮೋದಿಯವರು ಅಟಲ್ ಪಿಂಚಣಿ ಯೋಜನೆಯನ್ನು ಘೋಷಿಸಿದ್ದರು. ವೃದ್ಧಾಪ್ಯದಲ್ಲಿರುವ ಪುರುಷರು ಮತ್ತು ಮಹಿಳೆಯರಿಗೆ ಆರ್ಥಿಕ ಸಬಲೀಕರಣ ಒದಗಿಸಲು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಇದು ವೃದ್ಧಾಪ್ಯ ವೇತನಕ್ಕಾಗಿ ಕೇಂದ್ರ ಸರ್ಕಾರದ ಖಾತರಿ ಯೋಜನೆಯಾಗಿದೆ. ಇದರಲ್ಲಿ ನೀವು nominal ಪ್ರೀಮಿಯಂ ಪಾವತಿಸಬೇಕಾಗುತ್ತದೆ. ಅಸಂಘಟಿತ ವಲಯದ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಅಂದಹಾಗೆ 2015-16ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿತ್ತು.
ಇದನ್ನೂ ಓದಿ: ರಾಜಧಾನಿ ಶತಾಬ್ದಿ ರೈಲಿನಲ್ಲಿ ಪ್ರಯಾಣಿಸುವ ಯಾತ್ರಿಗಳಿಗೆ ಇನ್ನು ಮುಂದೆ ಸಿಗಲಿದೆ ಈ ಸೌಲಭ್ಯ!
ಈ ಯೋಜನೆಯಲ್ಲಿ ಹೂಡಿಕೆದಾರರು 60 ವರ್ಷ ವಯಸ್ಸಿನಿಂದ ತಿಂಗಳಿಗೆ 1,000/2,000/3,000/4,000 ಅಥವಾ 5,000 ರೂ. ಮೊತ್ತದ ಖಚಿತ ಪಿಂಚಣಿ ಪಡೆಯುತ್ತಾರೆ. ಯಾವುದೇ ಭಾರತೀಯ ನಾಗರಿಕರು ಅಟಲ್ ಪಿಂಚಣಿ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳಾಗಿದ್ದು, ಗರಿಷ್ಠ ವಯಸ್ಸು 40 ವರ್ಷವಾಗಿದೆ. ಪ್ರಧಾನ ಮಂತ್ರಿ ಜನ್-ಧನ್ ಯೋಜನೆಯಡಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಅಥವಾ ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರಬೇಕು.
ಪ್ರತಿ ತಿಂಗಳು ಕನಿಷ್ಠ 1,000 ರಿಂದ 5,000 ರೂ. ಪಿಂಚಣಿ ಪಡೆಯಲು ನೀವು ನಿಯಮಿತವಾಗಿ ಬ್ಯಾಂಕ್‌ನಲ್ಲಿ ಹೂಡಿಕೆ ಮಾಡಬೇಕು. 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು 5,000 ರೂ. ಪಿಂಚಣಿ ಸಿಗುತ್ತದೆ. ನೀವು ಜನ್-ಧನ್ ಯೋಜನೆ ಖಾತೆ ಹೊಂದಿರುವ ಬ್ಯಾಂಕ್‌ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅಥವಾ ನೀವು ಯಾವುದೇ ಭಾರತೀಯ ಅಂಚೆ ಕಚೇರಿಗೆ ಹೋಗಿಯೂ ಅರ್ಜಿ ಸಲ್ಲಿ ಸಬಹುದು. ಗಂಡ ಮತ್ತು ಹೆಂಡತಿ ಇಬ್ಬರೂ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.
ಇದನ್ನೂ ಓದಿ: Railway Rules for Lower Berth: ರೈಲಿನಲ್ಲಿ ಲೋವರ್ ಬರ್ತ್ ಪಡೆಯಲು ಈ ನಿಮಯಗಳನ್ನು ತಿಳಿಯಿರಿ
ಈ ಮೂಲಕ ಪ್ರತಿ ಮನೆಗೆ ಗರಿಷ್ಠ 10 ಸಾವಿರ ರೂ. ಪಿಂಚಣಿ ಸಿಗುತ್ತದೆ. ಸಂಗಾತಿಗಳಲ್ಲಿ ಒಬ್ಬರು ಸಾವನ್ನಪ್ಪಿದರೆ, ಇನ್ನೊಬ್ಬರು ಪಿಂಚಣಿಯ ಪ್ರಯೋಜನಗಳನ್ನು ಪಡೆಯುತ್ತಾರೆ. ಇಬ್ಬರೂ ಮೃತಪಟ್ಟರೆ ಸಂಪೂರ್ಣ ಮೊತ್ತವನ್ನು ನಾಮಿನಿಗೆ ಹಿಂತಿರುಗಿಸಲಾಗುತ್ತದೆ. ಈ ಪಿಂಚಣಿ ಯೋಜನೆಯ ಲಾಭ ಪಡೆಯುವವರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಮತ್ತು ಪಡಿತರ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ನೀವೂ ಸಹ ತಡಮಾಡದೆ ಈ ಪಿಂಚಣಿ ಯೋಜನೆಯ ಪ್ರಯೋಜನ ಪಡೆಯಲು ಖಾತೆ ಹೊಂದಿರುವ ಬ್ಯಾಂಕ್‌ಗೆ ಭೇಟಿ ನೀಡಿ ಹಣ ಹೂಡಿಕೆ ಮಾಡಲು ಶುರು ಮಾಡಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.