ನವದೆಹಲಿ : Petrol Diesel Price : ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರದ ನಡುವೆ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ 28 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗದೆ. ಏಪ್ರಿಲ್ 6 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೊನೆಯದಾಗಿ ೮೦ ಪೈಸೆಯಷ್ಟು ಹೆಚ್ಚಿಸಲಾಗಿತ್ತು.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಯಾಕಾಗಿತ್ತು ? :
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏಪ್ರಿಲ್ 6 ರವರೆಗೆ ನಿರಂತರ ಬದಲಾವಣೆ ಮಾಡಲಾಗಿತ್ತು. ಮಾರ್ಚ್ 22 ಮತ್ತು ಏಪ್ರಿಲ್ 6 ರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ಸುಮಾರು 10 ರೂ.ಯಷ್ಟು ಏರಿಕೆ ಕಂಡಿತ್ತು. ರಷ್ಯಾ-ಉಕ್ರೇನ್ ಯುದ್ಧವೇ ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಬಹುದೊಡ್ಡ ಕಾರಣ ಎನ್ನುತ್ತಾರೆ ತಜ್ಞರು. ಫೆಬ್ರವರಿಯಲ್ಲಿ ಆರಂಭವಾದ ಯುದ್ಧದ ನಂತರ ವಿಶ್ವದಾದ್ಯಂತ ಕಚ್ಚಾ ತೈಲದ ಬೆಲೆ ಏರಿಕೆಯಾಗಿತ್ತು.
ಇದನ್ನೂ ಓದಿ : RBI : ಆರ್‌ಬಿಐ ರೆಪೋ ದರ ಶೇ.0.40 ಹೆಚ್ಚಳ : ಈಗ ಹೆಚ್ಚಾಗಲಿದೆ ನಿಮ್ಮ ಸಾಲದ EMI
ದೇಶದ ಪ್ರಮುಖ ನಗರಗಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ :
ದೆಹಲಿ - ಪೆಟ್ರೋಲ್ 105.41 ರೂ ಮತ್ತು ಡೀಸೆಲ್ ರೂ 96.67 ಪ್ರತಿ ಲೀಟರ್
ಮುಂಬೈ - ಪೆಟ್ರೋಲ್ 120.51 ರೂ ಮತ್ತು ಡೀಸೆಲ್ ರೂ 104.77 ರೂ
ಚೆನೈ - ಪೆಟ್ರೋಲ್ - 110.85 ರೂ. , ಡೀಸೆಲ್ ಲೀಟರ್‌ಗೆ 97.03 ರೂ
ಕೊಲ್ಕತ್ತಾ - ಪೆಟ್ರೋಲ್ - 115.12 ರೂ. , ಡೀಸೆಲ್ ಲೀಟರ್‌ಗೆ 99.83 ರೂ.
ಲಕ್ನೋದಲ್ಲಿ ಪೆಟ್ರೋಲ್ 105.25 ರೂ ಮತ್ತು ಡೀಸೆಲ್ ಲೀಟರ್‌ಗೆ 96.83 ರೂ
ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ 91.45 ರೂ ಮತ್ತು ಡೀಸೆಲ್ ಲೀಟರ್‌ಗೆ ರೂ 85.83
ಪಾಟ್ನಾದಲ್ಲಿ ಪೆಟ್ರೋಲ್ 116.23 ರೂ . ಮತ್ತು ಡೀಸೆಲ್ ಲೀಟರ್‌ಗೆ 101 ರೂ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬೆಲೆಗಳು ಬದಲಾಗುತ್ತವೆ :
ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಜಾರಿಗೆ ಬರುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ಇತರ ಹಲವು ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ.
ಇದನ್ನೂ ಓದಿ : ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಇಲ್ಲಿದೆ ಸುಲಭ ವಿಧಾನ
SMS ಮೂಲಕ ಕೂಡಾ ದರ ಪರಿಶೀಲಿಸಬಹುದು :
ನೀವು ಎಸ್‌ಎಂಎಸ್ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸಹ ತಿಳಿಯಬಹುದು ಇಂಡಿಯನ್ ಆಯಿಲ್ ಗ್ರಾಹಕರು RSP ಅನ್ನು 9224992249 ಸಂಖ್ಯೆಗೆ ಕಳುಹಿಸುವ ಮೂಲಕ ಮತ್ತು BPCL ಗ್ರಾಹಕರು RSP ಅನ್ನು 9223112222 ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಇದೆ ವೇಳೆ, HPCL ಗ್ರಾಹಕರು HPPrice ಅನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.